Home
ಸುದ್ದಿಜಾಲ

ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ನೋಕಿಯಾ 5.4 ಸ್ಮಾರ್ಟ್‌ಫೋನ್‌ ಎಂಟ್ರಿ!

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಹೆಚ್‌ಎಂಡಿ ಗ್ಲೋಬಲ್‌ ಒಡೆತನದ ನೋಕಿಯಾ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಮುಂದಾಗಿದೆ. ಸದ್ಯ ಭಾರತದಲ್ಲಿ ನೋಕಿಯಾ 5.4 ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಪಟ್ಟಿಮಾಡಲಾಗಿದೆ. ಇದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ 'ಶೀಘ್ರದಲ್ಲೇ ಬರಲಿದೆ' ಎಂದು ಪಟ್ಟಿ ಮಾಡಲಾಗಿದೆ.

ನೋಕಿಯಾ 5.4

ಹೌದು, ನೋಕಿಯಾ ಕಂಪೆನಿ ತನ್ನ ನೋಕಿಯಾ 5.4 ಸ್ಮಾರ್ಟ್‌ಫೋನ್‌ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಮಾಡಲಿದೆ. ವಿಶೇಷವೆಂದರೆ, ನೋಕಿಯಾ 5.4 ಅನ್ನು ಈಗಾಗಲೇ ಯುರೋಪಿಯನ್ ಮಾರುಕಟ್ಟೆಯಲ್ಲಿ ಘೋಷಿಸಲಾಗಿದೆ. ಅಲ್ಲದೆ ಫೆಬ್ರವರಿ 15 ರಂದು ಯುಎಸ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 10 ರಂದು ಭಾರತದಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ ಆದರೂ ಇನ್ನು ಬಿಡುಗಡೆಯ ದಿನಾಂಕ ಬಹಿರಂಗಗೊಂಡಿಲ್ಲ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಈಗಾಗಲೇ ಬಹಿರಂಗಗೊಂಡಿದೆ. ಅದೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನೋಕಿಯಾ 5.4 ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.39 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 81.9% ರಷ್ಟಿದೆ. ಇನ್ನು ಈ ಡಿಸ್‌ಪ್ಲೇ ಪಂಚ್‌ ಹೋಲ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ನೋಕಿಯಾ 5.4 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ಗಳ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಮುಂಭಾಗದ ಕ್ಯಾಮೆರಾ 60 ಎಫ್‌ಪಿಎಸ್ ವಿಡಿಯೋ ರೆಕಾರ್ಡಿಂಗ್ ಮತ್ತು ಕಲರ್ ಗ್ರೇಡಿಂಗ್‌ನೊಂದಿಗೆ ಸಿನಿಮೀಯ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,000mAh ಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಎರಡು ದಿನಗಳವರೆಗೆ ಇರುತ್ತದೆ ಎಂದು ಹೇಳಲಾಗಿದೆ. ಇದು AI ನೆರವಿನ ಅಡಾಪ್ಟಿವ್ ಬ್ಯಾಟರಿ ತಂತ್ರಜ್ಞಾನವನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 5.4 ಸ್ಮಾರ್ಟ್‌ಫೋನ್‌ 4GB RAM ಮತ್ತು 128 GB ಸ್ಟೋರೇಜ್ ರೂಪಾಂತರಕ್ಕೆ ಸುಮಾರು 18,000 ರೂ. ಹಾಗೂ 4GB RAM + 64GB ಶೇಖರಣಾ ಮಾದರಿಗೆ ಅಂದಾಜು 16,900 ರೂ. ಬೆಲೆ ಇರಲಿದೆ ಎಂದು ನಿರೀಕ್ಷಿಲಾಗಿದೆ. ಡಸ್ಕ್‌ ಮತ್ತು ಪೋಲಾರ್ ನೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

Best Mobiles in India

English summary
Nokia 5.4 could launch in India soon.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+