ಸದ್ಯದಲ್ಲೇ ನೋಕಿಯಾ 5.4 ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ವಿಶೇಷತೆ ಏನು?
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರ್ಯಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ನೋಕಿಯಾ ಸಂಸ್ಥೆ ಇದೀಗ ತನ್ನ ಹೊಸ ನೋಕಿಯಾ 5.4 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದ್ದು, ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 675 ಪ್ರೊಸೆಸರ್ ವೇಗವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ನೋಕಿಯಾ 5.4 ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗ್ತಿದೆ. ಇದು 4GB RAM ಮತ್ತು 128GB ಸ್ಟೋರೇಜ್, ಹಾಗೂ 4GB RAM ಮತ್ತು 64GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಮಾದರಿ
ನೋಕಿಯಾ 5.4 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರುವ ಸಾಧ್ಯತೆ ಇದೆ. ಹಾಗೇಯೆ 85.3% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ಹೊಂದಿರಲಿದೆ.

ಪ್ರೊಸೆಸರ್ ಬಲ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 128GB ಸ್ಟೋರೇಜ್, ಹಾಗೂ 4GB RAM ಮತ್ತು 64GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ ವಿಶೇಷ
ನೋಕಿಯಾ 5.4 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ನಲ್ಲಿ ಬರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 32 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್ ಸಿ 2.0 ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿದೆ ಎಂದು ಹೇಳಲಾಗುತ್ತಿದೆ.


Click it and Unblock the Notifications