Home
ಸುದ್ದಿಜಾಲ

ನೋಕಿಯಾ 5.3 ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗ!

ಟೆಕ್‌ಮಾರುಕಟ್ಟೆಯಲ್ಲಿ HMD ಗ್ಲೋಬಲ್‌ ಒಡೆತನದ ಎವರ್‌ಗ್ರೀನ್‌ ಮೊಬೈಲ್‌ ಬ್ರ್ಯಾಂಡ್‌ ನೋಕಿಯಾ ಕಂಪೆನಿ ತನ್ನ ಗುಣಮಟ್ಟದ ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 19 ರಂದು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎಂದು ಹೇಳಲಾಗ್ತಿದೆ.

ಹೌದು

ಹೌದು, ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ ನೋಕಿಯಾ ಈಗಾಗ್ಲೇ ನೋಕಿಯಾ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸಂಚಲನ ಸೃಷ್ಟಿಸಿತ್ತು. ಇದೀಗ ತನ್ನ ಹೊಸ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಅನ್ನು ಮಾರ್ಚ್‌ 19 ರಂದು ಬಿಡುಗಡೆ ಮಾಡಲಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಏನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ನೋಕಿಯಾ 5.3 ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಬಿಡುಗಡೆಗೆ ಸಜ್ಜಾಗಿರುವ ನೋಕಿಯಾ 5.3 ಸ್ಮಾರ್ಟ್‌ಫೋನ್‌ 1080 x 2220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿರುವ 6.55 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ನಾಚ್‌ ಶೈಲಿಯನ್ನ ಹೊಂದಿದ್ದು, ಡಿಸ್‌ಪ್ಲೇ ರಚನೆ 18.5: 9 ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಡಿಸ್‌ಪ್ಲೇ ರಕ್ಷಣೆಗಾಗಿ ಗೋರಿಲ್ಲಾ ಗ್ಲಾಸ್‌ ಅನ್ನು ನೀಡಲಾಗಿರುತ್ತದೆ ಎಂದು ಹೇಳಲಾಗ್ತಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ನೋಕಿಯಾ 5.3 ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 660/665 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ 3GB ಮತ್ತು 4GBಯ ಕಡಿಮೆ RAM ಆವೃತ್ತಿಗಳಲ್ಲಿಯೂ ಈ ಸ್ಮಾರ್ಟ್‌ಫೋನ್‌ ಬರುವ ನಿರೀಕ್ಷೆಯಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಎನ್ನಲಾಗ್ತಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರಲಿದ್ದು, ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌, ಅನ್ನು ಬೆಂಬಲಿಸಲಿದೆ. ಅಲ್ಲದೆ ಆಂಬಿಯೆಂಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋ ಮೀಟರ್‌, ಇ-ಕಾಂಪಸ್‌, ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ $180 (ಅಂದಾಜು 13,324.ರೂ,)ಬೆಲೆಯನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಚಾರ್ಕೋಲ್ ಮತ್ತು ಸಯಾನ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

Best Mobiles in India

English summary
Nokia 5.3 specifications and pricing leaked.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+