ದೇಶಿಯ ಮಾರುಕಟ್ಟೆಗೆ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಎಂಟ್ರಿ!

|

ಮೊಬೈಲ್ ಪ್ರಿಯರ್ ಎವರ್‌ಗ್ರೀನ್ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ನೋಕಿಯಾ ತನ್ನ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಅನ್ನು ಇದೀಗ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ತ್ತು. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 10 ಓಎಸ್‌ ಸಫೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಬಜೆಟ್ ಸ್ನೇಹಿ ಬೆಲೆಯನ್ನು ಹೊಂದಿದೆ.

ನೋಕಿಯಾ 5.3

ಹೌದು, ನೋಕಿಯಾ ಸಂಸ್ಥೆಯು ಇದೀಗ ಭಾರತದಲ್ಲಿ ನೋಕಿಯಾ 5.3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದೆ. ಹಾಗೆಯೇ 4GB/64GB ಮತ್ತು 6GB/64GB ಸ್ಟೋರೇಜ್ ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 13,999 ರೂ. ಆಗಿದ್ದು, ಚಾರ್ಕೋಲ್, ಸ್ಯಾಂಡ್‌ ಮತ್ತು ಕ್ಲೇನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ನೋಕಿಯಾ 5.3 ಫೋನಿನ ಇನ್ನಿತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.55 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ ಎಚ್‌ಡಿ + ಡಿಸ್‌ಪ್ಲೇ ಆಗಿದ್ದು 20: 9 ರಚನೆಯ ಅನುಪಾತವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಟಿಯರ್‌ಡ್ರಾಪ್ ಆಕಾರದ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಇದು ಇನ್‌ಸೆಲ್‌ ಡಿಸ್‌ಪ್ಲೇ ಆಗಿದ್ದು ರಕ್ಷಣೆಗಾಗಿ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ಯಾನೆಲ್‌ ಅನ್ನು ಒಳಗೊಂಡಿದೆ. ಇದು ಡಿಸ್‌ಪ್ಲೇಯನ್ನು ದೂಳು ಮತ್ತು ನೀರಿನಿಂದ ರಕ್ಷಿಸುತ್ತದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ವೆಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB/64GB ಮತ್ತು 6GB/64GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆ ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ 512GB ವೆರೆಗೆ ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ 118 ಡಿಗ್ರಿ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌, ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೊ ಶೂಟರ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಎಲ್‌ಇಡಿ ಫ್ಲಾಶ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಅನ್ನು ಹೊಂದಿದ್ದು, 10w ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆಯಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌ v4, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌-ಸಿ, ಎಫ್‌ಎಮ ರೇಡಿಯೊ, 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಸಹ ಹೊಂದಿದೆ. ಅಲ್ಲದೆ ರಿಯರ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 5.3 ಸ್ಮಾರ್ಟ್‌ಫೋನ್‌ 4GB/64GB ವೇರಿಯಂಟ್ ಬೆಲೆಯು 13,999ರೂ.ಗಳಾಗಿದೆ. ಹಾಗೂ 6GB/64GB ಸ್ಟೋರೇಜ್ ವೇರಿಯಂಟ್ ದರವು 15,499ರೂ.ಗಳಾಗಿದೆ. ಇದೇ ಸೆಪ್ಟಂಬರ್ 1ರಿಂದ ನೋಕಿಯಾ ವೆಬ್‌ಸೈಟ್‌ನಲ್ಲಿ ಪ್ರೀ-ಬುಕಿಂಗ್ ಶುರುವಾಗಲಿದೆ.

Most Read Articles
Best Mobiles in India

English summary
The Nokia 5.3 features a 6.55-inch HD+ screen, a 20:9 aspect ratio, and a peak brightness of 450 nits.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X