ಭಾರತದಲ್ಲಿ ನೋಕಿಯಾ C 01 ಪ್ಲಸ್ ಫೋನ್ ಲಾಂಚ್! ಬೆಲೆ 5,999ರೂ.!
ನೋಕಿಯಾ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರಾಂಡ್ ಎನಿಸಿಕೊಂಡಿದೆ. ಮೊಬೈಲ್ ಮಾರುಕಟ್ಟೆಯಲ್ಲಿ ಈಗಲೂ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿರುವ ನೋಕಿಯಾ ಕಂಪೆನಿ ಹಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ನೋಕಿಯಾ C 01 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 5.45-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಒಳಗೊಂಡಿದೆ.

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ಸಿ ಸರಣಿಯಲ್ಲಿ ಹೊಸ ನೋಕಿಯಾ C 01 ಪ್ಲಸ್ ಫೋನ್ ಪರಿಚಯಿಸಿದೆ. ಇದು 5 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಫ್ಲ್ಯಾಶ್ ಬೆಂಬಲಿಸಲಿದೆ. ಜೊತೆಗೆ ಈ ಫೋನ್ 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 5,999ರೂ ಹೊಂದಿದೆ. ಹಾಗಾದ್ರೆ ಈ ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ನೋಕಿಯಾ C01 ಪ್ಲಸ್ ಸ್ಮಾರ್ಟ್‌ಫೋನ್ 720x1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 5.45-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 18:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಫೋನ್ ಪಾಲಿಕಾರ್ಬೊನೇಟ್ ಬಾಡಿಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ನೋಕಿಯಾ C01 ಪ್ಲಸ್ ಸ್ಮಾರ್ಟ್‌ಫೋನ್ 1.6GHz ಆಕ್ಟಾ-ಕೋರ್ ಯುನಿಸೋಕ್ SC9863a ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್ 11 (ಗೋ ಆವೃತ್ತಿ) ಡೇಟಾ ಬಳಕೆಯನ್ನು 60% ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಹಾಗೆಯೇ ಈ ಫೋನ್ 2GB RAM ಜೊತೆಗೆ 16GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಈ ಎರಡೂ ಕ್ಯಾಮೆರಾಗಳು ಎಲ್‌ಇಡಿ ಫ್ಲ್ಯಾಷ್ ಅನ್ನು ಬೆಂಬಲಿಸಲಿವೆ.

ಬ್ಯಾಟರಿ ಮತ್ತು ಇತರೆ
ನೋಕಿಯಾ C01 ಪ್ಲಸ್ ಸ್ಮಾರ್ಟ್‌ಫೋನ್ 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಇಡೀ ದಿನ ಬ್ಯಾಟರಿ ಬ್ಯಾಕಪ್ ನೀಡಲಿದೆ ಎಂದು ನೋಕಿಯಾ ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಯುಎಸ್‌ಬಿ ಪೋರ್ಟ್, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ C01 ಪ್ಲಸ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಏಕೈಕ 2GB RAM + 16GB ಸ್ಟೊರೇಜ್ ಆಯ್ಕೆಗೆ 5,999ರೂ. ಬೆಲೆಯನ್ನು ಹೊಂದಿದೆ. ಇದು Nokia.com, ಅಮೆಜಾನ್ ಸೇರಿದಂತೆ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ದೇಶಾದ್ಯಂತದ ಪ್ರಮುಖ ಆಫ್‌ಲೈನ್ ರಿಟೇಲ್ ಸ್ಟೋರ್‌ನಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ನೀಲಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದಲ್ಲದೆ ನೋಕಿಯಾದ ಈ ಎಂಟ್ರಿ ಲೆವೆಲ್ ಸ್ಮಾರ್ಟ್ ಫೋನ್ ಜಿಯೋ ಕಡೆಯಿಂದ ವಿಶೇಷ ಆಫರ್‌ಗಳನ್ನು ಹೊಂದಿದೆ. ಜಿಯೋ ಚಂದಾದಾರರು 10% "ತ್ವರಿತ ಬೆಲೆ ಬೆಂಬಲ" ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








