Home
ಸುದ್ದಿಜಾಲ

ಅಮೆಜಾನ್ ಸೇಲ್‌ನಲ್ಲಿ ನೋಕಿಯಾ 5.3 ಫೋನ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

ಸದ್ಯ ಅಮೆಜಾನ್ ಇ-ಕಾಮರ್ಸ್‌ ತಾಣದಲ್ಲಿ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್‌ ಮೇಳವು ನಡೆಯುತ್ತಿದೆ. ಈ ಸೇಲ್‌ ಮೇಳದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಇದ್ದು, ಆ ಲಿಸ್ಟ್‌ನಲ್ಲಿ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳು ಕಾಣಿಸಿಕೊಂಡಿವೆ. ಆ ಪೈಕಿ ಜನಪ್ರಿಯ ನೋಕಿಯಾ ಕಂಪನಿಯ ನೋಕಿಯಾ 5.3 ಫೋನ್ ಸಹ ರಿಯಾಯಿತಿ ದರದಲ್ಲಿ ಲಭ್ಯವಿದ್ದು, ಖರೀದಿಗೆ ಉತ್ತಮ ಟೈಮ್ ಅನಿಸಿದೆ.

ಅಮೆಜಾನ್

ಹೌದು, ಅಮೆಜಾನ್ ತಾಣವು ಆಯೋಜಿಸಿರುವ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್‌ ಮೇಳವು ಈಗ ಚಾಲ್ತಿ ಇದ್ದು, ಇದೇ ಡಿ.25ರ ವರೆಗೂ ಇರಲಿದೆ. ಇನ್ನು ಈ ಫೆಸ್ಟ್‌ನಲ್ಲಿ ನೋಕಿಯಾ 5.3 ಫೋನ್‌ಗೆ ವಿಶೇಷ ಡಿಸ್ಕೌಂಟ್‌ ಪಡೆದಿದ್ದು, 11,999ರೂ.ಗಳಿಗೆ ಸಿಗಲಿದೆ. ಹಾಗೆಯೇ ಆಯ್ದ ಬ್ಯಾಂಕ್‌ ಮೂಲಕ ಶೇ. 10% ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದ್ದು, 10,800ರೂ.ಗೆ ಲಭ್ಯವಾಗಲಿದೆ. ಹಾಗಾದರೇ ನೋಕಿಯಾ 5.3 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.55 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ ಎಚ್‌ಡಿ + ಡಿಸ್‌ಪ್ಲೇ ಆಗಿದ್ದು 20: 9 ರಚನೆಯ ಅನುಪಾತವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಟಿಯರ್‌ಡ್ರಾಪ್ ಆಕಾರದ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಇದು ಇನ್‌ಸೆಲ್‌ ಡಿಸ್‌ಪ್ಲೇ ಆಗಿದ್ದು ರಕ್ಷಣೆಗಾಗಿ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ಯಾನೆಲ್‌ ಅನ್ನು ಒಳಗೊಂಡಿದೆ. ಇದು ಡಿಸ್‌ಪ್ಲೇಯನ್ನು ದೂಳು ಮತ್ತು ನೀರಿನಿಂದ ರಕ್ಷಿಸುತ್ತದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ವೆಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB/64GB ಮತ್ತು 6GB/64GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆ ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ 512GB ವೆರೆಗೆ ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ 118 ಡಿಗ್ರಿ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌, ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೊ ಶೂಟರ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಎಲ್‌ಇಡಿ ಫ್ಲಾಶ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಅನ್ನು ಹೊಂದಿದ್ದು, 10w ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆಯಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌ v4, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌-ಸಿ, ಎಫ್‌ಎಮ ರೇಡಿಯೊ, 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಸಹ ಹೊಂದಿದೆ. ಅಲ್ಲದೆ ರಿಯರ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

Best Mobiles in India

English summary
Nokia 5.3 was launched back in August and it is available for one of the lowest prices right now on Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+