ವ್ಯಾಪಾರಿಯ ಖಾತೆಯಿಂದ 1.86 ಕೋಟಿ ಕಳುವಾಗಿದನ್ನು ನೋಡಿ ಬೆಚ್ಚಿಬಿದ್ದ ಪೊಲೀಸರು!!

|

'+44' ಕೋಡ್‌ನಿಂದ ಶುರುವಾಗುವ ಮೊಬೈಲ್‌ ನಂಬರ್‌ನಿಂದ ಮುಂಬಯಿ ಮೂಲದ ಜವಳಿ ವ್ಯಾಪಾರಿಯೋರ್ವರ ಮೊಬೈಲ್‌ಗೆ ಸತತ ಆರು ಮೊಬೈಲ್‌ ಕರೆಗಳು ಬಂದಿದ್ದವು. ಇದಾದ ಕೆಲವೇ ಸಮಯದ ನಂತರದಲ್ಲಿ ಆ ವ್ಯಾಪಾರಿಯ ಸಿಮ್ ಕಾರ್ಡ್‌ ಹ್ಯಾಕ್ ಮಾರುವ ವಂಚಕರು, ಅವರ 14 ಖಾತೆಯಿಂದ 1.86 ಕೋಟಿ ರೂ. ಹಣವನ್ನು ಕಳವು ಮಾಡಿದ್ದಾರೆ ಎಂಬ ಭಯಾನಕ ಸುದ್ದಿ ವರದಿಯಾಗಿದೆ.

ಹೌದು, ಇಂತಹದೊಂದು ಶಾಕಿಂಗ್ ಸುದ್ದಿಯನ್ನು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದು, ಸೆಂಟ್ರಲ್ ಮುಂಬೈಯ ಮಹೀಮ್ ಎಂಬುವವರು ಹ್ಯಾಕರ್‌ಗಳ ವಂಚನೆಗೆ ಬಲಿಯಾಗಿದ್ದಾರೆ. ಬಿ.ಕೆ.ಸಿ ಸೈಬರ್ ಪೊಲೀಸ್ ಠಾಣೆಗೆ ಅವರು ಶುಕ್ರವಾರ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಭಯಾನಕ ಸೈಬರ್ ಪ್ರಕರಣ 'ಸಿಮ್ ಸ್ವಾಪ್‌' ಆಗಿರಬಹುದು ಎಂದು ಬಿ.ಕೆ.ಸಿ ಸೈಬರ್ ಪೊಲೀಸರು ತಿಳಿಸಿದ್ದಾರೆ.

ವ್ಯಾಪಾರಿಯ ಖಾತೆಯಿಂದ 1.86 ಕೋಟಿ ಕಳುವಾಗಿದನ್ನು ನೋಡಿ ಬೆಚ್ಚಿಬಿದ್ದ ಪೊಲೀಸರು!!

ಜವಳಿ ವ್ಯಾಪಾರಿಯಾದ ಮಹೀಮ್ ಅವರ ಒಟ್ಟು 1.86 ಕೋಟಿ ಹಣವನ್ನು ಹ್ಯಾಕರ್‌ಗಳು ದೆಹಲಿ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಉತ್ತರ ರಾಜ್ಯಗಳ ವಿವಿಧ ಬ್ಯಾಂಕುಗಳ 24 ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರ್ಟಿಜಿಎಸ್ / ಎನ್ಇಎಫ್ಟಿ ಮೂಲಕ ಹಣವನ್ನು ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗಾದರೆ, ಏನಿದು ಭಯಾನಕ ಸಿಮ್‌ಸ್ವಾಪ್ ಹಗರಣ ಎಂಬುದನ್ನು ಮುಂದೆ ಓದಿ ತಿಳಿಯಿರಿ.

ಏನಿದು 'ಸಿಮ್ ಸ್ವ್ಯಾಪ್' '?

