Just In
Don't Miss
- Automobiles
ವಿವಿಧ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಟಾಟಾ ಮೋಟಾರ್ಸ್
- Lifestyle
ನಿಮ್ಮ ಡಲ್ ಸ್ಕಿನ್ ಹೋಗಲಾಡಿಸಲು ಸುಲಭವಾದ ಮನೆಮದ್ದು ಇಲ್ಲಿದೆ
- Sports
ಐಪಿಎಲ್ 2021: ಮತ್ತೆ ಕಣಕ್ಕಿಳಿಯಲು ವೇಗಿ ಎಸ್ ಶ್ರೀಶಾಂತ್ ಸಜ್ಜು
- News
ನೇತಾಜಿ 125ನೇ ಜನ್ಮದಿನ; ಪರಾಕ್ರಮ ಸ್ಮರಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
- Finance
ರಿಲಯನ್ಸ್ ಜಿಯೋ ತ್ರೈಮಾಸಿಕ ನಿವ್ವಳ ಲಾಭ ಶೇ. 15.5ರಷ್ಟು ಏರಿಕೆ
- Movies
ಅಕ್ಷಯ್ ಕುಮಾರ್ ನಟನೆಯ 'ಬಚ್ಚನ್ ಪಾಂಡೆ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತಕ್ಕೆ 'ನೋಕಿಯಾ 2.3' ಸ್ಮಾರ್ಟ್‌ಫೋನ್ ಎಂಟ್ರಿ!..ಬೆಲೆ ಎಷ್ಟು?
ಸ್ಮಾರ್ಟ್‌ಫೋನ್ ಪ್ರಿಯರ್ ಎವರ್‌ಗ್ರೀನ್ ಕಂಪನಿ ನೋಕಿಯಾ ಸಂಸ್ಥೆಯು ಇತ್ತೀಚಿಗಷ್ಟೆ ಕೈರೋದಲ್ಲಿ ಲಾಂಚ್ ಮಾಡಿದ್ದ ನೋಕಿಯಾ 2.3 ಸ್ಮಾರ್ಟ್‌ಫೋನ್ ಅನ್ನು ಈಗ ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ನೋಕಿಯಾ 2.3 ಫೋನ್ ಎಂಟ್ರಿ ಲೆವಲ್ ಕೇಟಗರಿಯ ಸ್ಮಾರ್ಟ್‌ಫೋನ್ ಆಗಿದ್ದು, ಪ್ರೊಸೆಸರ್, ಕ್ಯಾಮೆರಾ, ಬ್ಯಾಟರಿ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸುವ ಸೂಚನೆ ನೀಡಿದೆ.

ಹೌದು, ನೋಕಿಯಾ ಸಂಸ್ಥೆಯ ನೋಕಿಯಾ 2.3 ಸ್ಮಾರ್ಟ್‌ಫೋನ್ ಇದೀಗ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ A22 ಪ್ರೊಸೆಸರ್ ಹೊಂದಿದ್ದು, ಜೊತೆಗೆ 4,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಗೂಗಲ್ ಅಸಿಸ್ಟಂಟ್ ಬಟನ್ ಸೌಲಭ್ಯವನ್ನು ಸಹ ಒಳಗೊಂಡಿದ್ದು, ಗ್ರೀನ್ ಮತ್ತು ಚಾರ್ಕೋಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯತೆಯನ್ನು ಹೊಂದಿದೆ.

