Just In
- 44 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 1 hr ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್ ಮತ್ತೆ ವಿವಾದ
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ನೋಕಿಯಾ C21 ಪ್ಲಸ್ ಫೋನ್ ಬಿಡುಗಡೆ!..3 ದಿನಗಳ ಬ್ಯಾಟರಿ ಬ್ಯಾಕ್‌ಅಪ್!
ಮೊಬೈಲ್ ವಲಯದ ಎವರ್‌ಗ್ರೀನ್ ಬ್ರ್ಯಾಂಡ್ ನೋಕಿಯಾ ಹಲವು ಆಂಡ್ರಾಯ್ಡ್ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಸಾಲಿಗೆ ನೂತನವಾಗಿ ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದ್ದು, ಅದಾಗ್ಯೂ, ಕೆಲವೊಂದು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ.

ಹೌದು, ನೋಕಿಯಾ ದೇಶಿಯ ಮಾರುಕಟ್ಟೆಯಲ್ಲಿ ಇಂದು ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಈ ಹಿಂದಿನ ನೋಕಿಯಾ C20 ಪ್ಲಸ್ ಫೋನಿನ ಯಶಸ್ಸಿನ ಮುಂದುವರಿದ ಆವೃತ್ತಿಯಾಗಿದೆ. ಇನ್ನು ಈ ಫೋನ್ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದ್ದು, 4000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.

ಹಾಗೆಯೇ ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಯುನಿಸಾಕ್ SC9863A ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಗೋ ಎಡಿಷನ್ ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ವಾರ್ಮ್ ಗ್ರೇ ಹಾಗೂ ಡಾರ್ಕ್ ಗ್ಲೇ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ನೋಕಿಯಾ C21 ಪ್ಲಸ್ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಹಾಗೂ ಇದರ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ C21 ಪ್ಲಸ್: ಡಿಸ್‌ಪ್ಲೇ ಮತ್ತು ಪ್ರೊಸೆಸರ್
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ 6.5 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದ್ದು, 20:9 ರ ಆಕಾರ ಅನುಪಾತವನ್ನು ಇದು ಪಡೆದಿದೆ. ಹಾಗೆಯೇ ಈ ಫೋನ್ 720 × 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 2.5D ಕವರ್ ಗ್ಲಾಸ್ ರಚನೆಯನ್ನು ಹೊಂದಿದೆ. ಇದು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸಾಕ್ SC9863A ಪ್ರೊಸೆಸರ್‌ನಿಂದ ಚಾಲಿತವಾಗಿದೆ.

ನೋಕಿಯಾ C21 ಪ್ಲಸ್: ಮೆಮೊರಿ ಮತ್ತು ಓಎಸ್
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಸಾಮರ್ಥ್ಯದಲ್ಲಿವೆ. ಇನ್ನು ಬಳಕೆದಾರರು ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ. ಇನ್ನು ಈ ಫೋನ್ ಗೂಗಲ್ ನ ಆಂಡ್ರಾಯ್ಡ್ 11 ಗೋ ಎಡಿಷನ್ (Android 11 Go) ಆವೃತ್ತಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನ ಸಪೋರ್ಟ್ ಪಡೆದಿದೆ.

ನೋಕಿಯಾ C21 ಪ್ಲಸ್: ಕ್ಯಾಮೆರಾ ಮತ್ತು ಬ್ಯಾಟರಿ ಪವರ್
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಡೆದಿದ್ದು, ಮುಖ್ಯ ಪ್ರಾಥಮಿಕ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಮುಂಭಾಗದಲ್ಲಿ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. LED ಫ್ಲ್ಯಾಶ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಈ ಫೋನ್ ತೆಗೆಯಲಾಗದ ಬ್ಯಾಟರಿಯೊಂದಿಗೆ ಬರುತ್ತದೆ. ಇದು ಮೂರು ದಿನಗಳವರೆಗೆ ಬ್ಯಾಕ್‌ಅಪ್ ಸಮಯವನ್ನು ಒದಗಿಸುತ್ತದೆ ಎಂದು ಕಂಪನಿ ಹೇಳುತ್ತದೆ.

ನೋಕಿಯಾ C21 ಪ್ಲಸ್: ಕನೆಕ್ಟಿವಿಟಿ ಸೌಲಭ್ಯಗಳು
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಬ್ಲೂಟೂತ್ 4.2, 3.5mm ಜ್ಯಾಕ್, ಮೈಕ್ರೋ USB ಪೋರ್ಟ್ ಮತ್ತು USB 2.0 ಪೋರ್ಟ್ ಅನ್ನು ಹೊಂದಿದೆ. ಹಾಗೆಯೇ ಈ ನೋಕಿಯಾ C21 ಪ್ಲಸ್ ಫೋನ್ ವಾರ್ಮ್ ಗ್ರೇ ಹಾಗೂ ಡಾರ್ಕ್ ಗ್ಲೇ ಬಣ್ಣಗಳ ರೂಪಾಂತರಗಳಲ್ಲಿ ಲಭ್ಯವಿದೆ. ಈ ಸ್ಮಾರ್ಟ್ಫೋನ್ 164.8 x 75.9 x 8.55 mm ಅಳತೆ ಹೊಂದಿದ್ದು, ಹಾಗೆಯೇ 75.9g ತೂಕ ಪಡೆದುಕೊಂಡಿದೆ.

ನೋಕಿಯಾ C21 ಪ್ಲಸ್: ಬೆಲೆ ಎಷ್ಟು ಹಾಗೂ ಲಭ್ಯತೆ
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. 3GB RAM ಮತ್ತು 32GB ಯ ಶೇಖರಣಾ ಸ್ಥಳವನ್ನು ಹೊಂದಿರುವ ರೂಪಾಂತರವು 10,299 ರೂ. ಆಗಿದೆ. ಹಾಗೆಯೇ 4GB RAM ಮತ್ತು 64GB ಯ ಶೇಖರಣಾ ಸ್ಥಳವನ್ನು ಹೊಂದಿರುವ ರೂಪಾಂತರವು 11,299 ರೂ. ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಸದ್ಯಕ್ಕೆ, ಇದು ಭಾರತದಲ್ಲಿ ನೋಕಿಯಾ ಇಂಡಿಯಾದ ಇ-ಶಾಪ್ ಮೂಲಕ ಮಾತ್ರ ಲಭ್ಯವಿದೆ.

ನೋಕಿಯಾ C2 2ನೇ ಆವೃತ್ತಿ ಫೀಚರ್ಸ್:
ನೋಕಿಯಾ ಸಂಸ್ಥೆಯು ಇತ್ತೀಚಿಗೆ ನೋಕಿಯಾ C2 2ನೇ ಆವೃತ್ತಿ ಹಾಗೂ ನೋಕಿಯಾ C21 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಆ ಪೈಕಿ ನೋಕಿಯಾ C2 2ನೇ ಆವೃತ್ತಿ ಸ್ಮಾರ್ಟ್‌ಫೋನ್ 5.7 ಇಂಚಿನ FWVGA ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾಟೆಕ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 2400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ನೋಕಿಯಾ C21 ಸ್ಮಾರ್ಟ್‌ಫೋನ್ ಫೀಚರ್ಸ್:
ನೋಕಿಯಾ C21 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ SC9863A SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB ಮತ್ತು 3GB RAM ಆಯ್ಕೆಗಳ್ಳನ್ನು ಹೊಂದಿದ್ದು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 3000mAh ಬ್ಯಾಟರಿಯನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470