Home
ಸುದ್ದಿಜಾಲ

ಹಾನರ್ ಮ್ಯಾಜಿಕ್ 6 ಪ್ರೊ ಫೋನ್‌ ಎಂಟ್ರಿಗೆ ಟೆಕ್‌ ವಲಯದಲ್ಲಿ ಭಾರಿ ಕಂಪನ!

ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC) 2024 ಈವೆಂಟ್ ಶುರುವಿನಲ್ಲಿಯೇ ಜನಪ್ರಿಯ ಬ್ರ್ಯಾಂಡ್‌ಗಳ ಹಲವು ಡಿವೈಸ್‌ಗಳು ಅನಾವರಣಗೊಂಡಿವೆ. ಇದೀಗ ಹಾನರ್‌ ಕಂಪೆನಿ ಕೂಡ ತನ್ನ ಬಹುನಿರೀಕ್ಷಿತ ಹಾನರ್ ಮ್ಯಾಜಿಕ್ 6 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ.

ಹೌದು, ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಆಂಡ್ರಾಯ್ಡ್‌ 13 ಆಧಾರಿತ MagicOS 7.2 ಇಂಟರ್‌ಫೇಸ್‌ನೊಂದಿಗೆ ರನ್‌ ಆಗಲಿವೆ. ಹಾಗಾದ್ರೆ ಹಾನರ್ ಮ್ಯಾಜಿಕ್ 6 ಪ್ರೊ ಫೋನ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಮ್ಯಾಜಿಕ್ 6 ಪ್ರೊ ಫೋನ್‌ ಎಂಟ್ರಿಗೆ ಟೆಕ್‌ ವಲಯದಲ್ಲಿ ಭಾರಿ ಕಂಪನ!

ಹಾನರ್ ಮ್ಯಾಜಿಕ್ 6 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್ ಮ್ಯಾಜಿಕ್ 6 ಪ್ರೊ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,264x2,800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ 1Hz ನಿಂದ 120Hz ವರೆಗಿನ ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ.

ಹಾನರ್ ಮ್ಯಾಜಿಕ್ 6 ಪ್ರೊ ಪ್ರೊಸೆಸರ್‌ ಯಾವುದು?
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ 4nm ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು Android 14 ಆಧಾರಿತ MagicOS 8.0 ಇಂಟರ್‌ಫೇಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 12GB RAM + 512GB ಹಾಗೂ 16GB RAM ಮತ್ತು 1TB ಸ್ಟೋರೇಜ್‌ನೊಂದಿಗೆ ಬರಲಿದೆ.

ಹಾನರ್ ಮ್ಯಾಜಿಕ್ 6 ಪ್ರೊ ಫೋನ್‌ ಎಂಟ್ರಿಗೆ ಟೆಕ್‌ ವಲಯದಲ್ಲಿ ಭಾರಿ ಕಂಪನ!

ಹಾನರ್ ಮ್ಯಾಜಿಕ್ 6 ಪ್ರೊ ಕ್ಯಾಮೆರಾ ಸೆಟಪ್‌
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 180 ಮೆಗಾಪಿಕ್ಸೆಲ್‌ ಪೆರಿಸ್ಕೋಪ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಸುರಕ್ಷಿತ ಫೇಸ್ ಅನ್‌ಲಾಕ್‌ಗಾಗಿ DoF ಅನ್ನು ಸಹ ಹೊಂದಿದೆ.

ಹಾನರ್ ಮ್ಯಾಜಿಕ್ 6 ಪ್ರೊ ಬ್ಯಾಟರಿ ಮತ್ತು ಇತರೆ
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ 5,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೈರ್ಡ್ ಚಾರ್ಜಿಂಗ್ ಮತ್ತು 66W ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 5G, Wi-Fi 802.11 a/b/g/n/ac/ax/be, ಬ್ಲೂಟೂತ್, GPS/AGPS, ಗೆಲಿಲಿಯೋ, ಗ್ಲೋನಾಸ್, ಬೀಡೌ, NFC, OTG, ಮತ್ತು USB ಟೈಪ್- ಸಿ ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್, ಗ್ರಾವಿಟಿ ಸೆನ್ಸರ್, ಕಲರ್ ಟೆಂಪರೇಚರ್ ಸೆನ್ಸರ್, ಅಂಡ್ ಪ್ರಾಕ್ಸಿಮಿಟಿ ಸೆನ್ಸರ್ ಅನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 6 ಪ್ರೊ ಬೆಲೆ ಮತ್ತು ಲಭ್ಯತೆ
Honor Magic 6 Pro ಸ್ಮಾರ್ಟ್‌ಫೋನ್‌ 12GB RAM + 512GB ಸ್ಟೋರೇಜ್ ರೂಪಾಂತರದ ಆಯ್ಕೆಗೆ EUR 1,299 (ಸುಮಾರು 1,16,600ರೂ)ಬೆಲೆಯನ್ನು ಹೊಂದಿದೆ. ಇದು ಫೆಬ್ರವರಿ 25 ರಿಂದ ಮುಂಗಡ-ಆರ್ಡರ್‌ಗಳಿಗೆ ಲಭ್ಯವಿರಲಿದ್ದು, ಮಾರ್ಚ್ 1 ರಿಂದ ಮಾರಾಟಕ್ಕೆ ಬರಲಿದೆ.

Best Mobiles in India

English summary
MWC 2024: Honor Magic 6 Pro Smartphone launched globally: Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+