ನೋಕಿಯಾ 8V 5G UW ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ನೋಕಿಯಾ ಕಂಪೆನಿ ಎವರ್‌ಗ್ರೀನ್‌ ಮೊಬೈಲ್‌ ಬ್ರ್ಯಾಂಡ್‌ ಎನಿಸಿಕೊಂಡಿದೆ. ತನ್ನ ಭಿನ್ನ ಫೀಚರ್ಸ್‌ ಸ್ಮಾರ್ಟ್‌ಫೋನ್‌ಗಳಿಂದ ಗಮನ ಸೆಳೆದಿರುವ ನೋಕಿಯಾ ಇದೀಗ ತನ್ನ ನೋಕಿಯಾ 8V 5G UW ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ ನೋಕಿಯಾ ಕಂಪನಿಯ ಎರಡನೇ 5G ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ 8V 5G UW ಸ್ಮಾರ್ಟ್‌ಫೋನ್‌ ಅನ್ನು ಫಿನ್‌ಲ್ಯಾಂಡ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು 6.81 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ನೋಕಿಯಾ 8V 5G UW ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಯೂರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಆಂಡ್ರಾಯ್ಡ್ 11 ಗೆ ನವೀಕರಣವನ್ನು ಸ್ವೀಕರಿಸುವ ಭರವಸೆಯನ್ನ ಸಹ ನೀಡಿದೆ. ಹಾಗೇಯೇ ಇದು 6GB RAM+64GB ಮತ್ತು 8GB RAM+128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ನೋಕಿಯಾ 8V 5G UW ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 24 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V 5.0, GPS, NFC ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ. ಇದಲ್ಲದೆ, ಫೋನ್ ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ 8V 5G UW ಸ್ಮಾರ್ಟ್‌ಫೋನ್‌ ಫಿನ್‌ಲ್ಯಾಂಡ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವುದರಿಂದ ಇದರ ಬೆಲೆಯನ್ನು $ 699.99(ಸುಮಾರು 52,000 ರೂ.) ಕ್ಕೆ ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ Meteor Grey colour ಆಯ್ಕೆಯಲ್ಲಿ ಲಭ್ಯವಾಗಲಿದೆ. ಸದ್ಯ ಇದು ನವೆಂಬರ್ 12 ರಿಂದ ಮಾರಾಟವಾಗಲಿದೆ.

Best Mobiles in India

English summary
Nokia 8 V 5G UW comes in 64GB and 128GB of onboard storage versions.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X