Just In
- 4 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 6 hrs ago
Tech News of this Week; ಈ ವಾರ ಟೆಕ್ ವಲಯದಲ್ಲಿ ಜರುಗಿದ ಘಟನೆಗಳೇನು?, ಇಲ್ಲಿದೆ ವಿವರ!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Sports
U-19 Women's T20 World Cup Final 2023: ಇಂಗ್ಲೆಂಡ್ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಭಾರತ ವನಿತೆಯರು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Movies
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬಿಡುಗಡೆಗೂ ಮುನ್ನವೇ ಸೌಂಡ್ ಮಾಡ್ತಿದೆ ಈ ವಾಚ್!..ಅಂತಹದ್ದೇನಿದೆ ಇದರಲ್ಲಿ!
ನಾಯ್ಸ್ ಕಂಪೆನಿಯ ಪ್ರಾಡಕ್ಟ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಡಿಮ್ಯಾಂಡ್ ಇದೆ. ಇದಕ್ಕೆ ತಕ್ಕಂತೆ ನಾಯ್ಸ್ ಕಂಪೆನಿ ಕೂಡ ಈಗಾಗಲೇ ಹಲವು ಸ್ಮಾರ್ಟ್‌ವಾಚ್, ಆಡಿಯೋ ಆಕ್ಸಿಸರೀಸ್ ಸೇರಿದಂತೆ ಅನೇಕ ಡಿವೈಸ್‌ಗಳನ್ನು ಪರಿಚಯಿಸಿದೆ. ಇದೀಗ ಹೊಸ ನಾಯ್ಸ್ ಕಲರ್‌ಫಿಟ್ ಪ್ರೊ 4 ಆಲ್ಫಾ ಸ್ಮಾರ್ಟ್‌ವಾಚ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ವಾಚ್ ಭಾರತದಲ್ಲಿ ಇದೇ ಡಿಸೆಂಬರ್ 16 ರಂದು ಬಿಡುಗಡೆಯಾಗೋದು ಪಕ್ಕಾ ಆಗಿದೆ.

ಹೌದು, ನಾಯ್ಸ್ ಕಂಪೆನಿ ಹೊಸ ನಾಯ್ಸ್ ಕಲರ್‌ಫಿಟ್ ಪ್ರೊ 4 ಆಲ್ಫಾ ಸ್ಮಾರ್ಟ್‌ವಾಚ್ ಲಾಂಚ್ ಮಾಡಲು ಸಿದ್ದತೆ ನಡೆಸಿದೆ. ಇದು 60hz ರಿಫ್ರೆಶ್ ರೇಟ್ ಬೆಂಬಲಿಸುವ 1.78 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ ಸಿಂಗಲ್ ಟ್ಯಾಪ್-ಟು-ವೇಕ್ ಆಯ್ಕೆಯೊಂದಿಗೆ ಬರುತ್ತದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ವಾಚ್‌ನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಾಯ್ಸ್ ಕಲರ್‌ಫಿಟ್ ಪ್ರೊ 4 ಆಲ್ಫಾ ಸ್ಮಾರ್ಟ್‌ವಾಚ್ 1.78 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 368 x 448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಈ ಡಿಸ್‌ಪ್ಲೇ ಆಲ್‌ವೇಸ್ ಆನ್ ಡಿಸ್‌ಪ್ಲೇ ಪಂಕ್ಷನ್ ಬೆಂಬಲಿಸಲಿದೆ. ಜೊತೆಗೆ ಈ ಡಿಸ್‌ಪ್ಲೇ 2.5D ಕರ್ವ್ಡ್ ಗ್ಲಾಸ್ ಹೊಂದಿರಲಿದೆ. ಇನ್ನು ಈ ಸ್ಕ್ರೀನ್ 60Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ಹೇಳಲಾಗಿದೆ.