ಏನಿದು 'ಸಿಮ್ ಸ್ವ್ಯಾಪ್' '?

'ಸಿಮ್ ಸ್ವ್ಯಾಪ್' ಎಂದರೇ, 'ನಿಮ್ಮ ಬಳಿ ಈಗಾಗಲೇ ಇರುವ ಫೋನ್‌ ನಂಬರ್‌ ಅನ್ನು ಹೊಸ ಸಿಮ್ ಕಾರ್ಡ್‌ಗೆ ನೋಂದಣಿ ಮಾಡಿಸುವುದು' ಎಂದರ್ಥ. ಈ ಕೆಲಸವನ್ನು ನೀವೇ ಮಾಡಿದ್ದರೆ ಯಾವ ತೊಂದರೆಯಿಲ್ಲ. ಆದರೆ, ನಿಮ್ಮ ಮಾಹಿತಿಯನ್ನು ಕದ್ದಿರುವ ಅಪರಿಚಿತರು ಈ ಕೆಲಸ ಮಾಡಿದರೆ ನಿಮ್ಮ ಬ್ಯಾಂಕ್ ಖಾತೆ ಕ್ಷಣಾರ್ಧದಲ್ಲಿ ಖಾಲಿಯಾಗುವ ಹಗರಣ ಇದಾಗಿದೆ.!

ಏನಿದು ಸಿಮ್ ಸ್ವ್ಯಾಪ್ ಹಗರಣ?

ಏನಿದು ಸಿಮ್ ಸ್ವ್ಯಾಪ್ ಹಗರಣ?

ಸಿಮ್ ಬಳಸಿಕೊಂಡು ನಡೆಯುತ್ತಿರುವ ಮೊಬೈಲ್ ವಾಲೆಟ್ ಸೇವೆ ಹೆಚ್ಚು ಬಳಕೆಗೆ ಬಂದ ನಂತರ ಸೈಬರ್ ಕ್ರಿಮಿನಲ್‌ಗಳು ಈಗ ಸಿಮ್ ಅನ್ನು ಸಹ ನಕಲು ಮಾಡಹೊರಟಿದ್ದಾರೆ. ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿಯನ್ನು ಹೇಗಾದರೂ ಪಡೆದುಕೊಂಡಿರುವ ಅವರಿಗೆ ಬೇಕಾಗಿರುವುದು ಒಟಿಪಿ ಮಾತ್ರ. ಅದಕ್ಕಾಗಿಯೇ ನಡೆಯುತ್ತಿರುವುದು 'ಸಿಮ್ ಸ್ವ್ಯಾಪ್' ಹಗರಣ.

'ಸಿಮ್ ಸ್ವ್ಯಾಪ್'ನ ಹೆಜ್ಜೆಗಳು!

'ಸಿಮ್ ಸ್ವ್ಯಾಪ್'ನ ಹೆಜ್ಜೆಗಳು!

ನಿಮ್ಮ ಫೋನ್ ನಂಬರ್ ಅನ್ನು ಬ್ಲಾಕ್ ಮಾಡಿ, ಅದೇ ನಂಬರ್‌ನ ಹೊಸ ಸಿಮ್ ಖರೀದಿಸುವುದು ವಂಚಕರ ಮೊದಲ ಹೆಜ್ಜೆಯಾಗಿರುತ್ತದೆ. ಅದಕ್ಕಾಗಿ ಅವರು ನಿಮ್ಮ ದಾಖಲೆಗಳನ್ನು ಹುಡುಕಬಹುದು ಅಥವಾ ನಿಮ್ಮಿಂದಲೇ ಸಿಮ್ ಅನ್ನು ಅವರು ನಕಲಿಸಿಕೊಳ್ಳಬಹುದು. ಈ ಎರಡೂ ರೀತಿಯಿಂದಲೂ ಅವರು ನಿಮ್ಮನ್ನು ಕ್ಷಣಾರ್ಧದಲ್ಲಿ ಮೋಸಗೊಳಿಸಬಹುದು.

