Home
ಸುದ್ದಿಜಾಲ

ಭಾರತದಲ್ಲಿ ನೋಕಿಯಾ 5.4 ಮತ್ತು ನೋಕಿಯಾ 3.4 ಲಾಂಚ್‌ಗೆ ದಿನಾಂಕ ನಿಗದಿ!

ತನ್ನ ಬಹುನಿರೀಕ್ಷಿತ ನೋಕಿಯಾ 5.4 ಮತ್ತು ನೋಕಿಯಾ 3.4 ಸ್ಮಾರ್ಟ್‌ಫೋನ್‌ ಮಾಡೆಲ್‌ಗಳನ್ನು ದೇಶದಲ್ಲಿ ಲಾಂಚ್ ಮಾಡಲು ದಿನಾಂಕ ನಿಗದಿ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯು ಸುಮಾರು 15000ರೂ.ಗಳ ಆಸುಪಾಸಿನಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ.

ನೋಕಿಯಾ

ಹೌದು, ನೋಕಿಯಾ HMD ಕಂಪನಿಯು ಇದೇ ಫೆಬ್ರವರಿ 10ರಂದು ಭಾರತದಲ್ಲಿ ನೋಕಿಯಾ 5.4 ಮತ್ತು ನೋಕಿಯಾ 3.4 ಅನ್ನು ಬಿಡುಗಡೆ ಮಾಡಲು ಅಧಿಕೃತವಾಗಿ ಡೇಟ್‌ ಫಿಕ್ಸ್‌ ಮಾಡಿಕೊಂಡಿದೆ. ಇನ್ನು ಈ ಎರಡು ಮಾಡೆಲ್‌ಗಳು 4000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ನೋಕಿಯಾ 3.4 ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿದೆ ಹಾಗೂ ನೋಕಿಯಾ 5.4 ಸ್ನ್ಯಾಪ್‌ಡ್ರಾಗನ್‌ 662 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗಾದರೇ ನೋಕಿಯಾ 5.4 ಮತ್ತು ನೋಕಿಯಾ 3.4 ಸ್ಮಾರ್ಟ್‌ಫೋನಿನ ಇನ್ನುಳಿದ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ 3.4 ಡಿಸ್‌ಪ್ಲೇ

ನೋಕಿಯಾ 3.4 ಡಿಸ್‌ಪ್ಲೇ

ನೋಕಿಯಾ 3.4 ಸ್ಮಾರ್ಟ್‌ಫೋನ್‌ 720x1,560 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.39 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 400 nits ಬ್ರೈಟ್ನೆಸ್‌ ಪಡೆದಿದೆ.

ನೋಕಿಯಾ 3.4 ಪ್ರೊಸೆಸರ್‌

ನೋಕಿಯಾ 3.4 ಪ್ರೊಸೆಸರ್‌

ನೋಕಿಯಾ 3.4 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಸಫೋರ್ಟ್‌ ಪಡೆದಿದೆ. ಹಾಗೆಯೇ 3GB ಮತ್ತು 4GB RAM ಜೊತೆಗೆ 32GB ಮತ್ತು 64GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳು ನೀಡಲಾಗಿದೆ.

ನೋಕಿಯಾ 3.4 ಕ್ಯಾಮೆರಾ

ನೋಕಿಯಾ 3.4 ಕ್ಯಾಮೆರಾ

ನೋಕಿಯಾ 3.4 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್‌ ನಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, LED ಫ್ಲ್ಯಾಶ್‌ ಸೌಲಭ್ಯವನ್ನು ಒಳಗೊಂಡಿದೆ.

ನೋಕಿಯಾ 3.4 ಬ್ಯಾಟರಿ

ನೋಕಿಯಾ 3.4 ಬ್ಯಾಟರಿ

ನೋಕಿಯಾ 3.4 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇದರೊಂದಿಗೆ 10W ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇನ್ನು ಈ ಫೋನ್ ಬ್ಲೂಟೂತ್, GPS/ A-GPS, USB Type-C, FM, ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿದೆ.

ನೋಕಿಯಾ 5.4 ಫೀಚರ್ಸ್‌

ನೋಕಿಯಾ 5.4 ಫೀಚರ್ಸ್‌

ನೋಕಿಯಾ 5.4 ಸ್ಮಾರ್ಟ್‌ಫೋನ್ 6.39 ಇಂಚಿನ LCD ಡಿಸ್‌ಪ್ಲೇಯನ್ನು ಪಡೆದಿದ್ದು, ಹೆಚ್‌ಡಿ ಪ್ಲಸ್‌ ರೆಸಲ್ಯೂಶನ್‌ ಒಳಗೊಂಡಿದೆ. ಹಾಗೆಯೇ 4GB RAM ಮತ್ತು 64GB/128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಕ್ವಾಡ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ.

Best Mobiles in India

English summary
HMD Global is gearing up to launch Nokia 5.4 and Nokia 3.4 in India on February 10, according to a report by GizmoChona.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+