Home
ಸುದ್ದಿಜಾಲ

ನಾಯ್ಸ್‌ ಸಂಸ್ಥೆಯಿಂದ ಹೊಸ ಸ್ಮಾರ್ಟ್‌ವಾಚ್‌ ಬಿಡುಗಡೆ! ವಾವ್ಹ್‌ ಎನಿಸುವ ಫೀಚರ್ಸ್‌!

ಜನಪ್ರಿಯ ಸ್ಮಾರ್ಟ್‌ವಾಚ್‌ ತಯಾರಕ ನಾಯ್ಸ್‌ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ವಾಚ್‌ಗಳಿಂದ ಗುರುತಿಸಿಕೊಂಡಿದೆ. ಹಲವು ಆಕರ್ಷಕ ಸ್ಮಾರ್ಟ್‌ವಾಚ್‌ಗಳನ್ನು ಪರಿಚಯಿಸಿರುವ ನಾಯ್ಸ್‌ ಕಂಪೆನಿ ಭಾರಿ ಜನಪ್ರಿಯತೆ ಪಡೆದುಕೊಂಡಿದೆ. ಇದೀಗ ಹೊಸ ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ ಅನ್ನು ಬಿಡುಗಡೆ ಮಾಡಿದೆ.

ಹೌದು, ಭಾರತದಲ್ಲಿ ನಾಯ್ಸ್‌ ಕಂಪೆನಿ ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲಿಂಗ್‌ ಅನ್ನು ಬೆಂಬಲಿಸಲಿದೆ. ಇದು ಸ್ಪೋರ್ಟ್ಸ್‌ಮೋಡ್‌ಗಳೊಂದಿಗೆ 150ಕ್ಕೂ ಹೆಚ್ಚು ವಾಚ್‌ಫೇಸ್‌ಗಳೊಂದಿಗೆ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ವಾಚ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಾಯ್ಸ್‌ ಸಂಸ್ಥೆಯಿಂದ ಹೊಸ ಸ್ಮಾರ್ಟ್‌ವಾಚ್‌ ಬಿಡುಗಡೆ! ವಾವ್ಹ್‌ ಎನಿಸುವ ಫೀಚರ್ಸ್‌

ನಾಯ್ಸ್‌ಫಿಟ್‌ ಹಾಲೋ ಫೀಚರ್ಸ್‌ ಹೇಗಿದೆ?

ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ 1.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 466x466 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್ ವಾಚ್ ಪ್ರೀಮಿಯಂ ಮೆಟಾಲಿಕ್ ಬಿಲ್ಡ್ ಅನ್ನು ಹೊಂದಿದ್ದು, ಚರ್ಮ, ಟೆಕ್ಸ್ಚರ್ಡ್ ಸಿಲಿಕೋನ್ ಮತ್ತು ಸ್ಟ್ಯಾಂಡರ್ಡ್ ಸಿಲಿಕೋನ್ ಆಯ್ಕೆಯಲ್ಲಿ ಬರಲಿದೆ. ಇದು ಟ್ರೂ ಸಿಂಕ್‌ನಿಂದ ನಡೆಸಲ್ಪಡುವ ಬ್ಲೂಟೂತ್-ಕಾಲಿಂಗ್‌ ಅನ್ನು ಕೂಡ ಬೆಂಬಲಿಸಲಿದೆ.

ಇನ್ನು ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ 150ಕ್ಕೂ ಹೆಚ್ಚು ಕ್ಲೌಡ್ ವಾಚ್ ಫೇಸ್‌ಗಳನ್ನು ಹೊಂದಿದೆ. ಇದು ಮಲ್ಟಿ ಸ್ಪೋರ್ಟ್ಸ್‌ಮೋಡ್‌ ಮತ್ತು ಹೆಲ್ತ್‌ ಟ್ರ್ಯಾಕಿಂಗ್‌ ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಈ ಸ್ಮಾರ್ಟ್‌ವಾಚ್‌ SpO2 ಮಾನಿಟರಿಂಗ್, ಹಾರ್ಟ್‌ಬೀಟ್‌ ಟ್ರ್ಯಾಕಿಂಗ್ ಮತ್ತು ಸ್ಲಿಪ್‌ ಮಾನಿಟರಿಂಗ್ ಮತ್ತು ಸ್ಟೆಪ್ ಟ್ರ್ಯಾಕರ್ರ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.

ನಾಯ್ಸ್‌ ಸಂಸ್ಥೆಯಿಂದ ಹೊಸ ಸ್ಮಾರ್ಟ್‌ವಾಚ್‌ ಬಿಡುಗಡೆ! ವಾವ್ಹ್‌ ಎನಿಸುವ ಫೀಚರ್ಸ್‌

ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ 7 ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತ. ಆದರೆ ಭಾರಿ ಬ್ಲೂಟೂತ್‌ ಕಾಲಿಂಗ್‌ ಬಳಕೆಯಲ್ಲಿ ಒಂದು ದಿನದವರೆಗೆ ಇರಲಿದೆ ಎಂದು ಹೇಳಲಾಗಿದೆ. ಇನ್ನು ಸ್ಮಾರ್ಟ್‌ವಾಚ್‌ ಸ್ಮಾರ್ಟ್ ಟಚ್ ಟೆಕ್, ಅಧಿಸೂಚನೆಗಳು, ವೆದರ್‌ ಅಪ್ಡೇಟ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ನಾಯ್ಸ್‌ಫಿಟ್‌ ಹಾಲೋ ಬೆಲೆ ಮತ್ತು ಲಭ್ಯತೆ

