Home
ಸುದ್ದಿಜಾಲ

ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ನೋಕಿಯಾ C12 ಲಾಂಚ್!..ಬೆಲೆ ಅಗ್ಗ!

ಎವರ್‌ಗ್ರೀನ್ ಮೊಬೈಲ್‌ ಬ್ರ್ಯಾಂಡ್‌ ನೋಕಿಯಾ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ನೋಕಿಯಾ C12 ಪರಿಚಯಿಸಿದೆ. ಇದೀಗ ಭಾರತೀಯ ಮಾರುಕಟ್ಟೆಗೆ ನೋಕಿಯಾ C12 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದ್ದು, ಈ ಫೋನ್‌ ಎಂಟ್ರಿ ಲೆವೆಲ್‌ ಮಾದರಿಯ ಸ್ಮಾರ್ಟ್‌ಫೋನ್‌ ಆಗಿದೆ. ಇದು 3000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಹೌದು, ನೋಕಿಯಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ನೋಕಿಯಾ C12 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಇನ್ನು ಆಂಡ್ರಾಯ್ಡ್‌ 12 ಗೋ ಎಡಿಷನ್‌ ಓಎಸ್‌ ಸಪೋರ್ಟ್‌ ಪಡೆದಿದ್ದು, ಆಕ್ಟಾ ಕೋರ್ UniSoC SC9863A ಪ್ರೊಸೆಸರ್‌ ಹೊಂದಿದೆ. ಇದರೊಂದಿಗೆ ಸಿಂಗಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ನೋಕಿಯಾ C12 ಲಾಂಚ್!..ಬೆಲೆ ಅಗ್ಗ!

ಹಾಗೆಯೇ ಈ ಸ್ಮಾರ್ಟ್‌ಫೋನ್‌ 2GB + 64GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದ್ದು, ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ. ಹಾಗಾದರೆ ನೋಕಿಯಾ C12 ಸ್ಮಾರ್ಟ್‌ಫೋನ್ ಬೆಲೆ ಎಷ್ಟು, ಇತರ ಫೀಚರ್ಸ್‌ ಏನು ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ C12: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ನೋಕಿಯಾ C12 ಸ್ಮಾರ್ಟ್‌ಫೋನ್ 6.3 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 20:9 ರ ಆಕಾರ ಅನುಪಾತವನ್ನು ಇದು ಪಡೆದಿದೆ. ಹಾಗೆಯೇ ಈ ಫೋನ್‌ 720 × 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಪಡೆದಿದೆ. ಇದು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಆಕ್ಟಾ ಕೋರ್ UniSoC SC9863A ಪ್ರೊಸೆಸರ್‌ ನಿಂದ ಚಾಲಿತವಾಗಿದೆ.

ನೋಕಿಯಾ C12: ಸ್ಟೋರೇಜ್‌ ಮತ್ತು ಮೆಮೊರಿ

ನೋಕಿಯಾ C12 ಸ್ಮಾರ್ಟ್‌ಫೋನ್ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, 2GB + 64GB ಸಾಮರ್ಥ್ಯದಲ್ಲಿದೆ. ಇನ್ನು ಬಳಕೆದಾರರು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ. ಇನ್ನು ಈ ಫೋನ್ ಗೂಗಲ್‌ ನ ಆಂಡ್ರಾಯ್ಡ್‌ 12 ಗೋ ಎಡಿಷನ್‌ (Android 11 Go) ಆವೃತ್ತಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನ ಸಪೋರ್ಟ್‌ ಪಡೆದಿದೆ.

ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ನೋಕಿಯಾ C12 ಲಾಂಚ್!..ಬೆಲೆ ಅಗ್ಗ!

ನೋಕಿಯಾ C12: ಕ್ಯಾಮೆರಾ ಮತ್ತು ಬ್ಯಾಟರಿ ಪವರ್

ನೋಕಿಯಾ C12 ಸ್ಮಾರ್ಟ್‌ಫೋನ್‌ ಸಿಂಗಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಹಾಗೆಯೇ ಮುಂಭಾಗದಲ್ಲಿ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. LED ಫ್ಲ್ಯಾಶ್‌ ಸೌಲಭ್ಯ ವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 3000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 5W ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ನೋಕಿಯಾ C12: ಇತರೆ ಸೌಲಭ್ಯಗಳು

ನೋಕಿಯಾ C12 ಸ್ಮಾರ್ಟ್‌ಫೋನ್‌ IP52 ರೇಟಿಂಗ್ ಸ್ಲ್ಯಾಶ್‌ ರೆಸಿಸ್ಟೆನ್ಸ್‌ ಸೌಲಭ್ಯ ಪಡೆದಿದ್ದು, 160.6 × 74.3 × 8.75 ಎಂಎಂ ಸುತ್ತಳತೆ ಹೊಂದಿದೆ. ಜೊತೆಗೆ ಡ್ಯುಯಲ್ ಸಿಮ್, 4G, ವೈಫೈ 802.11 b/g/n, ಬ್ಲೂಟೂತ್ 5.2, ಜಿಪಿಎಸ್‌ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ಫೋನ್‌ ಫೇಸ್‌ ಅನ್‌ಲಾಕ್‌ ಆಯ್ಕೆ ಒಳಗೊಂಡಿದೆ.

ಭಾರತದಲ್ಲಿ ನೋಕಿಯಾ C12 ಸ್ಮಾರ್ಟ್‌ಫೋನ್‌ 2GB + 64GB ಸ್ಟೋರೇಜ್‌ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರ ಬೆಲೆಯು 5,999ರೂ. ಆಗಿದೆ. ಇನ್ನು ಈ ಫೋನ್ ಡಾರ್ಕ್ ಸಯಾನ್, ಲೈಟ್ ಮಿಂಟ್ ಮತ್ತು ಚಾರ್ಕೋಲ್ ಕಲರ್ ಆಯ್ಕೆ ಪಡೆದಿದೆ.

Best Mobiles in India

English summary
Nokia C12 has been launched in India in a single storage option. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+