ಭಾರೀ ಬೆಲೆ ಇಳಿಕೆ ಕಂಡ 'ನೋಕಿಯಾ 8.1' ಸ್ಮಾರ್ಟ್‌ಫೋನ್!

|

ವಿಶ್ವದಲ್ಲಿಯೇ ಜನಪ್ರಿಯತೆ ಪಡೆದಿರುವ 'ನೋಕಿಯಾ' ಕಂಪನಿಯ ಆಂಡ್ರಾಯ್ಡ್ ಓಎಸ್‌ ಮಾದರಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಅವುಗಳಲ್ಲಿ ಕಳೆದ ವರ್ಷ ರಿಲೀಸ್ ಮಾಡಿದ್ದ, 'ನೋಕಿಯಾ 8.1' ಭಾರತದ ಮಾರುಕಟ್ಟೆಯಲ್ಲಿ ಅಬ್ಬರಿಸಿತ್ತು. ಈಗ ವಿಷಯ ಏನೆಂದರೆ ದೇಶಿಯ ಮಾರುಕಟ್ಟೆಯಲ್ಲಿ 'ನೋಕಿಯಾ 8.1' ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಕುಸಿತ ಆಗಿದ್ದು, ಬಜೆಟ್‌ ಬೆಲೆಯಲ್ಲಿ ದೊರೆಯಲಿದೆ.

ಭಾರೀ ಬೆಲೆ ಇಳಿಕೆ ಕಂಡ 'ನೋಕಿಯಾ 8.1' ಸ್ಮಾರ್ಟ್‌ಫೋನ್!

ಹೌದು, ನೋಕಿಯಾ ಕಂಪನಿಯು ಅಧಿಕೃತವಾಗಿ ತನ್ನ 'ನೋಕಿಯಾ 8.1' ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಆರಂಭದಲ್ಲಿ 26,999ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿತ್ತು. ಆದ್ರೆ ಈಗ ಬೆಲೆ ಇಳಿಕೆಯಿಂದಾಗಿ 15,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಹೊಂದಿದೆ.

ಭಾರೀ ಬೆಲೆ ಇಳಿಕೆ ಕಂಡ 'ನೋಕಿಯಾ 8.1' ಸ್ಮಾರ್ಟ್‌ಫೋನ್!

ಹಾಗೆಯೇ ಪ್ರೊಸೆಸರ್‌ ಆಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲ ಪಡೆದಿದ್ದು, ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಬಾಹ್ಯ ಮೆಮೊರಿಯನ್ನು 40GB ವರೆಗೂ ವಿಸ್ತರಿಸುವ ಅವಕಾಶವನ್ನು ನೀಡಲಾಗಿದೆ. ಇದೀಗ ಬೆಲೆಯ ಇಳಿಕೆ ಕಂಡಿರುವ ನೋಕಿಯಾ 8.1 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಮತ್ತು ಲಭ್ಯತೆಯ ಬಗ್ಗೆ ಮುಂದೆ ನೋಡೋಣ.

ಓದಿರಿ : ಸ್ಮಾರ್ಟ್‌ಫೋನ್ ಸ್ಕ್ರೀನ್‌ಟಚ್ ವರ್ಕ್‌ ಮಾಡುತ್ತಿಲ್ಲವೇ?..ಹೀಗೆ ಮಾಡಿ!ಓದಿರಿ : ಸ್ಮಾರ್ಟ್‌ಫೋನ್ ಸ್ಕ್ರೀನ್‌ಟಚ್ ವರ್ಕ್‌ ಮಾಡುತ್ತಿಲ್ಲವೇ?..ಹೀಗೆ ಮಾಡಿ!

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ನೋಕಿಯಾ 8.1 ಸ್ಮಾರ್ಟ್‌ಫೋನ್ 6.18 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇನನ್ನು ಹೊಂದಿದ್ದು, ಡಿಸ್‌ಪ್ಲೇಯು 1080x2244 ಪಿಕ್ಸಲ್ ರೆಸಲ್ಯೂಶನ್ ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 18.7:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ. 81.5% ಆಗಿದೆ. ಡಿಸ್‌ಪ್ಲೇಯ ಸುತ್ತಲೂ 2.5D ಕರ್ವ್‌ ರಚನೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ನೋಕಿಯಾ 8.1 ಸ್ಮಾರ್ಟ್‌ಫೋನಿನಲ್ಲಿ ಆಕ್ಟಾ-ಕೋರ್ 2.2GHz ವೇಗದೊಂದಿಗೆ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲ ಪಡೆದಿದೆ. ಹಾಗೆಯೇ 4GB RAM + 64GB ಆಂತರಿಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೋ ಎಸ್‌ಡಿ ಕಾರ್ಡ್ ಸಹಾಯದಿಂದ 400GB ವರೆಗಗೂ ಮೆಮೊರಿ ಹೆಚ್ಚಿಸುವ ಆಯ್ಕೆ ಇದೆ.

