ಸದ್ಯದಲ್ಲೇ ಭಾರತದಲ್ಲಿ ನೋಕಿಯಾ 2.4 ಸ್ಮಾರ್ಟ್‌ಫೋನ್ ಬಿಡುಗಡೆ!
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯಲ್ಲಿ ಎವರ್‌ಗ್ರೀನ್ ಬ್ರ್ಯಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ನೋಕಿಯಾ 2.4 ಸ್ಮಾರ್ಟ್‌ಫೋನ್ ಅನ್ನು ನವೆಂಬರ್ ಅಂತ್ಯದಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಇನ್ನು ಈ ಫೋನ್ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ 2.4 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಮೂಲತಃ ಎರಡು RAM ಆಯ್ಕೆಗಳಲ್ಲಿ ಲಬ್ಯವಾಗಲಿದೆ ಎನ್ನಲಾಗಿದೆ. ಇನ್ನು ಈ ಫೋನ್ ಅನ್ನು ಚಾರ್ಕೋಲ್, ಡಸ್ಕ್ ಮತ್ತು ಫ್ಜೋರ್ಡ್ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ನೋಕಿಯಾ 2.4 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಮತ್ತು ಸ್ಕ್ರೀನ್-ಟು-ಬಾಡಿ ಅನುಪಾತ 80.61% ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P 22 SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM ಮತ್ತು 32GB ಹಾಗೂ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗಳೊಂದಿಗೆ ಬರುತ್ತದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್‌ಎಫ್‌ಸಿ, ಎಫ್‌ಎಂ ರೇಡಿಯೋ, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ. ಜೊತೆಗೆ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 2.4 ಭಾರತದಲ್ಲಿ ಅಂದಾಜು 10,500 ರೂ.ಬೆಲೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಚಾರ್ಕೋಲ್, ಡಸ್ಕ್ ಮತ್ತು ಫ್ಜೋರ್ಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.


Click it and Unblock the Notifications