ಭಾರತದಲ್ಲಿ 'ನೋಕಿಯಾ 6.2' ಬಿಡುಗಡೆ!..ಬೆಲೆ 15,999ರೂ!
ಇತ್ತೀಚಿಗೆ ಬರ್ಲಿನ್‌ನಲ್ಲಿ ನಡೆದೆ IFA-2019 ಟೆಕ್ ಕಾರ್ಯಕ್ರಮದಲ್ಲಿ 'ನೋಕಿಯಾ' ಎಚ್‌ಎಮ್‌ಡಿ ಗ್ಲೋಬಲ್ ಹೊಸ 'ನೋಕಿಯಾ 6.2' ಸ್ಮಾರ್ಟ್‌ಫೋನ್ ಲಾಂಚ್ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಇಂದು (ಅಕ್ಟೋಬರ್ 11)ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಆಗಿದೆ. ನೋಕಿಯಾ ಪ್ರಿಯ ಗ್ರಾಹಕರಲ್ಲಿ ಕುತೂಹಲ ಮೂಡಿಸಿದ್ದ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 10 ಓಎಸ್ ಅಪ್‌ಡೇಟ್ ಸೌಲಭ್ಯ ಮತ್ತು ತ್ರಿವಳಿ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಹೌದು, ನೋಕಿಯಾ ಸಂಸ್ಥೆಯು ತನ್ನ ಬಹುನಿರೀಕ್ಷಿತ 'ನೋಕಿಯಾ 6.2' ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ (ಅಕ್ಟೋಬರ್ 11) ಇಂದು ಲಾಂಚ್ ಆಗಿದ್ದು, ಹಿಂಬದಿಯಲ್ಲಿ ವೃತ್ತಾಕಾರದ ಮಾದರಿಯಲ್ಲಿ ಮೂರು ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಸ್ನ್ಯಾಪ್‌ಡ್ರಾಗನ್ 636 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಬೆಲೆಯು 15,999ರೂ.ಗಳು ಆಗಿದೆ. ಹಾಗಾದರೇ 'ನೋಕಿಯಾ 6.2' ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ನೋಕಿಯಾ 6.2 ಡಿಸ್‌ಪ್ಲೇ
'ನೋಕಿಯಾ 6.2' ಸ್ಮಾರ್ಟ್‌ಫೋನ್ 6.3 ಇಂಚಿನ ಫೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, 1080 x 2280 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಸ್ಕ್ರೀನ್ 500nits ಬ್ರೈಟ್ನೆಸ್ ಪಡೆದಿದೆ. ಹಾಗೆಯೇ ಫೋನ್ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ನೀಡಲಾಗಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಸಾಂದ್ರತೆಯ ಅನುಪಾತವು 400 ppi ಆಗಿದೆ. ಹಾಗೆಯೇ 159.88x75.11x8.25mm ಸುತ್ತಳತೆಯನ್ನು ಪಡೆದಿದೆ.
ನೋಕಿಯಾ 6.2 ಪ್ರೊಸೆಸರ್
'ನೋಕಿಯಾ 6.2' ಸ್ಮಾರ್ಟ್‌ಫೋನ್ SDM636 ಸ್ನ್ಯಾಪ್‌ಡ್ರಾಗನ್ 636 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 9 ಪೈ ಓಎಸ್ ಇದ್ದು, ಈ ವರ್ಷದ ಅಂತ್ಯದ ವೇಳೆಗೆ ಆಂಡ್ರಾಯ್ಡ್ 10 ಓಎಸ್ ಅಪ್‌ಡೇಟ್ ಆಗಲಿದೆ. ಈ ಸ್ಮಾರ್ಟ್‌ಫೋನ್ 3GB RAM + 32GB ಆಂತರಿಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯವಾಗಿ 512GB ವಿಸ್ತರಿಸುವ ಅವಕಾಶವನ್ನು ಪಡೆದಿದೆ.
ನೋಕಿಯಾ 6.2 ಕ್ಯಾಮೆರಾ
ನೋಕಿಯಾ 6.2 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್‌ನೊಂದಿಗೆ 16ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು f/2.2 ಅಪರ್ಚರ್ ಜೊತೆಗೆ 8ಎಂಪಿ ಸೆನ್ಸಾರ್‌ನಲ್ಲಿದೆ ಇನ್ನು ತೃತಿಯ ಕ್ಯಾಮೆರಾವು ಡೆಪ್ತ್ ಸೆನ್ಸಾರ್ ಒಳಗೊಂಡಿದ್ದು, 5ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿದೆ.
ನೋಕಿಯಾ 6.2 ಬ್ಯಾಟರಿ
ನೋಕಿಯಾ 6.2 ಸ್ಮಾರ್ಟ್‌ಫೋನ್ 3,500 mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದುಕೊಂಡಿರುವ ನೋಕಿಯಾ 6.2 ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಬ್ಲೂಟೂತ್ 5.0, ಯುಎಸ್‌ಬಿ ಟೈಪ್ ಸಿ ಪೋರ್ಟ್, 4G LTE, ಜಿಪಿಎಸ್ ಕನೆಕ್ಟಿವಿಟಿ, ಆಡಿಯೊ ಜಾಕ್ ಸೌಲಭ್ಯಗಳನ್ನು ಸಹ ಒಳಗೊಂಡಿದೆ.
ನೋಕಿಯಾ 6.2 ಬೆಲೆ
ನೋಕಿಯಾ 6.2 ಸ್ಮಾರ್ಟ್‌ಫೋನ್ 3GB RAM + 32GB ವೇರಿಯಂಟ್ ಬೆಲೆಯು 15,999ರೂ.ಗಳಾಗಿದ್ದು, ಅಮೆಜಾನ್ ತಾಣದಲ್ಲಿ ಖರೀದಿಗೆ ಲಭ್ಯವಿದೆ. ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸೇರಿದಂತೆ ಆಯ್ದ ಕೆಲ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಕ್ಯಾಶ್‌ಬ್ಯಾಕ್ ಸೌಲಭ್ಯವು ಸಹ ಸಿಗಲಿದೆ.


Click it and Unblock the Notifications








