ನವೆಂಬರ್ 26ರಂದು ಭಾರತಕ್ಕೆ ಲಗ್ಗೆ ಇಡಲಿದೆ ನೋಕಿಯಾ 2.4 ಫೋನ್!

|

ಜನಪ್ರಿಯ ನೋಕಿಯಾ ಮೊಬೈಲ್ ಬ್ರ್ಯಾಂಡ್‌ ಈಗಾಗಲೇ ಹಲವು ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಗ್ರಾಹಕರನ್ನು ಆಕರ್ಷಿಸಿದೆ. ಹಾಗೆಯೇ ನೋಕಿಯಾದ ಎಂಟ್ರಿ ಲೆವೆಲ್ ಮಾಡೆಲ್‌ನ ಆಂಡ್ರಾಯ್ಡ್ ಫೋನ್‌ಗಳು ಸಾಕಷ್ಟು ಟ್ರೆಂಡಿಂಗ ಮೂಡಿಸಿವೆ. ಅವುಗಳಲ್ಲಿ ಬಹುನಿರೀಕ್ಷಿತ ನೋಕಿಯಾ 2.4 ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಲು ಇದೀಗ ಅಧಿಕೃತ ದಿನಾಂಕ ನಿಗದಿಯಾಗಿದೆ.

ನೋಕಿಯಾ 2.4

ಹೌದು, ನೋಕಿಯಾ ಸಂಸ್ಥೆಯ ಹೊಸ ನೋಕಿಯಾ 2.4 ಸ್ಮಾರ್ಟ್‌ಫೋನ್ ಇದೇ ನವೆಂಬರ್ 26ರಂದು ಭಾರತೀಯ ಮಾರುಕಟ್ಟೆಗೆ ಎಂಟ್ರಿ ಇಡುವುದು ಈಗ ಅಧಿಕೃತವಾಗಿದೆ. ಈ ಫೋನ್ ಎರಡು ವೇರಿಯಂಟ್ ಮಾದರಿಗಳನ್ನು ಒಳಗೊಂಡಿರಲಿದ್ದು, ಅವುಗಳು ಕ್ರಮವಾಗಿ 2GB + 32GB ಮತ್ತು 3GB + 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ನೋಕಿಯಾ 2.4 ಸ್ಮಾರ್ಟ್‌ಫೋನಿನ ಇನ್ನುಳಿದ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ನೋಕಿಯಾ 2.4 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 19:9 ಆಗಿರಲಿದ್ದು, ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ.

ಪ್ರೊಸೆಸರ್‌ ಶಕ್ತಿ

ಪ್ರೊಸೆಸರ್‌ ಶಕ್ತಿ

ನೋಕಿಯಾ 2.4 ಸ್ಮಾರ್ಟ್‌ಫೋನ್ 'ಆಕ್ಟಾ ಕೋರ್ ಮೀಡಿಯಾ ಟೆಕ್‌ ಹಿಲಿಯೊ P22 SoC' ಪ್ರೊಸೆಸರ್ ಅನ್ನು ಒಳಗೊಂಡಿರಲಿದೆ. ಹಾಗೆಯೇ 2GB + 32GB ಮತ್ತು 3GB + 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿರಲಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ನೋಕಿಯಾ 2.4 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿರಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಪಡೆದಿರಲಿದೆ. ಇನ್ನು ಸೆಲ್ಫಿಗಾಗಿ 5ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, ಫ್ರಂಟ್‌ ಫೇಸಿಂಗ್ ಆಯ್ಕೆಯನ್ನು ಒಳಗೊಂಡಿದೆ.

ಬ್ಯಾಟರಿ ಶಕ್ತಿ

ಬ್ಯಾಟರಿ ಶಕ್ತಿ

ನೋಕಿಯಾ 2.4 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಹೊಂದಿರಲಿದೆ. ಇದರೊಂದಿಗೆ ವೇಗದ ಚಾರ್ಜಿಂಗ್ ಸೌಲಭ್ಯ ನೀಡುವ ಸಾಧ್ಯತೆಗಳು ಇವೆ. ಹಾಗೆಯೇ ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿರಲಿದೆ.

Best Mobiles in India

English summary
Nokia 2.4 is expected to come with the same specifications as the European model.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X