ನೋಕಿಯಾ ಸಂಸ್ಥೆಯಿಂದ C ಸರಣಿಯ ಮೂರು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ!

|

ನೋಕಿಯಾ ಕಂಪೆನಿ ಟೆಕ್‌ವಲಯದಲ್ಲಿ ಎವರ್‌ಗ್ರೀನ್‌ ಮೊಬೈಲ್‌ ಬ್ರಾಂಡ್‌ ಆಗಿ ಗುರುತಿಸಿಕೊಂಡಿದೆ. ತನ್ನ ಗುಣಮಟ್ಟದ ಫೋನ್‌ಗಳಿಂದಲೇ ಬಳಕೆದಾರರ ನೆಚ್ಚಿನ ಬ್ರ್ಯಾಂಡ್‌ ಆಗಿದೆ. ಇನ್ನು ಈಗಾಗಲೇ ಸ್ಮಾರ್ಟ್‌ಫೋನ್‌ ವಲಯದಲ್ಲೂ ನೋಕಿಯಾ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ.

ನೋಕಿಯಾ

ಹೌದು, ಎವರ್‌ಗ್ರೀನ್‌ ಮೊಬೈಲ್‌ ಬ್ರಾಂಡ್‌ ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ C5ENDI, ನೋಕಿಯಾ C2 ತವಾ, ಮತ್ತು ನೋಕಿಯಾ C2 ಟೆನ್ನೆನ್ ಅನ್ನು ಎಚ್‌ಎಂಡಿ ಗ್ಲೋಬಲ್ ಘೋಷಣೆ ಮಾಡಿದೆ. ಇನ್ನು ನೋಕಿಯಾ C5 ENDI ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ನೋಕಿಯಾ C2 ತವಾ ಮತ್ತು ನೋಕಿಯಾ C2 ಟೆನ್ನೆನ್ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ವಿನ್ಯಾಸ ಹೇಗಿದೆ, ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ನೋಕಿಯಾ C5 ENDI

ನೋಕಿಯಾ C5 ENDI

ನೋಕಿಯಾ C5 ENDI ಸ್ಮಾರ್ಟ್‌ಫೋನ್‌ 6.5 ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ನೋಕಿಯಾ C5 ENDI ಪ್ರೊಸೆಸರ್‌

ನೋಕಿಯಾ C5 ENDI ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್‌ ಹಿಲಿಯೋ P22 ಆಕ್ಟಾ-ಕೋರ್‌ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ.

ನೋಕಿಯಾ C5 ENDI ಕ್ಯಾಮೆರಾ ವಿನ್ಯಾಸ

ನೋಕಿಯಾ C5 ENDI ಕ್ಯಾಮೆರಾ ವಿನ್ಯಾಸ

ನೋಕಿಯಾ C5 ENDI ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ದೃಶ್ಯ ಪತ್ತೆ, ಎಐ ಶಾಟ್, ಪೋರ್ಟ್ರೇಟ್ ಮೋಡ್, ಎಚ್‌ಡಿಆರ್, ಬೊಕೆ ಫೀಚರ್ಸ್‌ಗಳನ್ನ ನೀಡಲಾಗಿದೆ. ಇದರಲ್ಲಿ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ನೋಕಿಯಾ C5 ENDI ಬ್ಯಾಟರಿ ಮತ್ತು ಇತರೆ

ನೋಕಿಯಾ C5 ENDI ಬ್ಯಾಟರಿ ಮತ್ತು ಇತರೆ

ನೋಕಿಯಾ C5ENDI ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಬ್ಯಾಟರಿ ಸಿಂಗಲ್‌ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಇರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಬೆಂಬಲಿಸುತ್ತದೆ ಮತ್ತು ಗೂಗಲ್‌ ಅಸಿಸ್ಟೆಂಟ್‌ ಬಟನ್ ಅನ್ನು ಸಹ ಒಳಗೊಂಡಿದೆ.

