Home
ಸುದ್ದಿಜಾಲ

ಅಗ್ಗದ ನೋಕಿಯಾ C12 ಫೋನ್‌ ಬೆಲೆ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ಎವರ್‌ಗ್ರೀನ್‌ ಮೊಬೈಲ್‌ ಬ್ರ್ಯಾಂಡ್‌ ಎನಿಸಿಕೊಂಡಿರುವ ನೋಕಿಯಾ ಸಂಸ್ಥೆಯು ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ನೋಕಿಯಾ C12 ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ವಿಭಾಗದಲ್ಲಿ ಗಮನ ಸೆಳೆದಿದೆ. ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದ್ದು, ಮತ್ತೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ.

ಹೌದು, ಅಮೆಜಾನ್‌ ತಾಣದಲ್ಲಿ ನೋಕಿಯಾ C12 ಫೋನ್‌ 13% ರಿಯಾಯಿತಿ ಪಡೆದಿದೆ. ಈ ಫೋನ್‌ ಬೆಲೆ 7,499ರೂ. ಇದ್ದು, ಸದ್ಯ 6,499ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ನೋಕಿಯಾ C12 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಗ್ಗದ ನೋಕಿಯಾ C12 ಫೋನ್‌ ಬೆಲೆ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ನೋಕಿಯಾ C12 ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ಹೇಗೆ : ನೋಕಿಯಾ C12 ಸ್ಮಾರ್ಟ್‌ಫೋನ್ 6.3 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 20:9 ರ ಆಕಾರ ಅನುಪಾತವನ್ನು ಇದು ಪಡೆದಿದೆ. ಹಾಗೆಯೇ ಈ ಫೋನ್‌ 720 × 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಪಡೆದಿದೆ. ಇದು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಆಕ್ಟಾ ಕೋರ್ UniSoC SC9863A ಪ್ರೊಸೆಸರ್‌ ನಿಂದ ಚಾಲಿತವಾಗಿದೆ.

ಅಗ್ಗದ ನೋಕಿಯಾ C12 ಫೋನ್‌ ಬೆಲೆ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ನೋಕಿಯಾ C12: ಮೆಮೊರಿ ಮತ್ತು ಓಎಸ್‌ ನೋಕಿಯಾ C12 ಸ್ಮಾರ್ಟ್‌ಫೋನ್ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, 2GB + 64GB ಸಾಮರ್ಥ್ಯದಲ್ಲಿದೆ. ಇನ್ನು ಬಳಕೆದಾರರು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು 256 GB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ. ಇನ್ನು ಈ ಫೋನ್ ಗೂಗಲ್‌ ನ ಆಂಡ್ರಾಯ್ಡ್‌ 12 ಗೋ ಎಡಿಷನ್‌ (Android 11 Go) ಆವೃತ್ತಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನ ಸಪೋರ್ಟ್‌ ಪಡೆದಿದೆ.

ಅಗ್ಗದ ನೋಕಿಯಾ C12 ಫೋನ್‌ ಬೆಲೆ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ನೋಕಿಯಾ C12 ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್‌ : ನೋಕಿಯಾ C12 ಸ್ಮಾರ್ಟ್‌ಫೋನ್‌ ಸಿಂಗಲ್‌ ಕ್ಯಾಮೆರಾ ರಚನೆ ಯನ್ನು ಪಡೆದಿದ್ದು, ಮುಖ್ಯ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಹಾಗೆಯೇ ಮುಂಭಾಗದಲ್ಲಿ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. LED ಫ್ಲ್ಯಾಶ್‌ ಸೌಲಭ್ಯ ವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 3000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 5W ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ನೋಕಿಯಾ C12 ಇತರೆ ಸೌಲಭ್ಯಗಳ ಮಾಹಿತಿ : ನೋಕಿಯಾ C12 ಸ್ಮಾರ್ಟ್‌ಫೋನ್‌ IP52 ರೇಟಿಂಗ್ ಸ್ಲ್ಯಾಶ್‌ ರೆಸಿಸ್ಟೆನ್ಸ್‌ ಸೌಲಭ್ಯ ಪಡೆದಿದ್ದು, 160.6 × 74.3 × 8.75 ಎಂಎಂ ಸುತ್ತಳತೆ ಹೊಂದಿದೆ. ಜೊತೆಗೆ ಡ್ಯುಯಲ್ ಸಿಮ್, 4G, ವೈಫೈ 802.11 b/g/n, ಬ್ಲೂಟೂತ್ 5.2, ಜಿಪಿಎಸ್‌ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ಫೋನ್‌ ಫೇಸ್‌ ಅನ್‌ಲಾಕ್‌ ಆಯ್ಕೆ ಒಳಗೊಂಡಿದೆ.

ನೋಕಿಯಾ C12 ಬೆಲೆ ಎಷ್ಟು : ಭಾರತದಲ್ಲಿ ನೋಕಿಯಾ C12 ಸ್ಮಾರ್ಟ್‌ಫೋನ್‌ 2GB + 64 GB ಸ್ಟೋರೇಜ್‌ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, 2GB ವರ್ಚುವಲ್‌ RAM ಸಹ ಲಭ್ಯವಾಗಲಿದೆ. ಇನ್ನು ಈ ಫೋನ್ ಡಾರ್ಕ್ ಸಯಾನ್, ಲೈಟ್ ಮಿಂಟ್ ಮತ್ತು ಚಾರ್ಕೋಲ್ ಕಲರ್ ಆಯ್ಕೆ ಪಡೆದಿದೆ.

Best Mobiles in India

English summary
Nokia C12 Available at Discount Price on Amazon. Check Offer Price, Specification and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+