ನೋಕಿಯಾ C 1 ಪ್ಲಸ್ ಸ್ಮಾರ್ಟ್‌ಫೋನ್‌ ಬಿಡುಗಡೆ!..ಫೀಚರ್ಸ್‌ ಏನು?

|

ಎವರ್‌ಗ್ರೀನ್‌ ಮೊಬೈಲ್‌ ಬ್ರಾಂಡ್‌ ನೋಕಿಯಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ನೋಕಿಯಾ ಇದೀಗ ತನ್ನ ಹೊಸ ನೋಕಿಯಾ C 1 ಪ್ಲಸ್ ಅನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್ ಆಗಿದ್ದು, 4 ಜಿ ಸಂಪರ್ಕದೊಂದಿಗೆ ಆಂಡ್ರಾಯ್ಡ್ 10 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ C 1 ಪ್ಲಸ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಸಿಂಗಲ್‌ RAM ಮತ್ತು ಸ್ಟೋರೇಜ್‌ ಸಾಮರ್ಥ್ಯದಲ್ಲಿ ಸಿಗಲಿದೆ. ಇದು ಡಿಸ್‌ಪ್ಲೇ ಸುತ್ತಲೂ ದಪ್ಪವಾದ ಅಂಚನ್ನು ಹೊಂದಿದೆ ಜೊತೆಗೆ ಸಿಂಗಲ್‌ ರಿಯರ್‌ ಮತ್ತು ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ನೋಕಿಯಾ C1 ಪ್ಲಸ್ ಸ್ಮಾರ್ಟ್‌ಫೋನ್‌ 480x960 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.45 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 18: 9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇಯು 197 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ನೋಕಿಯಾ C1 ಪ್ಲಸ್‌ ಸ್ಮಾರ್ಟ್‌ಫೋನ್ 1.4GHz ಗಡಿಯಾರ ವೇಗದೊಂದಿಗೆ ಹೆಸರಿಸದ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿದ್ದು, ಆಮಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 1GB RAM ಮತ್ತು 16GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಎರಡೂ ಫ್ಲ್ಯಾಷ್ ಹೊಂದಿರುವ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಹೆಚ್‌ಡಿಆರ್ ಇಮೇಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ C1 ಪ್ಲಸ್ ಸ್ಮಾರ್ಟ್‌ಫೋನ್‌ 2,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ಸ್ಟ್ಯಾಂಡರ್ಡ್‌ 5W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ 4.2, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ C 1 ಪ್ಲಸ್ ಸ್ಮಾರ್ಟ್‌ಫೋನ್‌ ಏಕೈಕ 1GB RAM + 16GB ಶೇಖರಣಾ ಮಾದರಿಗೆ ಬೆಲೆ ಯುರೋ 69 (ಸುಮಾರು 6,200 ರೂ.) ಆಗಿದೆ. ಇದು ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಯುರೋಪಿಯನ್ ಮಾರುಕಟ್ಟೆಯಲ್ಲಿ ಖರೀದಿಸಲು ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಫೋನ್ ಯಾವಾಗ ಬಿಡುಗಡೆಯಾಗುತ್ತದೆ ಎಂಬುದನ್ನು ನೋಕಿಯಾ ಹಂಚಿಕೊಂಡಿಲ್ಲ.

Best Mobiles in India

English summary
Nokia C1 Plus is backed by a 2,500mAh battery that supports standard 5W charging.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X