ನೋಕಿಯಾ ಫೋನ್ ಖರೀದಿಗೆ ಇದು ಬೆಸ್ಟ್ ಟೈಮ್!..ಭಾರೀ ಬೆಲೆ ಇಳಿಕೆ!
ಮೊಬೈಲ್ ಮಾರುಕಟ್ಟೆಯಲ್ಲಿ ಟ್ರೆಂಡ್ ಸೆಟ್ಟರ್ ಆಗಿದ್ದ ನೋಕಿಯಾ ಸಂಸ್ಥೆಯು ಇತ್ತೀಚಿಗಷ್ಟೆ ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿರುವ ನೋಕಿಯಾ C12 ಮೊಬೈಲ್ ಎಂಟ್ರಿ ಲೆವೆಲ್ ವಿಭಾಗದಲ್ಲಿ ಗ್ರಾಹಕರನ್ನು ಸೆಳೆದಿದೆ. ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಮೊಬೈಲ್ ಪ್ರಿಯ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ.
ಹೌದು, ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ನಲ್ಲಿ ನೋಕಿಯಾ C12 ಫೋನ್ 20% ರಿಯಾಯಿತಿ ಪಡೆದಿದೆ. 4GB RAM + 64GB ಸ್ಟೋರೇಜ್‌ನ ಈ ಫೋನ್ ಬೆಲೆ 7,499ರೂ. ಇದ್ದು, ಈಗ 5,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಸಿಗಲಿದೆ. ಹಾಗಾದರೇ ನೋಕಿಯಾ C12 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ C12 ಡಿಸ್‌ಪ್ಲೇ ಮತ್ತು ಪ್ರೊಸೆಸರ್ ಮಾಹಿತಿ : ನೋಕಿಯಾ C12 ಸ್ಮಾರ್ಟ್‌ಫೋನ್ 6.3 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 20:9 ರ ಆಕಾರ ಅನುಪಾತವನ್ನು ಇದು ಪಡೆದಿದೆ. ಹಾಗೆಯೇ ಈ ಫೋನ್ 720 × 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಪಡೆದಿದೆ. ಇದು ಈ ಮೊಬೈಲ್ ಆಕ್ಟಾ ಕೋರ್ ಆಕ್ಟಾ ಕೋರ್ UniSoC SC9863A ಪ್ರೊಸೆಸರ್ ನಿಂದ ರನ್ ಆಗಲಿದೆ.
ನೋಕಿಯಾ C12 ಮೆಮೊರಿ ಮತ್ತು ಆಂಡ್ರಾಯ್ಡ್ ಓಎಸ್ ಮಾಹಿತಿ : ನೋಕಿಯಾ C12 ಸ್ಮಾರ್ಟ್‌ಫೋನ್ ಸಿಂಗಲ್ ವೇರಿಯಂಟ್ ಆಯ್ಕೆ ಪಡೆದಿದ್ದು, 2GB + 64GB ಸಾಮರ್ಥ್ಯದಲ್ಲಿದೆ. ಇನ್ನು ಬಳಕೆದಾರರು ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು 256 GB ವರೆಗೆ ವಿಸ್ತರಿಸಲು ಅವಕಾಶ ಒದಗಿಸಲಾಗಿದೆ. ಇನ್ನು ಈ ಫೋನ್ ಗೂಗಲ್ ನ ಆಂಡ್ರಾಯ್ಡ್ 12 ಗೋ ಎಡಿಷನ್ (Android 11 Go) ಆವೃತ್ತಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನ ಬೆಂಬಲ ಪಡೆದಿದೆ.
ನೋಕಿಯಾ C12 ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ : ನೋಕಿಯಾ C12 ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಅಲ್ಲದೇ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. LED ಫ್ಲ್ಯಾಶ್ ಸೌಲಭ್ಯ ವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 3000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 5W ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.
ನೋಕಿಯಾ C12 ಇತರೆ ಸೌಲಭ್ಯಗಳ ಆಯ್ಕೆ ಹೇಗಿವೆ : ನೋಕಿಯಾ C12 ಸ್ಮಾರ್ಟ್‌ಫೋನ್ IP52 ರೇಟಿಂಗ್ ಸ್ಲ್ಯಾಶ್ ರೆಸಿಸ್ಟೆನ್ಸ್ ಸೌಲಭ್ಯ ಪಡೆದಿದ್ದು, 160.6 × 74.3 × 8.75 ಎಂಎಂ ಸುತ್ತಳತೆ ಪಡೆದಿದೆ. ಇದರೊಂದಿಗೆ ಡ್ಯುಯಲ್ ಸಿಮ್, 4G, ವೈಫೈ 802.11 b/g/n, ಬ್ಲೂಟೂತ್ 5.2, ಜಿಪಿಎಸ್ ಸೌಲಭ್ಯ ಪಡೆದುಕೊಂಡಿದೆ.
ನೋಕಿಯಾ C12 ಬೆಲೆ ಮತ್ತು ಲಭ್ಯತೆ ಮಾಹಿತಿ : ದೇಶಿಯ ಮಾರುಕಟ್ಟೆಯಲ್ಲಿ ನೋಕಿಯಾ C12 ಸ್ಮಾರ್ಟ್‌ಫೋನ್ 2GB + 64 GB ಸ್ಟೋರೇಜ್ ಸಿಂಗಲ್ ವೇರಿಯಂಟ್ ಆಯ್ಕೆ ಪಡೆದಿದ್ದು, 2GB ವರ್ಚುವಲ್ RAM ಸಹ ದೊರೆಯುತ್ತದೆ. ಈ ಮೊಬೈಲ್ ಡಾರ್ಕ್ ಸಯಾನ್, ಲೈಟ್ ಮಿಂಟ್ ಮತ್ತು ಚಾರ್ಕೋಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications