ನೋಕಿಯಾ C30 ಸ್ಮಾರ್ಟ್‌ಫೋನ್ ಬಿಡುಗಡೆ! 6,000mAh ಬ್ಯಾಟರಿ ವಿಶೇಷ!
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಟೆಕ್ ವಲಯದಲ್ಲಿ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ಇದೀಗ ನೋಕಿಯಾ C30 ಸ್ಮಾರ್ಟ್‌ಫೋನ್ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.82 ಇಂಚಿನ ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ C30 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದು 2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಡಿಸ್‌ಪ್ಲೇ ವಿನ್ಯಾಸ
ನೋಕಿಯಾ C30 ಸ್ಮಾರ್ಟ್‌ಫೋನ್ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್
ನೋಕಿಯಾ C30 ಸ್ಮಾರ್ಟ್‌ಫೋನ್ ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್‌ನಿಂದ 1.6GHz ನಲ್ಲಿ ನಾಲ್ಕು A55 ಕೋರ್ ಮತ್ತು 1.2GHz ನಲ್ಲಿ ನಾಲ್ಕು A55 ಕೋರ್‌ಗಳನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಸಾಫ್ಟ್‌ವೇರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಕೂಡ ಇದೆ.
ಕ್ಯಾಮೆರಾ ವಿಶೇಷ
ನೋಕಿಯಾ C30 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎಲ್ಇಡಿ ಫ್ಲ್ಯಾಷ್ ಹಾಗೂ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಇನ್ನು ನೋಕಿಯಾ C30 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ VoLTE, Wi-Fi 802.11 b / g / n, ಬ್ಲೂಟೂತ್ 4.2, ಜಿಪಿಎಸ್ + ಗ್ಲೋನಾಸ್, ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ನೋಕಿಯಾ C30 ಸ್ಮಾರ್ಟ್‌ಫೋನ್ ಬೆಸ್ ಮಾಡೆಲ್ 2GB RAM + 32GB ಆಯ್ಕೆಯ ಬೆಲೆ € 99 ರಿಂದ ಪ್ರಾರಂಭವಾಗುತ್ತದೆ, ಇದು ಅಂದಾಜು 8,700 ರೂ. ಆಗಿರಲಿದೆ. ಈ ಫೋನ್‌ನ ಎಲ್ಲಾ ಮಾದರಿಗಳು ಗ್ರೀನ್ ಮತ್ತು ವೈಟ್ ಸೇರಿದಂತೆ ಎರಡು ಬಣ್ಣ ಆಯ್ಕೆಗಳಲ್ಲಿ ಬರುತ್ತವೆ.


Click it and Unblock the Notifications








