ಭಾರತಕ್ಕೆ ಎಂಟ್ರಿ ಕೊಟ್ಟ ನಾಯ್ಸ್‌ಫಿಟ್ ಮೆಟಾಲಿಕ್ಸ್ ವಾಚ್! ಬೆಲೆ ಎಷ್ಟು?
ನಾಯ್ಸ್ ಕಂಪೆನಿಯ ಸ್ಮಾರ್ಟ್‌ವಾಚ್‌ಗಳಿಗೆ ಭಾರತದಲ್ಲಿ ಭಾರಿ ಡಿಮ್ಯಾಂಡ್ ಇದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ವಾಚ್‌ಗಳಿಗೆ ಹೆಸರುವಾಸಿಯಾಗಿರುವ ನಾಯ್ಸ್ ಇದೀಗ ಹೊಸ ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಿದೆ. ಇದು ಸ್ಮಾರ್ಟ್‌ವಾಚ್ ರೌಂಡ್ ಡಯಲ್ ಮತ್ತು ಮೆಟಾಲಿಕ್ ಫಿನಿಶ್ ಹೊಂದಿದೆ.
ಹೌದು, ನಾಯ್ಸ್‌ಕಂಪೆನಿ ಹೊಸ ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್‌ವಾಚ್ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ವಾಚ್ ಹೆಚ್‌ಡಿ ಡಿಸ್‌ಪ್ಲೇ ಹಾಗೂ ನೂರಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್‌ಗಳನ್ನು ನೀಡಲಿದೆ. ಇದಲ್ಲದೆ ವಾಟರ್‌ಪ್ರೂಫ್ ವ್ಯವಸ್ಥೆ ಮತ್ತು ಸ್ಟೇನ್‌ಲೆಸ್ ಸ್ಟೀಲ್ ಫಿನಿಶ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್‌ವಾಚ್ 1.4-ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು 240×240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 550 ನಿಟ್ಸ್ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ. ಈ ಸ್ಮಾರ್ಟ್ ವಾಚ್ ಮೆಟಲ್ ಪಟ್ಟಿಗಳೊಂದಿಗೆ ಸ್ಟೇನ್‌ಲೆಸ್ ಸ್ಟೀಲ್ ಫಿನಿಶ್ ಅನ್ನು ಒಳಗೊಂಡಿದೆ. ಇದು ಬಳಕೆದಾರರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವ ಫೀಚರ್ಸ್‌ಗಳನ್ನು ಹೊಂದಿದೆ. ಅದರಂತೆ ಹೃದಯ ಬಡಿತ, SpO2, ನಿದ್ರೆಯ ಮಾದರಿಗಳನ್ನು ಟ್ರ್ಯಾಕ್ ಮಾಡುವ ಫೀಚರ್ಸ್ ಪಡೆದುಕೊಂಡಿದೆ.
ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್‌ವಾಚ್ ಒತ್ತಡದ ಮಟ್ಟಗಳನ್ನು ಟ್ರ್ಯಾಕ್ ಮಾಡುವುದಕ್ಕೆ ಅವಕಾಶ ನೀಡಲಿದೆ. ಇನ್ನು ಸ್ಮಾರ್ಟ್‌ವಾಚ್ ನಾಯ್ಸ್‌ಬಜ್ ಫೀಚರ್ಸ್ ಅನ್ನು ಸಹ ಬೆಂಬಲಿಸಲಿದೆ. ಇದರ ಮೂಲಕ ಬಳಕೆದಾರರು ಸ್ಮಾರ್ಟ್‌ವಾಚ್‌ನಲ್ಲಿ ಇತ್ತೀಚಿನ ಕಾಲ್ ಲಾಗ್‌ಗಳನ್ನು ಪ್ರವೇಶಿಸಬಹುದು. ಇದರಲ್ಲಿ ಬಳಕೆದಾರರು ಅವರ 10 ಸಂಪರ್ಕಗಳನ್ನು ಉಳಿಸಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ, ಸ್ಮಾರ್ಟ್ ವಾಚ್ 100ಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್ ಹಾಗೂ 150ಕ್ಕೂ ಹೆಚ್ಚು ವಾಚ್ ಫೇಸ್‌ಗಳೊಂದಿಗೆ ಬರುತ್ತದೆ.