ವಿಶಿಷ್ಟ 20 ಡಿಜಿಟ್ ನಂಬರ್‌

ವಿಶಿಷ್ಟ 20 ಡಿಜಿಟ್ ನಂಬರ್‌

ಕಾಲ್‌ಡ್ರಾಫ್ಸ್ ಸೇರಿದಂತೆ ಕರೆ ಸೇವೆಯವನ್ನು ಮತ್ತಷ್ಟು ಸುಲಭಗೊಳಿಸುತ್ತೇವೆ ಎಂದು ನಿಮಗೊಂದು ಕರೆ ಬರುತ್ತದೆ. ಕಸ್ಟಮರ್ ಕೇರ್‌ ಸೂಗಿನಲ್ಲಿ ಕರೆ ಮಾಡುವ ಇವರು ಕರೆ ಮಾಡುವುದೇ ನಿಮ್ಮ ಸಿಮ್ ಹಿಂಬದಿಯ ನಂಬರ್‌ ಯಾವುದೆಂದು ತಿಳಿದುಕೊಳ್ಳಲು. ಒಮ್ಮೆ ನೀವು ಅವರ ಆದೇಶವನ್ನು ಚಾಚು ತಪ್ಪದೆ ಪಾಲಿಸಿದರೆ ನಿಮ್ಮ ಬ್ಯಾಂಕ್ ಅಂಕೌಂಟ್ ಖಾಲಿ ಖಾಲಿ.!

ಒಂದನ್ನು ಪ್ರೆಸ್‌ ಮಾಡಲು ಹೇಳುತ್ತಾರೆ!

ಒಂದನ್ನು ಪ್ರೆಸ್‌ ಮಾಡಲು ಹೇಳುತ್ತಾರೆ!

ನಿಮ್ಮ ಸಿಮ್‌ನ 20 ಡಿಜಿಟ್ ಸಂಖ್ಯೆ ಪಡೆದ ವಂಚಕ, ಅಧಿಕೃತವಾಗಿಹೊಸ ಸಿಮ್ ಪಡೆಯಲು ಮುಂದಾಗುತ್ತಾನೆ. ಆಗ, ನಿಮ್ಮ ಫೋನ್‌ಗೆ ಟೆಲಿಕಾಂ ಕಂಪೆನಿಯಿಂದ ಕನ್ಫರ್ಮೇಷನ್ ಎಸ್‌ಎಂಎಸ್‌ ಬರುತ್ತದೆ. ಆಗ ವಂಚಕ, ನಿಮಗೆ ಕರೆ ಮಾಡಿ ಒಂದನ್ನು ಪ್ರೆಸ್‌ ಮಾಡಲು ಸೂಚಿಸುತ್ತಾನೆ. ನೀವು ಒತ್ತಿದರೆ, ನಿಮ್ಮ ಸಿಮ್ ಬ್ಲಾಕ್ ಆಗಿ ಅವನ ಬಳಿ ನಿಮ್ಮ ಸಿಮ್ ಇರುತ್ತದೆ.

ಹಣ ಹೇಗೆ ಕಳೆದುಕೊಳ್ಳುತ್ತೀರಾ?

ಹಣ ಹೇಗೆ ಕಳೆದುಕೊಳ್ಳುತ್ತೀರಾ?

ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿಯನ್ನು ಪಡೆದ ವಂಚಕರು ಎಟಿಎಂ ಕಾರ್ಡ್‌ನಲ್ಲಿರುವ "ಸಿವಿವಿ" ನಂಬರ್ ಮೂಲಕ ಆನ್‌ಲೈನ್ ವ್ಯವಹಾರ ಮಾಡುತ್ತಾರೆ. ಈಗ ಸಿವಿವಿ ನಂಬರ್ ಮತ್ತು ಮೊಬೈಲ್ ಒಟಿಪಿ ಇದ್ದರೆ ಆನ್‌ಲೈನಿನಲ್ಲಿ ಹಣ ವರ್ಗಾವಣೆ ಕ್ಷಣಾರ್ಧದಲ್ಲಿ ನಡೆಯುತ್ತದೆ. ಈ ಎರಡು ಮಾಹಿತಿಗಳನ್ನು ನಿಮ್ಮಿಂದ ಪಡೆದ ಅವರು ನಿಮ್ಮ ಹಣ ದೋಚುತ್ತಾರೆ.