ನೋಕಿಯಾ C 2 ತವಾ ಮತ್ತು ನೋಕಿಯಾ C 2 ಟೆನ್ನೆನ್‌

ನೋಕಿಯಾ C 2 ತವಾ ಮತ್ತು ನೋಕಿಯಾ C 2 ಟೆನ್ನೆನ್‌

ನೋಕಿಯಾ C 2 ತವಾ ಮತ್ತು ನೋಕಿಯಾ C2 ಟೆನ್ನೆನ್ ಸ್ಮಾರ್ಟ್‌ಫೋನ್‌ಗಳು ಎರಡೂ ಕೂಡ ಒಂದೇ ರೀತಿಯ ವಿನ್ಯಾಸವನ್ನು ಹೊಂದಿವೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು 5.45-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಹಿಲಿಯೊ A22 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ಗಳು 2GB RAM ಮತ್ತು 32GB ಆಂತರಿಕ ಸಂಗ್ರಹಣೆಯನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 128 GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ನೋಕಿಯಾ C 2 ತವಾ ಮತ್ತು  C 2 ಟೆನ್ನೆನ್‌ ಕ್ಯಾಮೆರಾ ವಿನ್ಯಾಸ

ನೋಕಿಯಾ C 2 ತವಾ ಮತ್ತು C 2 ಟೆನ್ನೆನ್‌ ಕ್ಯಾಮೆರಾ ವಿನ್ಯಾಸ

ನೋಕಿಯಾ C 2 ತವಾ ಮತ್ತು ನೋಕಿಯಾ C 2 ಟೆನ್ನೆನ್‌ ಸ್ಮಾರ್ಟ್‌ಫೋನ್‌ಗಳು ಎರಡು ಕೂಡ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಟೋಫೋಕಸ್ ಕ್ಯಾಮೆರಾ ಮತ್ತು ಎರಡನೆ ಕ್ಯಾಮೆರಾ ಫ್ಲ್ಯಾಷ್ ಬೆಂಬಲ ಹೊಂದಿರುವ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್-ಕ್ಲಾಸಿಕ್, ಸ್ಟಾರ್, ಹಾರ್ಟ್, ಬಟರ್‌ಪ್ಲೈ, ಫ್ಲೇಕ್ ಮತ್ತು ವಾಟರ್ ಡ್ರಾಪ್, ಮತ್ತು ಫುಲ್‌ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಫೀಚರ್ಸ್‌ ಅನ್ನು ಹೊಂದಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿವೆ.

ನೋಕಿಯಾ C 2 ತವಾ ಮತ್ತು C 2 ಟೆನ್ನೆನ್‌ ಬ್ಯಾಟರಿ ಮತ್ತು ಇತರೆ

ನೋಕಿಯಾ C 2 ತವಾ ಮತ್ತು C 2 ಟೆನ್ನೆನ್‌ ಬ್ಯಾಟರಿ ಮತ್ತು ಇತರೆ

ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿವೆ. ಇನ್ನು ಈ ಬ್ಯಾಟರಿಯು ಎರಡು ದಿನಗಳವರೆಗೆ ಬಾಳಿಕೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 4.2, ವೈ-ಫೈ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 4G LTE ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಎರಡು ಫೋನ್‌ಗಳು AI ಫೇಸ್ ಅನ್‌ಲಾಕ್ ಮತ್ತು ಗೂಗಲ್‌ ಅಸಿಸ್ಟೆಂಟ್‌ ಬಟನ್ ಅನ್ನು ಬೆಂಬಲಿಸುತ್ತವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ C5 ENDI ಬೆಲೆ $ 169.99 (ಸುಮಾರು ರೂ. 12,700)ಆಗಿದ್ದು, ಇದು 3GB RAM + 64GB ಶೇಖರಣಾ ಆಯ್ಕೆಯಲ್ಲಿ ಮಾತ್ರ ಲಭ್ಯವಿದೆ. ನೋಕಿಯಾ C2 ಟೆನ್ನೆನ್ 2GB RAM + 32GB ಶೇಖರಣಾ ಆಯ್ಕೆಗೆ $ 69.99 (ಸುಮಾರು 5,200 ರೂ.)ಹೊಂದಿದೆ. ಇನ್ನು ನೋಕಿಯಾ C2 ತವಾ 2GB RAM + 32GB ಶೇಖರಣಾ ಆಯ್ಕೆಗೆ $ 109.99 (ಸರಿಸುಮಾರು ರೂ. 8,300) ಬೆಲೆಯನ್ನ ನಿಗದಿಪಡಿಸಲಾಗಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಜೂನ್ 15 ರಿಂದ ಮಾರಾಟವಾಗಲಿದೆ.

Best Mobiles in India

English summary
Nokia C5 Endi, Nokia C2 Tava, and Nokia C2 Tennen have been announced by HMD Global. The Nokia C5 Endi comes with a triple rear camera setup and a waterdrop-style notch up front.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X