ಭಾರತದಲ್ಲಿ ನೋಕಿಯಾ 5.4 ಸ್ಮಾರ್ಟ್‌ಫೋನ್ ಬಿಡುಗಡೆ !..ಬೆಲೆ ಎಷ್ಟು?
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರಾಂಡ್ ಎನಿಸಿಕೊಂಡಿದೆ. ಇನ್ನು ನೋಕಿಯಾ ಮೊಬೈಲ್ ಬ್ರಾಂಡ್ ಪರವಾನಗಿ ಪಡೆದ ಎಚ್‌ಎಂಡಿ ಗ್ಲೋಬಲ್‌ನಿಂದ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಈಗಾಗಲೇ ಪರಿಚಯಿಸಲಾಗಿದೆ. ಸದ್ಯ ಇದೀಗ ನೋಕಿಯಾ ತನ್ನ ಹೊಸ ಬಜೆಟ್ ಸ್ನೇಹಿ ಫೋನ್‌ಗಳಾಗಿ ನೋಕಿಯಾ 5.4 ಮತ್ತು ನೋಕಿಯಾ 3.4 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರಲ್ಲಿ ನೋಕಿಯಾ 5.4 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪ್ಯಾಕ್ ಮಾಡಿದರೆ, ನೋಕಿಯಾ 3.4 ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ನೋಕಿಯಾ ಕಂಪೆನಿ ತನ್ನ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ SoC ಪ್ರೊಸೆಸರ್ ಅನ್ನು ಹೊಂದಿವೆ. ನೋಕಿಯಾ 5.4 ಮತ್ತು ನೋಕಿಯಾ 3.4 ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರಲ್ಲಿ ನೋಕಿಯಾ 5.4 ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ನೋಕಿಯಾ 5.4 ಸ್ಮಾರ್ಟ್‌ಫೋನ್ 720x1,560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.39-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5: 9 ರಚನೆಯ ಅನುಪಾತ ಮತ್ತು 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ನೋಕಿಯಾ 5.4 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಜಿಪಿಎಸ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 5.4 ಸ್ಮಾರ್ಟ್‌ಫೋನ್ 4GB RAM + 64GB ರೂಪಾಂತರಕ್ಕೆ ಬೆಲೆ 13,999 ರೂ. ಮತ್ತು 6GB RAM + 64GB ರೂಪಾಂತರದ ಬೆಲೆ ರೂ. 15,499.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 17 ರಿಂದ ಫ್ಲಿಪ್‌ಕಾರ್ಟ್ ಮತ್ತು ನೋಕಿಯಾ ಇಂಡಿಯಾ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದ್ದು, ಇದು ಡಸ್ಕ್ ಮತ್ತು ಪೋಲಾರ್ ನೈಟ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications
