ನೋಕಿಯಾ 2.4 ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ನೋಕಿಯಾ ಇತ್ತೀಚಿಗೆ ಹಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಆ ಲಿಸ್ಟ್‌ಗೆ ಈಗ ಹೊಸದಾಗಿ ನೋಕಿಯಾ 2.4 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಮಾಡೆಲ್ ಆಗಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಹಾಗೆಯೇ ಕೈಗೆಟಕುವ ಬೆಲೆಯನ್ನು ಹೊಂದಿದೆ.

ಹೌದು, ನೋಕಿಯಾ ಕಂಪನಿಯು ಹೊಸದಾಗಿ ನೋಕಿಯಾ 2.4 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಫೋನ್ ಎರಡು ವೇರಿಯಂಟ್ ಮಾದರಿಗಳನ್ನು ಒಳಗೊಂಡಿರಲಿದ್ದು, ಅವುಗಳು ಕ್ರಮವಾಗಿ 2GB + 32GB ಮತ್ತು 3GB + 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ನೋಕಿಯಾ 2.4 ಸ್ಮಾರ್ಟ್‌ಫೋನಿನ ಇನ್ನುಳಿದ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ನೋಕಿಯಾ 2.4 ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19:9 ಆಗಿದ್ದು, ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ.

ಪ್ರೊಸೆಸರ್ ಶಕ್ತಿ
ನೋಕಿಯಾ 2.4 ಸ್ಮಾರ್ಟ್‌ಫೋನ್ 'ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC' ಪ್ರೊಸೆಸರ್ ಅನ್ನು ಒಳಗೊಂಡಿದೆ. ಹಾಗೆಯೇ 2GB + 32GB ಮತ್ತು 3GB + 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ವಿಶೇಷತೆ
ನೋಕಿಯಾ 2.4 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿಗಾಗಿ 5ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, ಫ್ರಂಟ್ ಫೇಸಿಂಗ್ ಆಯ್ಕೆಯನ್ನು ಒಳಗೊಂಡಿದೆ.

ಬ್ಯಾಟರಿ ಶಕ್ತಿ
ನೋಕಿಯಾ 2.4 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಹೊಂದಿದೆ. ಇದರೊಂದಿಗೆ ಬ್ಲೂಟೂತ್, ಜಿಪಿಎಸ್, ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿರಲಿದೆ.

ಬೆಲೆ ಎಷ್ಟು?
ನೋಕಿಯಾ 2.4 ಮಾರುಕಟ್ಟೆಗೆ ಬಿಡುಗಡೆ ಆಗಿದೆ. ಈ ಫೋನ್ ಬೆಲೆಯು EUR 119 ಆಗಿದೆ. (ಭಾರತದಲ್ಲಿ ಅಂದಾಜು 10,300ರೂ ಎನ್ನಲಾಗಿದೆ). ಇದೇ ಸೆಪ್ಟಂಬರ್ ಅಂತ್ಯದ ವೇಳೆಗೆ ಸೇಲ್ ಆರಂಭಿಸಲಿದ್ದು, ಚಾರ್ಕೋಲ್ ಡಸ್ಕ್ ಹಾಗೂ ಫ್ಜಾರ್ಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








