Home
ಸುದ್ದಿಜಾಲ

ಭಾರತದಲ್ಲಿ ನೋಕಿಯಾ 5.4 ಸ್ಮಾರ್ಟ್‌ಫೋನ್ ಮಾರಾಟ ಶುರು; ಬೆಲೆ ಎಷ್ಟು?

ನೋಕಿಯಾ ಇತ್ತೀಚಿಗೆ ಬಿಡುಗಡೆ ಮಾಡಿರುವ 'ನೋಕಿಯಾ 5.4' ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇಂದು ಮಾರಾಟಕ್ಕೆ ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್ 48ಎಂಪಿ ಕ್ಯಾಮೆರಾ ಮತ್ತು 16ಎಂಪಿ ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳಿಂದ ಈ ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರನ್ನು ಸೆಳೆದಿದ್ದು, ಈ ಸ್ಮಾರ್ಟ್‌ಫೋನ್ 4GB + 64GB ಮತ್ತು 6GB + 64GB ಸ್ಟೋರೇಜ್ ವೇರಿಯಂಟ್‌ ಮಾದರಿಗಳ ಆಯ್ಕೆಗಳನ್ನು ಹೊಂದಿದೆ.

ನೋಕಿಯಾ

ನೋಕಿಯಾ 5.4 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಪಡೆದಿದೆ. ಜೊತೆಗೆ ಆಂಡ್ರಾಯ್ಡ್ ಒನ್ ಓಎಸ್‌ನ ಬೆಂಬಲವನ್ನು ಪಡೆದುಕೊಂಡಿದೆ. ಡಸ್ಕ್‌ ಮತ್ತು ಪೋಲಾರ್ ನೈಟ್‌ ಬಣ್ಣಗಳ ಆಯ್ಕೆಯಲ್ಲಿದ್ದು, ಆರಂಭಿಕ 4GB RAM + 64GB ರೂಪಾಂತರದ ಬೆಲೆ 13,999 ರೂ. ಆಗಿದೆ. ನೋಕಿಯಾ ಆನ್‌ಲೈನ್‌ ಸ್ಟೋರ್‌ ಮತ್ತು ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಖರೀದಿಗೆ ಲಭ್ಯ. ಹಾಗಾದರೇ ನೋಕಿಯಾ 5.4 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ನೋಕಿಯಾ 5.4 ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.39-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5: 9 ರಚನೆಯ ಅನುಪಾತ ಮತ್ತು 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ನೋಕಿಯಾ 5.4 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ನೋಕಿಯಾ 5.4 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ 5.4 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಜಿಪಿಎಸ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 5.4 ಸ್ಮಾರ್ಟ್‌ಫೋನ್‌ 4GB RAM + 64GB ರೂಪಾಂತರಕ್ಕೆ ಬೆಲೆ 13,999 ರೂ. ಮತ್ತು 6GB RAM + 64GB ರೂಪಾಂತರದ ಬೆಲೆ ರೂ. 15,499.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂದು ಫೆಬ್ರವರಿ 17 ರಿಂದ ಫ್ಲಿಪ್‌ಕಾರ್ಟ್ ಮತ್ತು ನೋಕಿಯಾ ಇಂಡಿಯಾ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಲಭ್ಯ. ಇದು ಡಸ್ಕ್‌ ಮತ್ತು ಪೋಲಾರ್ ನೈಟ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Nokia 5.4 price in India is set at Rs. 13,999 for the 4GB + 64GB storage variant, while the 6GB + 64GB storage model is priced at Rs. 15,499.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+