ನೋಕಿಯಾ 5.4 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರ್ಯಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ನೋಕಿಯಾ ಸಂಸ್ಥೆ ಕೆಲ ದಿನಗಳ ಹಿಂದೆಯಷ್ಟೇ ನೋಕಿಯಾ 2.4 ಅನ್ನು ಬಿಡುಗಡೆ ಮಾಡಿತ್ತು. ಸದ್ಯ ಇದೀಗ ನೋಕಿಯಾ ಕಂಪೆನಿ ತನ್ನ ನೋಕಿಯಾ 5.4 ಬಿಡುಗಡೆಗೆ ಸಿದ್ದತೆ ನಡೆಸಿದೆ. ಇನ್ನು ನೋಕಿಯಾ 5.4 ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದ್ದು, ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಹೌದು, ನೋಕಿಯಾ 5.4 ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ನೋಕಿಯಾ 5.4, 6.39 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, 48 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರೈಮರಿ ಕ್ಯಾಮೆರಾ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ
ನೋಕಿಯಾ 5.4 ಸ್ಮಾರ್ಟ್‌ಫೋನ್ 720x1,520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.39-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 19: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ವೀಡಿಯೊ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ನೋಕಿಯಾ 5.4 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ನೋಕಿಯಾ 5.4 ಸ್ಮಾರ್ಟ್‌ಫೋನ್ 4,000 ಎಮ್ಎಹೆಚ್ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಈ ಫೋನ್ ಬ್ಲೂ ಮತ್ತು ಪರ್ಪಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ.


Click it and Unblock the Notifications








