Just In
Don't Miss
- Movies
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Automobiles
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೇಶಿ ಮಾರುಕಟ್ಟೆಯಲ್ಲಿ ನೋಕಿಯಾ 2.4 ಸ್ಮಾರ್ಟ್ಫೋನ್ ಬಿಡುಗಡೆ!..ಬೆಲೆ ಎಷ್ಟು?
ಮೊಬೈಲ್ ಮಾರುಕಟ್ಟೆಯ ಎವರ್ಗ್ರೀನ್ ಬ್ರ್ಯಾಂಡ್ ಎನಿಸಿಕೊಂಡಿರುವ ನೋಕಿಯಾ ಕಂಪೆನಿ ಈಗಾಗಲೇ ಹಲವು ಮಾದರಿಯ ಫೋನ್ಗಳನ್ನ ಪರಿಚಯಿಸಿ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲೂ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೆಚ್ಎಂಡಿ ಗ್ಲೋಬಲ್ ಭಾರತದಲ್ಲಿ ನೋಕಿಯಾ 2.4 ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ 2.4 ಸ್ಮಾರ್ಟ್ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್ಫೋನ್ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಡಸ್ಕ್, ಫ್ಜಾರ್ಡ್ ಮತ್ತು ಚಾರ್ಕೋಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು 3GB ಮತ್ತು 64GB ರೂಪಾಂತರಕ್ಕೆ 10,399 ರೂ ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ವಿಶೇಷತೆ
ನೋಕಿಯಾ 2.4 ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಮತ್ತು ಸ್ಕ್ರೀನ್-ಟು-ಬಾಡಿ ಅನುಪಾತ 80.61% ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್ಎಫ್ಸಿ, ಎಫ್ಎಂ ರೇಡಿಯೋ, ಮೈಕ್ರೋ-ಯುಎಸ್ಬಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್, ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ. ಜೊತೆಗೆ ರಿಯರ್ ಫಿಂಗರ್ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 2.4 ಭಾರತದಲ್ಲಿ 10,399 ರೂ.ಬೆಲೆಯನ್ನು ಹೊಂದಿದೆ. ಇಂದಿನಿಂದ ಪ್ರಾರಂಭವಾಗುವ ನೋಕಿಯಾ.ಕಾಮ್ / ಫೋನ್ಗಳ ಮೂಲಕ ಸ್ಮಾರ್ಟ್ಫೋನ್ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಲಭ್ಯವಿರುತ್ತದೆ. ನೋಕಿಯಾ.ಕಾಮ್ / ಫೋನ್ಗಳಲ್ಲಿನ ಮೊದಲ 100 ಗ್ರಾಹಕರಿಗೆ 007 ವಿಶೇಷ ಆವೃತ್ತಿ ಬಾಟಲ್, ಕ್ಯಾಪ್ ಮತ್ತು ಮೆಟಲ್ ಕೀಚೈನ್ಗಳನ್ನು ಒಳಗೊಂಡಿರುವ 007 ಮರ್ಚಂಡೈಸ್ ಹ್ಯಾಂಪರ್ ಅನ್ನು ಕಂಪನಿಯು ನೀಡುತ್ತಿದೆ. ಅಮೆಜಾನ್.ಇನ್ ಮತ್ತು ಫ್ಲಿಪ್ಕಾರ್ಟ್ನಂತಹ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಮೂಲಕ ಮತ್ತು ಡಿಸೆಂಬರ್ 4 ರಿಂದ ಭಾರತದಾದ್ಯಂತದ ಪ್ರಮುಖ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೀವು ನೋಕಿಯಾ 2.4 ಅನ್ನು ಆನ್ಲೈನ್ನಲ್ಲಿ ಖರೀದಿಸಬಹುದು. ಸದ್ಯ ಈ ಸ್ಮಾರ್ಟ್ಫೋನ್ ಚಾರ್ಕೋಲ್, ಡಸ್ಕ್ ಮತ್ತು ಫ್ಜೋರ್ಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190