ಇನ್ನು ಮಾರ್ಚ್ 31, 2020ರ ಒಳಗೆ ಈ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಒಂದು ವರ್ಷದ ರೀಪ್ಲೇಸ್‌ಮೆಂಟ್ ಗ್ಯಾರಂಟಿ ನೀಡಲಿದೆ. ಹಾಗೆಯೇ ಜಿಯೋ ಗ್ರಾಹಕರಿಗೂ ವಿಶೇಷ ಆರಂಭಿಕ ಕೊಡುಗೆಗಳು ದೊರೆಯಲಿವೆ. ಹಾಗಾದರೇ ನೋಕಿಯಾ 2.3 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ
ನೋಕಿಯಾ 2.3 ಸ್ಮಾರ್ಟ್‌ಫೋನ್ 720x1520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 6.2 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತವು 19:9 ರಷ್ಟು ಆಗಿದ್ದು, ವಾಟರ್‌ಡ್ರಾಪ್ ಶೇಪ್ ಡಿಸ್‌ಪ್ಲೇ ಮಾದರಿಯನ್ನು ಪಡೆದಿದೆ. ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಪ್ರಸ್ತುತ ಈ ವರ್ಗದ ಸ್ಮಾರ್ಟ್‌ಫೋನ್‌ಗಳಲ್ಲಿ ಸಾಮಾನ್ಯವಾಗಿ ಇಷ್ಟೇ ಡಿಸ್‌ಪ್ಲೇ ಗಾತ್ರ ಕಾಣಬಹುದು.

ಪ್ರೊಸೆಸರ್ ಯಾವುದು
ನೋಕಿಯಾ 2.3 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ A22 ಕ್ವಾಡ್ ಕೋರ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ 2GB RAM ಸಾಮರ್ಥ್ಯ ಹಾಗೂ 32GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸುವ ಅವಕಾಶ ಸಹ ಇದೆ.

ಡ್ಯುಯಲ್ ಕ್ಯಾಮೆರಾ
ನೋಕಿಯಾ 2.3 ಸ್ಮಾರ್ಟ್‌ಫೋನ್ ಅಗ್ಗದ ಫೋನ ಆಗಿದ್ದು, ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ರಿಯರ್ ಕ್ಯಾಮೆರಾ f/2.2 ಅಪರ್ಚರ್ ನೊಂದಿಗೆ 13ಎಂಪಿ ಸೆನ್ಸಾರ್ ಹೊಂದಿದ್ದು, ಸೆಕಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಒಳಗೊಂಡಿದೆ. ಇರಲಿದೆ. ಸೆಲ್ಫಿಗಾಗಿ ಮುಂಭಾಗದಲ್ಲಿ 5ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಇತರೆ ಫೋಟೊ ಆಯ್ಕೆಗಳು ಸಹ ಇವೆ.

ಬ್ಯಾಟರಿ ಮತ್ತು ಇತರೆ
ನೋಕಿಯಾ 2.3 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಸುಮಾರು ಎರಡು ದಿನ ಬ್ಯಾಟರಿ ಬಾಳಿಕೆ ಬರಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಇದರೊಂದಿಗೆ ಬ್ಲೂಟೂತ್, ವೈಫೈ, ಜಿಪಿಎಸ್, ಹೆಡ್‌ಫೋನ್ ಜಾಕ್, ಆಯ್ಕೆಗಳು ಲಭ್ಯವಿದ್ದು, ಇನ್ನು ಈ ಫೋನ್ ಚಾರ್ಕೋಲ್, ಗ್ರೀನ್, ಸ್ಯಾಂಡ್ ಬಣ್ಣಗಳ ಆಯ್ಕೆ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಕೈರೋದಲ್ಲಿ ಬಿಡುಗಡೆ ಆಗಿದ್ದ, ನೋಕಿಯಾ 2.3 ಸ್ಮಾರ್ಟ್‌ಫೋನ್ ಈಗ ಭಾರತದಲ್ಲಿಯೂ ಲಾಂಚ್ ಆಗಿದೆ. ನೋಕಿಯಾ 2.3 ಫೋನ್ ಬೆಲೆಯು 8,199ರೂ.ಗಳಾಗಿದೆ. ಇನ್ನು ಈ ಫೋನ್ ಸೇಲ್ ಇದೇ ಡಿಸೆಂಬರ್ 27ರಿಂದ ಶುರುವಾಗಲಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190