ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ ಬಿಡುಗಡೆ? ವಿಶೇಷತೆ ಏನು?
ಮೊಬೈಲ್ ವಲಯದ ಎವರ್‌ಗ್ರೀನ್ ಬ್ರ್ಯಾಂಡ್ ನೋಕಿಯಾ ತನ್ನ ಗುಣಮಟ್ಟದ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಫೋನ್‌ಗಳನ್ನ ಪರಿಚಯಿಸಿರುವ ನೋಕಿಯಾ ಹೆಚ್‌ಎಂಡಿ ಗ್ಲೋಬಲ್ ಇದೀಗ ತನ್ನ ಹೊಸ ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿದ್ದ ನೋಕಿಯಾ 2V ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಸದ್ಯ ಇದು ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ, ದಪ್ಪ ಬೆಜೆಲ್‌ಗಳನ್ನು ಹೊಂದಿರುವ ಪರದೆ ಮತ್ತು 2 ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ.

ಹೌದು, ನೋಕಿಯಾ ಸಂಸ್ಥೆ ತನ್ನ ಹೊಸ ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಸಹ ನೀಡಲಾಗಿದ್ದು, ಇದನ್ನು ಸಿಂಗಲ್ RAM ಮತ್ತು ಶೇಖರಣಾ ಸಂರಚನೆಯಲ್ಲಿ ನೀಡಲಾಗುತ್ತದೆ. ಜೊತೆಗೆ ಇದು ಒಂದೇ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್, ಇತರ ಕೆಲವು ಬಜೆಟ್ ಸ್ನೇಹಿ ನೋಕಿಯಾ ಫೋನ್‌ಗಳಂತಲ್ಲದೆ, ಸಾಮಾನ್ಯ ಆಂಡ್ರಾಯ್ಡ್ 10 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ನೋಕಿಯಾ 2V ಟೆಲ್ಲಾ ಸ್ಮಾರ್ಟ್‌ಫೋನ್ 18: 9 ರಚನೆಯ ಅನುಪಾತ ಹೊಂದಿರುವ 5.45-ಇಂಚಿನ ಹೆಚ್‌ಡಿ +ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾಟೆಕ್ ಹಿಲಿಯೊ A22 ಪ್ರೊಸೆಸರ್ ಹೊಂದಿದ್ದು,ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 2GB RAM ಮತ್ತು 16GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 128GB ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ನೋಕಿಯಾ 2V ಟೆಲ್ಲಾ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಫ್ಲ್ಯಾಷ್ ಬೆಂಬಲದೊಂದಿದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, LTE, ಬ್ಲೂಟೂತ್ 4.2, ಜಿಪಿಎಸ್ , 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸರ್, ಸಾಮೀಪ್ಯ ಸಂವೇದಕ ಮತ್ತು ಅಕ್ಸೆಲೆರೊಮೀಟರ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 2V ಟೆಲ್ಲಾ ಸದ್ಯ ಯುಎಸ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಇದರ ಸಿಂಗಲ್ ವೇರಿಯೆಂಟ್ 2GB + 16GB ಬೆಲೆ $168 (ಅಂದಾಜು ರೂ. 12,400) ಆಗಿದೆ. ಇದನ್ನು ನೀಲಿ ಬಣ್ಣದ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications