ಅಂತೂ ನೋಕಿಯಾ ಫೋನ್‌ಗಳಲ್ಲಿ ಈ ಬದಲಾವಣೆ ಬಂತು!..ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಎವರ್‌ಗ್ರೀನ್‌ ಮೊಬೈಲ್‌ ಬ್ರ್ಯಾಂಡ್‌ ನೋಕಿಯಾ (Nokia) ಸಂಸ್ಥೆಯ ಕೆಲವು ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಎನಿಸಿವೆ. ಆದ್ರೆ ನೋಕಿಯಾ (HMD ಗ್ಲೋಬಲ್) ಇದೀಗ ಮೊದಲ ಹಂತದಲ್ಲಿ ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಆಂಡ್ರಾಯ್ಡ್‌ 13 (Android 13) ಅಪ್‌ಡೇಟ್‌ ಅಪ್‌ಡೇಟ್ ರೋಲ್‌ಔಟ್‌ಗಾಗಿ ಘೋಷಿಸಿದೆ. ಇನ್ನು ನೋಕಿಯಾ ಈಗಾಗಲೇ ತನ್ನ ಅಸ್ತಿತ್ವದಲ್ಲಿರುವ ಸ್ಮಾರ್ಟ್‌ಫೋನ್ ಶ್ರೇಣಿಯಲ್ಲಿ ಆಂಡ್ರಾಯ್ಡ್‌ 12 ರೋಲ್‌ಔಟ್ ಅನ್ನು ಪೂರ್ಣಗೊಳಿಸಿದೆ.

ಆಂಡ್ರಾಯ್ಡ್ 13 ಅಪ್‌ಡೇಟ್‌

ಹೌದು, ನೋಕಿಯಾ (Nokia) ಆಂಡ್ರಾಯ್ಡ್ 13 ಅಪ್‌ಡೇಟ್‌ಗೆ ಅರ್ಹವಾದ ಕೆಲವು ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ಪ್ರಕಟಿಸಿದೆ. ನೋಕಿಯಾ XR20 5G, ನೋಕಿಯಾ G50 5G, ನೋಕಿಯಾ G11 ಪ್ಲಸ್‌, ನೋಕಿಯಾ X20 5G ಮತ್ತು ನೋಕಿಯಾ X10 5G ಫೋನ್‌ಗಳು ಮೊದಲ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿವೆ. ಆಂಡ್ರಾಯ್ಡ್‌ 13 ಓಎಸ್‌ ಅಪ್‌ಡೇಟ್‌ ಪಡೆಯಲಿರುವ ಫೋನ್‌ಗಳ ಕೀ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಂಡ್ರಾಯ್ಡ್‌ 13 ಅಪ್‌ಡೇಟ್‌ಗೆ ಸಿದ್ಧವಾದ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌

ಆಂಡ್ರಾಯ್ಡ್‌ 13 ಅಪ್‌ಡೇಟ್‌ಗೆ ಸಿದ್ಧವಾದ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌

* ನೋಕಿಯಾ X10 5G
* ನೋಕಿಯಾ X20 5G
* ನೋಕಿಯಾ XR20 5G
* ನೋಕಿಯಾ X30 5G
* ನೋಕಿಯಾ G11 ಪ್ಲಸ್‌
* ನೋಕಿಯಾ G50 5G
* ನೋಕಿಯಾ G60 5G

ನೋಕಿಯಾ X10 5G ಸ್ಮಾರ್ಟ್‌ಫೋನ್‌

ನೋಕಿಯಾ X10 5G ಸ್ಮಾರ್ಟ್‌ಫೋನ್‌

ನೋಕಿಯಾ X10 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,470mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ನೋಕಿಯಾ X20 5G ಸ್ಮಾರ್ಟ್‌ಫೋನ್‌

ನೋಕಿಯಾ X20 5G ಸ್ಮಾರ್ಟ್‌ಫೋನ್‌

ನೋಕಿಯಾ X20 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಕೊಂಡಿದ್ದು, 8GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, 4470mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ನೋಕಿಯಾ XR20 5G ಸ್ಮಾರ್ಟ್‌ಫೋನ್‌

ನೋಕಿಯಾ XR20 5G ಸ್ಮಾರ್ಟ್‌ಫೋನ್‌

ನೋಕಿಯಾ XR20 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಫೊನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಹೊಂದಿದ್ದು, 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದರೊಂದಿಗೆ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,630mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ನೋಕಿಯಾ X30 5G ಸ್ಮಾರ್ಟ್‌ಫೋನ್‌

ನೋಕಿಯಾ X30 5G ಸ್ಮಾರ್ಟ್‌ಫೋನ್‌

ನೋಕಿಯಾ X30 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ನೋಕಿಯಾ G60 5G

ನೋಕಿಯಾ G60 5G

ನೋಕಿಯಾ G60 5G ನೋಕಿಯಾ G60 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Nokia Android 13 update schedule: These phones in the first phase.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X