ಸದ್ಯದಲ್ಲೇ ಭಾರತದಕ್ಕೆ ಲಗ್ಗೆ ಇಡಲಿದೆ ನೋಕಿಯಾ 5.3 ಸ್ಮಾರ್ಟ್‌ಫೋನ್‌!

|

ಎವರ್‌ಗ್ರೀನ್‌ ಮೊಬೈಲ್‌ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ನೋಕಿಯಾ ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದೆ. ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೋಕಿಯಾ 5.3 ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇದೀಗ ಸದ್ಯದಲ್ಲೇ ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಂದು ಮಾಹಿತಿ ಹೊರಹಾಕಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿಯು ತನ್ನ ಹೊಸ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ಹೊಂದಿದ್ದು, 4GB/6GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗಾದರೇ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಎನ್ನುವುದು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ನೋಕಿಯಾ 5.3 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.55 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ ಎಚ್‌ಡಿ + ಡಿಸ್‌ಪ್ಲೇ ಆಗಿದ್ದು 20: 9 ರಚನೆಯ ಅನುಪಾತವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಟಿಯರ್‌ಡ್ರಾಪ್ ಆಕಾರದ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ಯಾನೆಲ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಮತ್ತು ಮೆಮೊರಿ

ಪ್ರೊಸೆಸರ್‌ ಮತ್ತು ಮೆಮೊರಿ

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ವೆಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ 512GB ವೆರೆಗೆ ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ 118 ಡಿಗ್ರಿ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌, ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೊ ಶೂಟರ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಎಲ್‌ಇಡಿ ಫ್ಲಾಶ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಅನ್ನು ಹೊಂದಿದ್ದು, 10w ವೇಗದ ಚಾರ್ಜಿಂಗ್‌ ಬೆಂಬಲ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌ v4, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌-ಸಿ, ಎಫ್‌ಎಮ ರೇಡಿಯೊ, 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ. ಈ ಫೋನ್ ಬೆಲೆಯು ಬೆಲೆ 189 ಯುರೋ ಆಗಿದೆ. (ಭಾರತದಲ್ಲಿ ಅಂದಾಜು 15,200ರೂ) ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗುವ ನಿರೀಕ್ಷೆಗಳಿವೆ. ಈ ಸ್ಮಾರ್ಟ್‌ಫೋನ್ ಚಾರ್ಕೋಲ್ ಮತ್ತು ಸಯಾನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
HMD Global has confirmed Nokia 5.3 is coming to India very soon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X