ನೋಕಿಯಾ 5.4 ಸ್ಮಾರ್ಟ್‌ಫೋನ್ ಬಿಡುಗಡೆ!..ಬೆಲೆ ಎಷ್ಟು?..ಫೀಚರ್ಸ್ ಏನು?
ಜನಪ್ರಿಯ ಮೊಬೈಲ್ ಸಂಸ್ಥೆ ನೋಕಿಯಾದ ಬಹುನಿರೀಕ್ಷಿತ ನೋಕಿಯಾ 5.4 ಸ್ಮಾರ್ಟ್‌ಫೋನ್ ಇದೀಗ ಬಿಡುಗಡೆ ಆಗಿದೆ. ಈ ಮೂಲಕ ನೋಕಿಯಾ ಸಂಸ್ಥೆಯು ತನ್ನ ಸ್ಮಾರ್ಟ್‌ಫೋನ್‌ಗಳ ಲಿಸ್ಟಿಗೆ ಹೊಸದಾಗಿ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿಕೊಂಡಂತಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದಿರುವುದು ಪ್ರಮುಖ ಹೈಲೈಟ್ ಆಗಿ ಕಾಣಿಸಿಕೊಂಡಿದೆ.

ಹೌದು, ನೋಕಿಯಾ ಸಂಸ್ಥೆಯು ನೂತನವಾಗಿ ನೋಕಿಯಾ 5.4 ಸ್ಮಾರ್ಟ್‌ಫೋನ್ ಅನ್ನು ಯುರೋಪ್ ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಒಳಗೊಂಡಿದೆ. ಹಾಗೆಯೇ ಆಂಡ್ರಾಯ್ಡ್ 10 ಓಎಸ್‌ನ ಸಪೋರ್ಟ್ ಸಹ ಪಡೆದಿದೆ. ಇದರೊಂದಿಗೆ 4000mAh ಬ್ಯಾಟರಿ ಬಾಳಿಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ನೋಕಿಯಾ 5.4 ಸ್ಮಾರ್ಟ್‌ಫೋನ್ 720x1,520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.39-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 19: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ವೀಡಿಯೊ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ನೋಕಿಯಾ 5.4 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ
ನೋಕಿಯಾ 5.4 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ನೋಕಿಯಾ 5.4 ಸ್ಮಾರ್ಟ್‌ಫೋನ್ 4,000 ಎಮ್ಎಹೆಚ್ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಯುರೋಪ್‌ನಲ್ಲಿ ಈ ಫೋನ್ ಬೆಲೆಯು EUR 189 ಆಗಿದೆ. (ಭಾರತದಲ್ಲಿ ಅಂದಾಜು 16,900ರೂ)


Click it and Unblock the Notifications




