ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ!
ಮೊಬೈಲ್ ಜಗತ್ತಿನಲ್ಲಿ ಎವರ್ ಗ್ರೀನ್ ಬ್ರಾಂಡ್ ಆಗಿರುವ ನೋಕಿಯಾ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿರುವ ನೋಕಿಯಾ ಸ್ಮಾರ್ಟ್‌ಫೋನ್ ನೆಚ್ಚಿನ ಬ್ರಾಂಡ್ ಎನಿಸಿಕೊಂಡಿದೆ. ಸದ್ಯ ವಿಶೇಷ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿರುವ ನೋಕಿಯಾ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು, ಎವರ್ ಗ್ರೀನ್ ಬ್ರಾಂಡ್ ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿಕೊಳ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ಲೀಕ್ ಆಗಿದೆ. ಲೀಕ್ ಮಾಹಿತಿ ಪ್ರಕಾರ ಈ ಹೊಸ ಮಾದರಿಯ ಸ್ಮಾರ್ಟ್‌ಫೋನ್ ನೋಕಿಯಾ 2V ಯ ಹೊಸ ಆವೃತ್ತಿಯಾಗಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಈ ಸ್ಮಾರ್ಟ್‌ಫೋನ್ ವಿನ್ಯಾಸ ಹಾಗೂ ವಿಶೇಷತೆ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯ ಲಭ್ಯ ಮಾಹಿತಿ ಪ್ರಕಾರ ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ 720x1,280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನ ಹೊಂದಿರುವ 5.5-ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ A22 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 2GB RAM ಅನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ ಎನ್ನಲಾಗ್ತಿದೆ.

ಇನ್ನು ಈ ಸ್ಮಾರ್ಟ್‌ಫೋನ್ ನೋಕಿಯಾ 2V ಯ ಹೊಸ ಆವೃತ್ತಿಯಾಗಿದ್ದು, ಇದನ್ನು ಕಳೆದ ವರ್ಷ ಯುಎಸ್‌ನಲ್ಲಿ ನೋಕಿಯಾ 2.1 ರ ಮರುಬ್ರಾಂಡೆಡ್ ಆವೃತ್ತಿಯಾಗಿ ಬಿಡುಗಡೆ ಮಾಡಲಾಗಿತ್ತು ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 425 SoC ಯೊಂದಿಗೆ ಚಾಲಿತವಾಗಿದ್ದು, ಆಂಡ್ರಾಯ್ಡ್ 8 ಓರಿಯೊ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು 1GB RAM ಅನ್ನು ಹೊಂದಿದೆ.

ಇದಲ್ಲದೆ ಈ ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 2 ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ. ಅಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTV, ವೈ-ಫೈ, GPS, ಮೈಕ್ರೋ-ಯುಎಸ್‌ಬಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ.


Click it and Unblock the Notifications