ನಾಯ್ಸ್‌ಫಿಟ್‌ ಹಾಲೋ ಸ್ಮಾರ್ಟ್‌ವಾಚ್‌ ಭಾರತದಲ್ಲಿ 3,999ರೂ. ಬೆಲೆಯಲ್ಲಿ ಬರಲಿದೆ. ಇದು ಫೆಬ್ರವರಿ 27 ರಿಂದ ಮಧ್ಯಾಹ್ನ 12 ಗಂಟೆಗೆ ಸೇಲ್‌ ಆಗಲಿದೆ. ಇನ್ನು ಸ್ಮಾರ್ಟ್‌ವಾಚ್‌ ನಾಯ್ಸ್‌ಫಿಟ್‌ ವೆಬ್‌ಸೈಟ್ ಮತ್ತು ಅಮೆಜಾನ್‌ ಇಂಡಿಯಾ ಸೇಲ್‌ ಮೂಲಕ ಮಾರಾಟಕ್ಕೆ ಲಭ್ಯವಿರುತ್ತದೆ.

ಇನ್ನು ನಾಯ್ಸ್‌ ಕಂಪೆನಿ ಇತ್ತೀಚಿಗೆ ಹೊಸದಾಗಿ ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ವಾಚ್‌ ಮೂಲಕವೇ ನಿಮ್ಮ ಸ್ಮಾರ್ಟ್‌ಫೋನ್‌ ಕರೆಗಳನ್ನು ಕಂಟ್ರೋಲ್‌ ಮಾಡಬಹುದಾಗಿದೆ. ಇದರೊಂದಿಗೆ ಸ್ಟೆಪ್‌ ಟ್ರ್ಯಾಕಿಂಗ್‌, ಹಾರ್ಟ್‌ಬೀಟ್‌ ಸೆನ್ಸಾರ್‌ ಮತ್ತು SpO2 ಮಾನಿಟರಿಂಗ್‌ ಸೆನ್ಸಾರ್‌ ಅನ್ನು ಬೆಂಬಲಿಸಲಿದೆ.

ನಾಯ್ಸ್‌ ಸಂಸ್ಥೆಯಿಂದ ಹೊಸ ಸ್ಮಾರ್ಟ್‌ವಾಚ್‌ ಬಿಡುಗಡೆ! ವಾವ್ಹ್‌ ಎನಿಸುವ ಫೀಚರ್ಸ್‌

ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ 1.38 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 240x240 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ರೇಟಿಂಗ್‌ ಅನ್ನು ಒಳಗೊಂಡಿದೆ. ಜೊತೆಗೆ ಧೂಳು ಮತ್ತು ನೀರಿನಿಂದ ರಕ್ಷಣೆ ಮಾಡುವುದಕ್ಕಾಗಿ ಸ್ಮಾರ್ಟ್‌ವಾಚ್‌ IP68 ರೇಟಿಂಗ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ವಾಚ್‌ ಅನ್ನು ಸ್ಮಾರ್ಟ್‌ಫೋನ್‌ನೊಂದಿಗೆ ಕನೆಕ್ಟ್‌ ಮಾಡುವುದಕ್ಕಾಗಿ ನಾಯ್ಸ್‌ಫಿಟ್‌ ಅಪ್ಲಿಕೇಶನ್‌ನೊಂದಿಗೆ ಕಾರ್ಯನಿರ್ವಹಿಸಲಿದೆ.

ನಾಯ್ಸ್‌ಫಿಟ್‌ ಕ್ರ್ಯೂ ಸ್ಮಾರ್ಟ್‌ವಾಚ್‌ ಬ್ಲೂಟೂತ್ 5.3 ಅನ್ನು ಹೊಂದಿದ್ದು, ಬ್ಲೂಟೂತ್ ಕಾಲಿಂಗ್‌ ಫೀಚರ್ಸ್‌ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ವಾಚ್‌ ಫಿಟ್‌ನೆಸ್ ಮತ್ತು ಆಕ್ಟಿವಿಟಿ ಟ್ರ್ಯಾಕಿಂಗ್‌ ಅನ್ನು ಹೊಂದಿದ್ದು, ನಾಯ್ಸ್‌ಫಿಟ್‌ ಕ್ರ್ಯೂ ಸ್ಟೆಪ್ ಟ್ರ್ಯಾಕಿಂಗ್, ಹೃದಯ ಬಡಿತ ಮತ್ತು SpO2 ಮಾನಿಟರಿಂಗ್ ಮತ್ತು ಸ್ಲೀಪ್ ಟ್ರ್ಯಾಕಿಂಗ್ ಫೀಚರ್ಸ್ ಅನ್ನು ಹೊಂದಿದೆ. ಇದಲ್ಲದೆ ಫಿಟ್‌ನೆಸ್ ಟ್ರ್ಯಾಕಿಂಗ್‌ಗಾಗಿ 100ಕ್ಕೂ ಹೆಚ್ಚು ಸ್ಪೋರ್ಟ್ಸ್‌ ಮೋಡ್‌ಗಳನ್ನು ನೀಡಲಾಗಿದೆ. ಅಲ್ಲದೆ ಸ್ಮಾರ್ಟ್‌ವಾಚ್‌ 100ಕ್ಕೂ ಹೆಚ್ಚು ವಾಚ್ ಫೇಸ್‌ಗಳನ್ನು ಬೆಂಬಲಿಸಲಿದೆ.

Best Mobiles in India

English summary
NoiseFit Halo Smartwatch Launched in India: specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+