ಎಟಿಎಂ ಕಾರ್ಡ್ ಮಾಹಿತಿ ಅವರಿಗೆ ಸಿಗುವುದು ಹೇಗೆ?

ಎಟಿಎಂ ಕಾರ್ಡ್ ಮಾಹಿತಿ ಅವರಿಗೆ ಸಿಗುವುದು ಹೇಗೆ?

ನಕಲಿ ವೆಬ್‌ಸೈಟ್‌ ಅನ್ನು ತೆರೆಯುವ ಕ್ರಿಮಿನಲ್‌ಗಳು ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಮೂಲಕ ಪಾವತಿ ಮಾಡಲು ಪ್ರೇರೇಪಿಸುತ್ತಾರೆ. ಒಮ್ಮೆ ವ್ಯವಹಾರ ನಡೆದರೆ ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿ ಪಡೆಯುತ್ತಾರೆ. ಅಥವಾ ಕರೆ ಮಾಡಿ ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ, ತೆರೆಯಲು ಕಾರ್ಡ್ ಮಾಹಿತಿ ನೀಡಿ ಎಂದು ಹೇಳುತ್ತಾರೆ.

ಟೆಲಿಕಾಂ ಕಂಪನಿಯ ಪ್ರತಿನಿಧಿ

ಟೆಲಿಕಾಂ ಕಂಪನಿಯ ಪ್ರತಿನಿಧಿ

ವಂಚಕರು ಟೆಲಿಕಾಂ ಕಂಪನಿಯ ಪ್ರತಿನಿಧಿಗಳೆಂದು ಹೇಳಿಕೊಂಡು ನಿಮಗೆ ಕರೆ ಮಾಡುತ್ತಾರೆ. ಕಾಲ್‌ ಡ್ರಾಪ್‌ ಪ್ಲಾಬ್ಲೆಮ್ ಅಥವಾ ಸಿಗ್ನಲ್‌ ಪ್ರಾಬ್ಲೆಮ್ ಸರಿಪಡಿಸಲು ಕಾಲ್‌ ಮಾಡುತ್ತಿರುವುದಾಗಿ ಹೇಳುತ್ತಾರೆ. ಅಥವಾ 4ಜಿ ಸಿಮ್ ಕಾರ್ಡ್‌ಗೆ ಬದಲಾಗಲು ನಿಮ್ಮ ಸಿಮ್ ಸಂಖ್ಯೆ ನೀಡಲು ಕೇಳುತ್ತಾರೆ. ಇಂತಹ ಕರೆಗಳನ್ನು ನಂಬಬೇಡಿ.

ಸಿಮ್ ತೆಗೆದಿಟ್ಟುಕೊಳ್ಳಿ!

ಸಿಮ್ ತೆಗೆದಿಟ್ಟುಕೊಳ್ಳಿ!

