Home
ಸುದ್ದಿಜಾಲ

ನಾಯ್ಸ್‌ ಕಂಪೆನಿಯಿಂದ ಅಚ್ಚರಿಯ ಸ್ಮಾರ್ಟ್‌ವಾಚ್‌ ಬಿಡುಗಡೆ! ವಾವ್ಹ್‌ ಎನಿಸುವ ಫೀಚರ್ಸ್‌!

ನಾಯ್ಸ್‌ ಸಂಸ್ಥೆ ಭಾರತದ ಜನಪ್ರಿಯ ಸ್ಮಾರ್ಟ್‌ವಾಚ್‌ ತಯಾರಕ ಕಂಪೆನಿ ಎನಿಸಿಕೊಂಡಿದೆ. ಬಜೆಟ್‌ ಬೆಲೆಯಲ್ಲಿ ಅತ್ಯಾಕರ್ಷಕ ಸ್ಮಾರ್ಟ್‌ವಾಚ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಮತ್ತೊಂದು ಹೊಸ ನಾಯ್ಸ್‌ಫಿಟ್ ಕ್ರ್ಯೂ ಸ್ಮಾರ್ಟ್‌ವಾಚ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್‌ ವಿವಿಧ ಫಿಟ್‌ನೆಸ್ ಟ್ರ್ಯಾಕಿಂಗ್ ಮತ್ತು ಕಸ್ಟಮೈಸೇಶನ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಜೊತೆಗೆ ಸಿಂಗಲ್‌ ಚಾರ್ಜ್‌ನಲ್ಲಿ ಏಳು ದಿನಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ ಎಂದು ನಾಯ್ಸ್‌ ಕಂಪೆನಿ ಹೇಳಿಕೊಂಡಿದೆ.

ನಾಯ್ಸ್‌ ಕಂಪೆನಿಯಿಂದ ಅಚ್ಚರಿಯ ಸ್ಮಾರ್ಟ್‌ವಾಚ್‌ ಬಿಡುಗಡೆ!

ಹೌದು, ನಾಯ್ಸ್‌ ಕಂಪೆನಿ ಹೊಸದಾಗಿ ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ವಾಚ್‌ ಮೂಲಕವೇ ನಿಮ್ಮ ಸ್ಮಾರ್ಟ್‌ಫೋನ್‌ ಕರೆಗಳನ್ನು ಕಂಟ್ರೋಲ್‌ ಮಾಡಬಹುದಾಗಿದೆ. ಇದರೊಂದಿಗೆ ಸ್ಟೆಪ್‌ ಟ್ರ್ಯಾಕಿಂಗ್‌, ಹಾರ್ಟ್‌ಬೀಟ್‌ ಸೆನ್ಸಾರ್‌ ಮತ್ತು SpO2 ಮಾನಿಟರಿಂಗ್‌ ಸೆನ್ಸಾರ್‌ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ವಾಚ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಾಯ್ಸ್‌ಫಿಟ್‌ ಕ್ರ್ಯೂ ಫೀಚರ್ಸ್‌ ಹೇಗಿದೆ?

ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ 1.38 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 240x240 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ರೇಟಿಂಗ್‌ ಅನ್ನು ಒಳಗೊಂಡಿದೆ. ಜೊತೆಗೆ ಧೂಳು ಮತ್ತು ನೀರಿನಿಂದ ರಕ್ಷಣೆ ಮಾಡುವುದಕ್ಕಾಗಿ ಸ್ಮಾರ್ಟ್‌ವಾಚ್‌ IP68 ರೇಟಿಂಗ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ವಾಚ್‌ ಅನ್ನು ಸ್ಮಾರ್ಟ್‌ಫೋನ್‌ನೊಂದಿಗೆ ಕನೆಕ್ಟ್‌ ಮಾಡುವುದಕ್ಕಾಗಿ ನಾಯ್ಸ್‌ಫಿಟ್‌ ಅಪ್ಲಿಕೇಶನ್‌ನೊಂದಿಗೆ ಕಾರ್ಯನಿರ್ವಹಿಸಲಿದೆ.

ನಾಯ್ಸ್‌ ಕಂಪೆನಿಯಿಂದ ಅಚ್ಚರಿಯ ಸ್ಮಾರ್ಟ್‌ವಾಚ್‌ ಬಿಡುಗಡೆ!

ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಬ್ಲೂಟೂತ್ 5.3 ಅನ್ನು ಹೊಂದಿದ್ದು, ಬ್ಲೂಟೂತ್ ಕಾಲಿಂಗ್‌ ಫೀಚರ್ಸ್‌ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ವಾಚ್‌ ಫಿಟ್‌ನೆಸ್ ಮತ್ತು ಆಕ್ಟಿವಿಟಿ ಟ್ರ್ಯಾಕಿಂಗ್‌ ಅನ್ನು ಹೊಂದಿದ್ದು, ನಾಯ್ಸ್‌ಫಿಟ್‌ ಕ್ರ್ಯೂ ಸ್ಟೆಪ್ ಟ್ರ್ಯಾಕಿಂಗ್, ಹೃದಯ ಬಡಿತ ಮತ್ತು SpO2 ಮಾನಿಟರಿಂಗ್ ಮತ್ತು ಸ್ಲೀಪ್ ಟ್ರ್ಯಾಕಿಂಗ್ ಫೀಚರ್ಸ್ ಅನ್ನು ಹೊಂದಿದೆ. ಇದಲ್ಲದೆ ಫಿಟ್‌ನೆಸ್ ಟ್ರ್ಯಾಕಿಂಗ್‌ಗಾಗಿ 100ಕ್ಕೂ ಹೆಚ್ಚು ಸ್ಪೋರ್ಟ್ಸ್‌ ಮೋಡ್‌ಗಳನ್ನು ನೀಡಲಾಗಿದೆ. ಅಲ್ಲದೆ ಸ್ಮಾರ್ಟ್‌ವಾಚ್‌ 100ಕ್ಕೂ ಹೆಚ್ಚು ವಾಚ್ ಫೇಸ್‌ಗಳನ್ನು ಬೆಂಬಲಿಸಲಿದೆ.

ಇನ್ನು ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಅಪ್ಲಿಕೇಶನ್‌ಗಳು ಅಲಾರಮ್‌ಗಳು ಮತ್ತು ಜ್ಞಾಪನೆಗಳು, ಕ್ಯಾಲ್ಕುಲೇಟರ್, ಕ್ಯಾಲೆಂಡರ್ ಮತ್ತು ವೆದರ್‌ ಅಪ್ಡೇಟ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ವಾಚ್‌ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಕೂಡ ಹೊಂದಿದೆ. ಇದನ್ನು ಸಂಪೂರ್ಣ ಚಾರ್ಜ್‌ ಮಾಡಿದರೆ ಏಳು ದಿನಳಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ ಎಂದು ಹೇಳಲಾಗಿದೆ. ಇದು ಕಪ್ಪು, ನೀಲಿ, ಬೂದು, ಹಸಿರು ಮತ್ತು ಪಿಂಕ್ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ. ಪ್ರಸ್ತುತ ಈ ಸ್ಮಾರ್ಟ್‌ವಾಚ್‌ ಕಪ್ಪು ಮತ್ತು ಗುಲಾಬಿ ಬಣ್ಣದ ಆಯ್ಕೆಗಳಲ್ಲಿ ಮಾತ್ರ ಫ್ಲಿಪ್‌ಕಾರ್ಟ್‌ ಮೂಲಕ ಲಭ್ಯವಾಗ್ತಿದೆ.

ನಾಯ್ಸ್‌ ಕಂಪೆನಿಯಿಂದ ಅಚ್ಚರಿಯ ಸ್ಮಾರ್ಟ್‌ವಾಚ್‌ ಬಿಡುಗಡೆ!

ನಾಯ್ಸ್‌ಫಿಟ್‌ ಕ್ರ್ಯೂ ಬೆಲೆ ಮತ್ತು ಲಭ್ಯತೆ

ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಭಾರತದಲ್ಲಿ 1,499ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ವಾಚ್‌ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇದನ್ನು ನಾಐ್ಸ್‌ ಕಪೆನಿಯ ಅಧಿಕೃತ ವೆಬ್‌ಸೈಟ್‌ gonoise.com ಮೂಲಕ ಖರೀದಿಸಬಹುದಾಗಿದೆ.

ಇದಲ್ಲದೆ ನಾಯ್ಸ್‌ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ನಾಯ್ಸ್‌ಫಿಟ್‌ ಟ್ವಿಸ್ಟ್‌ ಸ್ಮಾರ್ಟ್‌ವಾಚ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ವಾಚ್‌ ಮೆಟಾಲಿಕ್ ಯುನಿಬಾಡಿಯನ್ನು ಹೊಂದಿದ್ದು, IP68-ರೇಟೆಡ್ ಡಸ್ಟ್‌ ಮತ್ತು ವಾಟರ್‌ ಪ್ರೂಫ್‌ ವ್ಯವಸ್ಥೆಯನ್ನು ಪಡೆದಿದೆ. ಇನ್ನು ಸ್ಮಾರ್ಟ್‌ವಾಚ್‌ 1.38 ಇಂಚಿನ LCD ಸ್ಕ್ರೀನ್‌ ಹೊಂದಿದೆ. ಇದು ಬ್ಲೂಟೂತ್ ಕಾಲ್‌ ಫೀಚರ್ಸ್‌ ಒಳಗೊಂಡಿದ್ದು, ಸಿಂಗಲ್‌ ಚಾರ್ಜ್‌ನಲ್ಲಿ ಸುಮಾರು ಏಳು ದಿನಗಳ ಬಾಳಿಕೆ ನೀಡಲಿದೆ.

Best Mobiles in India

English summary
The new smartwatch features Bluetooth 5.3 connectivity and Bluetooth calling functionality, and has a round 1.38-inch screen.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+