<strong>ಓದಿರಿ : ಟಿಕ್‌ಟಾಕ್‌ಗೆ ನೀವು ಹೊಸಬರೇ!..ಹಾಗಿದ್ರೆ ಈ ಟಿಪ್ಸ್‌ ಗಮನಿಸಿ!</strong> ಓದಿರಿ : ಟಿಕ್‌ಟಾಕ್‌ಗೆ ನೀವು ಹೊಸಬರೇ!..ಹಾಗಿದ್ರೆ ಈ ಟಿಪ್ಸ್‌ ಗಮನಿಸಿ!

ಡ್ಯುಯಲ್ ಕ್ಯಾಮೆರಾ

ಡ್ಯುಯಲ್ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಆಯ್ಕೆ ಹೊಂದಿದ್ದು, ಪ್ರಾಥಮಿಕ್ ಕ್ಯಾಮೆರಾವು 12ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೂ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾಗಳು Zeiss ಲೆನ್ಸ್‌ ಬೆಂಬಲದಲ್ಲಿವೆ. ಕ್ಯಾಮೆರಾಗಳು ಕೃತಕ ಬುದ್ದಿಮತ್ತೆ ತಂತ್ರಜ್ಞಾನವನ್ನು ಒಳಗೊಂಡಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್

ಬ್ಯಾಟರಿ ಮತ್ತು ಇತರೆ ಫೀಚರ್ಸ್

ನೋಕಿಯಾ 8.1 ಸ್ಮಾರ್ಟ್‌ಪೋನ್ 3,500mAh ಬ್ಯಾಟರಿ ಶಕ್ತಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಸೌಲಭ್ಯವನ್ನು ಪಡೆದಿದೆ. 4G ವೋಲ್ಟ್, Wi-Fi 802.11ac, VoWiFi, ಬ್ಲೂಟೂತ್ v5.0, GPS/ A-GPS, 3.5mm ಹೆಡ್‌ಫೋನ್ ಜ್ಯಾಕ್, USB Type-C ಪೋರ್ಟ್‌ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಹೊಂದಿದ್ದು, ಜೊತೆಗೆ ಆಂಡ್ರಾಯ್ಡ್‌ 9 ಪೈ ಓಎಸ್‌ ಸಪೋರ್ಟ್‌ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಿರುವ ನೋಕಿಯಾ 8.1 ಸ್ಮಾರ್ಟ್‌ಫೋನ್ ಗ್ರಾಹಕರಿಗೆ ಕೇವಲ 15,999ರೂ.ಗಳಿಗೆ ಲಭ್ಯವಾಗಲಿದೆ. ಗ್ರಾಹಕರು ನೋಕಿಯಾದ ಅಧಿಕೃತ ವೆಬ್‌ತಾಣದಲ್ಲಿ ಫೋನ್ ಖರೀದಿಸಬಹುದಾಗಿದ್ದು, ಹಾಗೆಯೇ ಜನಪ್ರಿಯ ಇ ಕಾಮರ್ಸ್‌ ತಾಣಗಳಾದ ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ಗಳಲ್ಲಿಯೂ ಈ ಸ್ಮಾರ್ಟ್‌ಫೋನ್ ಲಭ್ಯವಿದೆ.

ಓದಿರಿ : ಜಿಯೋ ಫೈಬರ್‌ ಎಂಟ್ರಿಗೆ ವಿಘ್ನವಾದ ಟಾಟಾಸ್ಕೈ ಬ್ರಾಡ್‌ಬ್ಯಾಂಡ್‌ನ ಹೊಸ ಆಫರ್!ಓದಿರಿ : ಜಿಯೋ ಫೈಬರ್‌ ಎಂಟ್ರಿಗೆ ವಿಘ್ನವಾದ ಟಾಟಾಸ್ಕೈ ಬ್ರಾಡ್‌ಬ್ಯಾಂಡ್‌ನ ಹೊಸ ಆಫರ್!

Best Mobiles in India

English summary
Nokia 8.1 smartphone with 4GB+64GB will now be available for Rs 15,999 in india. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X