ನೋಕಿಯಾ 1.4 ಸ್ಮಾರ್ಟ್‌ಫೋನ್ ಲಾಂಚ್!..ವಿಶೇಷತೆ ಏನು?
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ನೋಕಿಯಾ ಇದೀಗ ಹೊಸ ನೋಕಿಯಾ 1.4 ಅನ್ನು ಬಿಡುಗಡೆ ಮಾಡಿದೆ. ಇನ್ನು ಕಳೆದ ವರ್ಷ ಮಾರ್ಚ್‌ನಲ್ಲಿ ಬಿಡುಗಡೆಯಾದ ನೋಕಿಯಾ 1.3 ಬಿಡುಗಡೆಯಾದ ನಂತರ ಹೊಸ ನೋಕಿಯಾ ಫೋನ್ ಅನಾವರಣಗೊಂಡಿದೆ. ಇದು ಡ್ಯುಯೆಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ.

ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ 1.4 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.51 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ 215 SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ನೋಕಿಯಾ 1.4 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 80.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 215 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 1GB RAM+16GB, 2GB RAM + 32GB ಹಾಗೂ 3GB RAM+64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಫೀಚರ್ಸ್
ನೋಕಿಯಾ 1.4 ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ನೋಕಿಯಾ 1.4 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 5W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V4.2, GPS, FM ರೇಡಿಯೋ, ಮೈಕ್ರೋ-USB ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 1.4 ಬೆಲೆ ಬೇಸ್ ವೇರಿಯೆಂಟ್ 1GB RAM + 16GB ರೂಪಾಂತರಕ್ಕೆ $ 99 (ಸುಮಾರು 7,200 ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ 1GB + 32GB ಮತ್ತು 3GB + 64GB ಆಯ್ಕೆಗಳ ಬೆಲೆ ಇನ್ನೂ ಅಧಿಕೃತಗೊಂಡಿಲ್ಲ. ಇದು ಚಾರ್ಕೋಲ್, ಡಸ್ಕ್ ಮತ್ತು ಫ್ಜೋರ್ಡ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಭಾರತದ ಲಭ್ಯತೆ ಮತ್ತು ಬೆಲೆಗಳ ಬಗ್ಗೆ ನಿರ್ದಿಷ್ಟ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.


Click it and Unblock the Notifications