Home
ಸುದ್ದಿಜಾಲ

ಸದ್ಯದಲ್ಲೇ ಬಿಡುಗಡೆ ಆಗಲಿದೆ ನೋಕಿಯಾ C3 ಸ್ಮಾರ್ಟ್‌ಫೋನ್‌!

ಟೆಕ್‌ ವಲಯದಲ್ಲಿ ನೋಕಿಯಾ ಕಂಪೆನಿ ಎವರ್‌ಗ್ರೀನ್‌ ಮೊಬೈಲ್‌ ಬ್ರಾಂಡ್‌ ಎನಿಸಿಕೊಂಡಿದೆ. ಅಲ್ಲದೆ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಎನಿಸಿಕೊಂಡಿದೆ. ಇದೀಗ ನೋಕಿಯಾ ಕಂಪೆನಿ ಶೀಘ್ರದಲ್ಲೇ ನೋಕಿಯಾ C3 ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ವರದಿಯಾಗಿದೆ. ಸದ್ಯ ಈ ಡಿವೈಸ್‌ನ ಫೀಚರ್ಸ್‌ಗಳೇನು ಅನ್ನೊದು ಈಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಈಗಾಗಲೇ ಚೀನಾದಲ್ಲಿ ಬಿಡುಗಡೆ ಮಾಡಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ನೋಕಿಯಾ C3 ಅನ್ನು ಬಿಡುಗಡೆ ಮಾಡಲು ಎಚ್‌ಎಂಡಿ ಗ್ಲೋಬಲ್ ಸಿದ್ದತೆ ನಡೆಸಿದೆ. ಇದು ಆಕ್ಟಾ-ಕೋರ್ ಪ್ರೊಸೆಸರ್,ಅನ್ನು ಹೊಂದಿದೆ. ಇದಲ್ಲದೆ 3,040mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನೋಕಿಯಾ C3 ಸ್ಮಾರ್ಟ್‌ಫೋನ್‌ 720 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.99 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 18:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 269 ppi ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಅಲ್ಲದೆ ಇದು IPS LCD capacitive ಟಚ್‌ಸ್ಕ್ರೀನ್‌ ಅನ್ನು ಒಳಗೊಂಡಿದೆ. ಜೊತೆಗೆ 75.2% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ನೋಕಿಯಾ C3 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಔಟ್‌ ಆಫ್‌ ಬಾಕ್ಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 32GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇದು 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ವೀಡಿಯೋ ಕರೆಗಳಿಗಾಗಿ ಅತ್ಯುತ್ತಮ ಫೀಚರ್ಸ್‌ಗಳನ್ನ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ C3 ಸ್ಮಾರ್ಟ್‌ಫೋನ್‌ 3040 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌ ವಿ 4.2, GPS, 3.5mm ಹೆಡ್‌ಫೋನ್‌ ಜ್ಯಾಕ್‌ ಮತ್ತು ಮೈಕ್ರೋ ಯುಎಸ್‌ಬಿ ಪೋರ್ಟ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನಾರ್ಡಿಕ್ ಬ್ಲೂ ಮತ್ತು ಗೋಲ್ಡ್ ಸ್ಯಾಂಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

Best Mobiles in India

English summary
The Nokia C3 was launched in China earlier this month and the smartphone is expected to come to India soon.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+