ನಾಯ್ಸ್ ಕಲರ್‌ಫಿಟ್ ಪ್ರೊ 4 ಆಲ್ಫಾ ಸ್ಮಾರ್ಟ್‌ವಾಚ್ ಆಪಲ್ ವಾಚ್ ಅನ್ನು ಹೋಲುವ ಸ್ಕ್ವೇರ್ ಡಯಲ್ ಅನ್ನು ಹೊಂದಿರುತ್ತದೆ ಎನ್ನಲಾಗಿದೆ. ಈ ಸ್ಮಾರ್ಟ್‌ವಾಚ್ ಬಲಭಾಗದಲ್ಲಿ ಪಿಸಿಕಲ್ ಬಟಲ್ ಅನ್ನು ಹೊಂದಿದೆ. ಇದರಿಂದ ಸ್ಮಾರ್ಟ್‌ವಾಚ್ ಅನ್ನು ಕಂಟ್ರೋಲ್ ಮಾಡಬಹುದಾಗಿದೆ. ಈ ಸ್ಮಾರ್ಟ್ ವಾಚ್ ಬ್ಲೂಟೂತ್ ಕಾಲ್ ಅನ್ನು ಬೆಂಬಲಿಸಲಿದೆ. ಇದಕ್ಕಾಗಿ ಬ್ಲೂಟೂತ್ 5.3 ಹೊಂದಿದ್ದು, ಟ್ರೂ ಸಿಂಕ್ ಟೆಕ್ನಾಲಜಿಯನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಇನ್ನು ಈ ಸ್ಮಾರ್ಟ್‌ವಾಚ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಕೇವಲ 30 ನಿಮಿಷಗಳಲ್ಲಿ 0% ದಿಂದ 50% ಚಾರ್ಜಿಂಗ್ ಮಾಡಲಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ ಏಳು ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಳಕೆದಾರರು ತಮ್ಮ ಅಂಗೈಗಳನ್ನು ಸ್ಕ್ರೀನ್ ಮೇಲೆ ಇರಿಸುವ ಮೂಲಕ ವಾಚ್‌ನ ಡಿಸ್‌ಪ್ಲೇಯನ್ನು ಆಫ್ ಮಾಡಲು ಅನುಮತಿಸಲಿದೆ. ಜೊತೆಗೆ, ಇದು ಒಂದೇ ಟ್ಯಾಪ್-ಟು-ವೇಕ್ ಆಯ್ಕೆಯೊಂದಿಗೆ ಬರುತ್ತದೆ.

ನಾಯ್ಸ್ ಕಲರ್‌ಫಿಟ್ ಪ್ರೊ 4 ಆಲ್ಫಾ ಸ್ಮಾರ್ಟ್‌ವಾಚ್ ಭಾರತದಲ್ಲಿ ಇದೇ ಡಿಸೆಂಬರ್ 16 ರಂದು ಬಿಡುಗಡೆಯಾಗಿದೆ. ಆದರೆ ಇದರ ಬೆಲೆಯ ವಿವರವನ್ನು ಇನ್ನು ಬಹಿರಂಗಪಡಿಸಿಲ್ಲ. ಈ ಸ್ಮಾರ್ಟ್‌ವಾಚ್ ಅಮೆಜಾನ್ ಮತ್ತು ಗೋನಾಯ್ಸ್ ನ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಸಬಹುದಾಗಿದೆ. ಇದನ್ನು ಕೈ ಗೆಟಕುವ ಬೆಲೆಯಲ್ಲಿ ನಿರೀಕ್ಷಿಸಲಾಗಿದೆ.

ಇದಲ್ಲದೆ, ನಾಯ್ಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ನಾಯ್ಸ್ ಕಲರ್‌ಫಿಟ್ ಲೂಪ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್ 1.85 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 284 x 240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 550 ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದು 200 ಕ್ಕೂ ಹೆಚ್ಚು ಕಸ್ಟಮೈಸ್ ಮಾಡಿದ ವಾಚ್ ಫೇಸ್‌ಗಳನ್ನು ಹೊಂದಿದ್ದು, 390mAh ಬ್ಯಾಟರಿಯನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ IP68-ರೇಟೆಡ್ ಧೂಳು ಮತ್ತು ನೀರು ನಿರೋಧಕವನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470