ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್ ಲಾಂಚ್!..ವಿಶೇಷತೆ ಏನು?
ಟೆಕ್ ವಲಯದಲ್ಲಿ ನೋಕಿಯಾ ಕಂಪೆನಿ ಎವರ್‌ಗ್ರೀನ್ ಮೊಬೈಲ್ ಬ್ರ್ಯಾಂಡ್ ಎನಿಸಿಕೊಂಡಿದೆ. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಸದ್ಯ ಇದೀಗ ಹೊಸ ನೋಕಿಯಾ C 20 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಅಲ್ಲದೆ ವಾಟರ್‌ಡ್ರಾಪ್-ಸ್ಟೈಲ್ ಡಿಸ್ಪ್ಲೇ ನಾಚ್ ಮತ್ತು ಎರಡು ದಿನಗಳ ಬ್ಯಾಟರಿ ಅವಧಿಯನ್ನು ಒಳಗೊಂಡಿದೆ.

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ C 20 ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸಾಕ್ SC9863a SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಗ್ರ್ಯಾಫೈಟ್ ಬ್ಲ್ಯಾಕ್ ಮತ್ತು ಓಷನ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 270 ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಯುನಿಸಾಕ್ SC9863a SoC ಪ್ರೊಸೆಸರ್ ಹೊಂದಿದೆ, ಇದು ಗೂಗಲ್‌ನ ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದರೊಂದಿಗೆ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟಪ್
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಇದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ನೋಕಿಯಾ C 20 ಪ್ಲಸ್ 4,950mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಹೊಂದಿದೆ. ಇದು ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 4.2, ಜಿಪಿಎಸ್, ಎಫ್ಎಂ ರೇಡಿಯೋ, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್ ಏಕೈಕ 3GB RAM + 32GB ಶೇಖರಣಾ ರೂಪಾಂತರಕ್ಕಾಗಿ ಸಿಎನ್‌ವೈ 699 (ಸುಮಾರು 8,000 ರೂ.) ಗೆ ನಿಗದಿಪಡಿಸಲಾಗಿದೆ. ಸದ್ಯ ಈ ಫೋನ್ ಚೀನಾದಲ್ಲಿ ಗ್ರ್ಯಾಫೈಟ್ ಬ್ಲ್ಯಾಕ್ ಮತ್ತು ಓಷನ್ ಬ್ಲೂ ಬಣ್ಣಗಳಲ್ಲಿ ಪಾದಾರ್ಪಣೆ ಮಾಡಿದೆ. ಚೀನಾದಲ್ಲಿ ಇದರ ಮಾರಾಟವನ್ನು ಜೂನ್ 16 ರಂದು ನಿಗದಿಪಡಿಸಲಾಗಿದೆ.


Click it and Unblock the Notifications