ಕ್ರೆಡಿಟ್ ಕಾರ್ಡ್- ಡೆಬಿಟ್ ಕಾರ್ಡುಗಳನ್ನು ಜೋಪಾನವಾಗಿ ಇಟ್ಟುಕೊಳ್ಳುವಂತೆ, ನಾವು ಬಳಸುವ ಸಿಮ್ ಬಗೆಗೂ ಅಷ್ಟೇ ಎಚ್ಚರಿಕೆ ವಹಿಸುವುದು ಒಳ್ಳೆಯದು. ಸಿಮ್ ಅನ್ನು ಮೊಬೈಲಿನಿಂದ ಹೊರತೆಗೆದಾಗ ಅದನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟಿರುವುದು ಮತ್ತು ಮೊಬೈಲ್ ಫೋನನ್ನು ರಿಪೇರಿಗೆಂದು ಕೊಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಸಿಮ್ ತೆಗೆದಿಟ್ಟುಕೊಳ್ಳುವುದು ಅಪೇಕ್ಷಣೀಯ. ಈ ಮೂಲಕ ನಮ್ಮ ಸಿಮ್ ಮಾಹಿತಿಯನ್ನು ಬೇರೊಬ್ಬರು ನಕಲಿಸಿ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಬಹುದು.

ಪಾರಾಗುವುದು ಸಾಧ್ಯವಿದೆ!

ಪಾರಾಗುವುದು ಸಾಧ್ಯವಿದೆ!

ಮೊಬೈಲ್‌ನ ಎಲ್ಲಾ ಚಟುವಟಿಕೆಗಳ ಬಗ್ಗೆ ನಿಗಾವಹಿಸುವ ಮೂಲಕ ಇಂತಹ ಹಗರಣದಿಂದ ಪಾರಾಗುವುದು ಸಾಧ್ಯ. ಯಾವುದೇ ಸಂದರ್ಭದಲ್ಲಿ ನಮ್ಮ ಸಂಪರ್ಕ ಸ್ಥಗಿತವಾದರೆ, ಬಿಲ್‌ನಲ್ಲಿ ಅಪರಿಚಿತ ಚಟುವಟಿಕೆಗಳು ಕಾಣಿಸಿಕೊಂಡರೆ ತಕ್ಷಣವೇ ಮೊಬೈಲ್ ಟೆಲಿಕಾಂ ಕಂಪೆನಿ ಸಂಪರ್ಕಿಸಿ ಸಿಮ್ ಬ್ಲಾಕ್ ಮಾಡಿಸಿ. ಮತ್ತು ಎಟಿಎಂ ಅನ್ನು ಸಹ ಬ್ಲಾಕ್ ಮಾಡಿಬಿಡಿ.

ಸಿಮ್ ಸ್ವ್ಯಾಪ್ ಅನ್ನು ನೀವು ಮಾಡಿರುತ್ತೀರಿ!

ಸಿಮ್ ಸ್ವ್ಯಾಪ್ ಅನ್ನು ನೀವು ಮಾಡಿರುತ್ತೀರಿ!

ಹಾಗೆ ನೋಡಿದರೆ, ಮೇಲೆ ಹೇಳಿದ ಸಿಮ್ ಸ್ವ್ಯಾಪ್ ಎಂದರೆ ಹಗರಣ ಎಂದು ತಿಳಿಯುತ್ತಿರಲಿಲ್ಲ. ನೀವು 2ಜಿಯಿಂದ 3ಜಿ ಅಥವಾ 4ಜಿ ಸಿಮ್‌ ಬದಲಾಯಿಸಿಕೊಂಡಿದ್ದನ್ನು ಸಹ ಸಿಮ್ ಸ್ವ್ಯಾಪ್ ಎಂದು ಕರೆಯುತ್ತಾರೆ. ಆದರೆ, ಇಲ್ಲಿ ವಂಚಕರು ನಿಮ್ಮ ಸಿಮ್ ಅನ್ನು ಸ್ವ್ಯಾಪ್ ಮಾಡುತ್ತಿರುವುದಕ್ಕೆ ಇದು ಸಿಮ್ ಸ್ವ್ಯಾಪ್ ಹಗರಣ ಎಂದು ಬದಲಾಗಿದೆ.

Best Mobiles in India

English summary
The police suspect the accused persons got access to the businessman's unique SIM number and initiated a SIM swap and then moved his money to other bank accounts through multiple transactions, he said. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X