Home
ಸುದ್ದಿಜಾಲ

ಮೊಟೊರೊಲಾ X50 ಅಲ್ಟ್ರಾ ಫೋನ್‌ ಬಿಡುಗಡೆ; ಹೈ ಎಂಡ್‌ ಕ್ಯಾಮೆರಾ ಸೆನ್ಸಾರ್‌!

ಮೊಟೊರೊಲಾ ಸಂಸ್ಥೆಯು ನೂತನವಾಗಿ ಮೊಟೊರೊಲಾ X50 ಅಲ್ಟ್ರಾ (Motorola X50 Ultra) ಫೋನ್‌ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 8s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಜೊತೆಗೆ ಅಲ್ಯೂಮಿನಿಯಮ್ ಫ್ರೇಮ್‌ ರಚನೆ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಸಂಸ್ಥೆಯು ಮೊಟೊರೊಲಾ X50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರೊಂದಿಗೆ 12GB+256GB, 12GB+512GB ಮತ್ತು 16GB+1TB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ಮೊಟೊರೊಲಾ X50 ಅಲ್ಟ್ರಾ ಫೋನ್‌ ಬಿಡುಗಡೆ; ಹೈ ಎಂಡ್‌ ಕ್ಯಾಮೆರಾ ಸೆನ್ಸಾರ್‌!

ಹಾಗೆಯೇ ಈ ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 50 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ಕೂಡಾ ಪಡೆದಿದೆ. ಹಾಗಾದರೇ ಮೊಟೊರೊಲಾ X50 ಅಲ್ಟ್ರಾ ಫೋನಿನ ಇತರೆ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ X50 ಅಲ್ಟ್ರಾ ಫೀಚರ್ಸ್

ಮೊಟೊರೊಲಾ X50 ಅಲ್ಟ್ರಾ ಮೊಬೈಲ್‌ 6.7 ಇಂಚಿನ 3D ಕರ್ವ್ಡ್‌ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 1220 x 2712 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 2,500 nits ಬ್ರೈಟ್ನೆಸ್‌, 144Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ಮೊಟೊರೊಲಾ X50 ಅಲ್ಟ್ರಾ ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 8s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 12GB+256GB, 12GB+512GB ಮತ್ತು 16GB + 1TB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಮೊಟೊರೊಲಾ X50 ಅಲ್ಟ್ರಾ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್‌ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ.

ಮೊಟೊರೊಲಾ X50 ಅಲ್ಟ್ರಾ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 125W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂಸ್ನಾಪ್‌ಡ್ರಾಗನ್ ಸೌಂಡ್, ಡಾಲ್ಬಿ ಅಟ್ಮಾಸ್ ಮತ್ತು ಡಾಲ್ಬಿ ಹೆಡ್-ಟ್ರ್ಯಾಕಿಂಗ್‌ನೊಂದಿಗೆ ಸ್ಟೀರಿಯೋ ಸ್ಪೀಕರ್‌ ಸೌಲಭ್ಯ ಸಹ ಇವೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಲಭ್ಯ.

ಇನ್ನು ಈ ಫೋನ್ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರ ಆರಂಭಿಕ 12GB+256GB ವೇರಿಯಂಟ್‌ ಚೀನಾದಲ್ಲಿ 3,999 yuan (ಭಾರತದಲ್ಲಿ ಅಂದಾಜು 46,240.38ರೂ ಎನ್ನಲಾಗಿದೆ) ಆಗಿದೆ. ಹಾಗೆಯೇ ಈ ಫೋನ್‌ ಫಾರೆಸ್ಟ್ ಗ್ರೇ, ನಾರ್ಡಿಕ್ ವುಡ್ ಮತ್ತು ಪೀಚ್ ಫಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Motorola X50 Ultra Launched in China with Snapdragon 8s Gen 3 SoC. check Price, offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+