Home
ಸುದ್ದಿಜಾಲ

ದೈನಂದಿನ ಡೇಟಾ ಸಾಲುತ್ತಿಲ್ಲವೇ?..ಹಾಗಿದ್ರೆ ನಿಮಗೆ ಇವೇ ಅತ್ಯುತ್ತಮ ಪ್ಲ್ಯಾನ್‌!

ಪ್ರಸ್ತುತ ಬಳಕೆದಾರರು ಸ್ಮಾರ್ಟ್‌ಫೋನಿನಲ್ಲಿ ಅನೇಕ ಆನ್‌ಲೈನ್ ಕೆಲಸಗಳನ್ನು ಮತ್ತು ಆಪ್‌ಗಳನ್ನು ಬಳಕೆ ಮಾಡುತ್ತಾರೆ. ಹೀಗಾಗಿ ದೈನಂದಿನ ಡೇಟಾ ಕೆಲವೊಮ್ಮೆ ಸಾಲುತ್ತಿಲ್ಲ ಎನಿಸುತ್ತದೆ. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವೊಡಾಪೋನ್ ಟೆಲಿಕಾಂಗಳು ಬಳಕೆದಾರರ ಅಧಿಕ ಡೇಟಾ ಸೌಲಭ್ಯದ ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಪ್ರತಿದಿನ ಡೇಟಾ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ವಾಯಿಸ್‌ ಕರೆ ಹಾಗೂ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ.

ಚಂದಾದಾರರು

ಹೌದು, ಪ್ರತಿದಿನ ಡೇಟಾ ಪ್ರಯೋಜನದ ಯೋಜನೆಗಳಿಗೆ ಡಿಮ್ಯಾಂಡ್‌ ಹೆಚ್ಚು. ಇನ್ನು ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳು ಗ್ರಾಹಕರನ್ನು ಸೆಳೆಯುತ್ತವೆ. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳು ಪ್ರತಿದಿನ 2GB ಮತ್ತು 3GB ಡೇಟಾ ಪ್ರಯೋಜನಗಳ ಪ್ಲ್ಯಾನ್‌ಗಳ ಲಿಸ್ಟ್‌ ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 2GB ಬಯಸಿದರೇ, ಮತ್ತೆ ಕೆಲವು ಬಳಕೆದಾರರಿಗೆ ಅದಕ್ಕೂ ಹೆಚ್ಚಿನ ಡೇಟಾ ಯೋಜನೆಗಳತ್ತ ಮುಖ ಮಾಡುತ್ತಾರೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಪ್ರತಿದಿನ 2GB ಡೇಟಾ ಮತ್ತು 3GB ಡೇಟಾ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಅನಿಯಮಿತ ಕರೆಯ ಸೌಲಭ್ಯ ಪಡೆದಿದೆ.

ಏರ್‌ಟೆಲ್ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 449ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವೊಡಾಫೋನಿನ 699ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್‌ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯವಾಗಲಿದೆ.

Best Mobiles in India

English summary
Need More Daily Data? These Prepaid Plans Are Best To Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+