ಇನ್ನು ಈ ಸ್ಮಾರ್ಟ್ ವಾಚ್ ಸಂಪರ್ಕಕ್ಕಾಗಿ ಬ್ಲೂಟೂತ್ ಆವೃತ್ತಿ 5.3 ಅನ್ನು ಬೆಂಬಲಿಸಲಿದೆ. ಇದು ಕರೆ ಮಾಡಲು TruSync ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಸ್ಮಾರ್ಟ್‌ವಾಚ್ ಏಳು ದಿನಗಳವರೆಗೆ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಿದೆ. ಜೊತೆಗೆ ಸ್ಮಾರ್ಟ್‌ವಾಚ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP68 ರೇಟ್ ಅನ್ನು ಒಳಗೊಂಡಿದೆ.
ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್ ವಾಚ್ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ನಾಯ್ಸ್‌ಫಿಟ್ ಮೆಟಾಲಿಕ್ಸ್ ಸ್ಮಾರ್ಟ್ ವಾಚ್ 2,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದನ್ನು ನೀವು ಅಮೆಜಾನ್ ಇಂಡಿಯಾ ಮತ್ತು ನಾಯ್ಸ್ ಕಂಪೆನಿಯ ಅಧಿಕೃತ ವೆಬ್‌ಸೈಟ್ ಹಾಗೂ gnoise.com ಸೇರಿದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಖರೀದಿಸಲು ಲಭ್ಯವಿದೆ. ಇದು ನಿಮಗೆ ಎಲೈಟ್ ಬ್ಲಾಕ್, ಎಲೈಟ್ ನಿಕಲ್ ಮತ್ತು ಎಲೈಟ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.
ಇನ್ನು ನಾಯ್ಸ್ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ನಾಯ್ಸ್ ಕಲರ್‌ಫಿಟ್ ಅಲ್ಟ್ರಾ 3 ಸ್ಮಾರ್ಟ್‌ವಾಚ್ ಪರಿಚಯಿಸಿದೆ. ಈ ವಾಚ್ ಆಪಲ್ ವಾಚ್ ಮಾದರಿಯ ವಿನ್ಯಾಸವನ್ನು ಹೊಂದಿದೆ. ಇದು 1.96 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಆಲ್‌ವೇಸ್ ಆನ್ ಡಿಸ್‌ಪ್ಲೇ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಬಳಕೆದಾರರು ಸಿಂಗಲ್ ಟ್ಯಾಪ್ ಮೂಲಕ ಡಿವೈಸ್ ಅನ್ನು ಆಲರ್ಟ್ ಮಾಡಬಹುದಾಗಿದೆ. ಜೊತೆಗೆ ಸ್ಕ್ರೀನ್ ಮೇಲೆ ನಿಮ್ಮ ಕೈಗಳನ್ನು ಇರಿಸುವ ಮೂಲಕ ಡಿಸ್‌ಪ್ಲೇಯನ್ನು ಆಫ್ ಮಾಡಬಹುದಾಗಿದೆ.
ಇನ್ನು ಈ ಸ್ಮಾರ್ಟ್‌ವಾಚ್ ಮೇಲಿನ ಬಲಭಾಗದಲ್ಲಿ ಸಂಪೂರ್ಣ ಕ್ರಿಯಾತ್ಮಕ ತಿರುಗುವ ಕಿರೀಟವನ್ನು ಹೊಂದಿದೆ. ಇದರೊಂದಿಗೆ ಸ್ಮಾರ್ಟ್‌ವಾಚ್ ಕೆಳಗಿನ ಭಾಗದಲ್ಲಿ ಹೆಚ್ಚುವರಿ ಬಟನ್ ಸಹ ನೀಡಲಾಗಿದೆ. ಜೊತೆಗೆ ಸ್ಮಾರ್ಟ್‌ವಾಚ್ ಬಳಕೆದಾರರಿಗೆ ಹೆಲ್ತ್ ಫೀಚರ್ಸ್ ಅನ್ನು ಸಹ ನೀಡುತ್ತಿದೆ. ಇದರಲ್ಲಿ ಹಾರ್ಟ್‌ಬೀಟ್ ಮಾನಿಟರ್, SpO2 ಸೆನ್ಸಾರ್ ಮತ್ತಯ ಮಹಿಳೆಯರ ಆರೋಗ್ಯದ ವಿಚಾರವಾಗಿ ಅನೇಕ ಹೆಲ್ತ್ ಟ್ರ್ಯಾಕರ್‌ಗಳನ್ನು ಹೊಂದಿದೆ. ಹಾಗೆಯೇ ಸ್ಲಿಪ್ ಮಾನಿಟರ್ ಮತ್ತು ಒತ್ತಡದ ಮಟ್ಟವನ್ನು ಮೇಲ್ವಿಚಾರಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications








