ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ 'ನೋಕಿಯಾ C30' ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ಮೊಬೈಲ್‌ ಸಂಸ್ಥೆ ನೋಕಿಯಾ ಸಂಸ್ಥೆಯು ಭಾರತೀಯ ಮೊಬೈಲ್ ಮಾರುಕಟ್ಟೆಗೆ ನೂತನವಾಗಿ ನೋಕಿಯಾ C30 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಕಳೆದ ಜುಲೈನಲ್ಲಿ ಈ ಫೋನ್‌ ಅನ್ನು ಅನಾವರಣ ಮಾಡಿತ್ತು. ಈಗ ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ರಮುಖ ಹೈಲೈಟ್‌ ಆಗಿದೆ.

ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ 'ನೋಕಿಯಾ C30' ಸ್ಮಾರ್ಟ್‌ಫೋನ್‌ ಬಿಡುಗಡೆ!

ಹೌದು, ನೋಕಿಯಾ ಸಂಸ್ಥೆಯು ತನ್ನ ಹೊಸ ನೋಕಿಯಾ C30 ಸ್ಮಾರ್ಟ್‌ಫೋನ್‌ ಅನ್ನು ಜಿಯೋ ಎಕ್ಸ್‌ಕ್ಲೂಸಿವ್ ಆಫರ್ ನೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ Unisoc SC9863A SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗಾದರೇ ನೋಕಿಯಾ C30 ಸ್ಮಾರ್ಟ್‌ಫೋನ್‌ ಇತೆರ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ನೋಕಿಯಾ C30 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ 'ನೋಕಿಯಾ C30' ಸ್ಮಾರ್ಟ್‌ಫೋನ್‌ ಬಿಡುಗಡೆ!

ಪ್ರೊಸೆಸರ್‌ ಪವರ್ ಯಾವುದು
ನೋಕಿಯಾ C30 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ Unisoc SC9863A SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್ 11 ಗೋ ಸಾಫ್ಟ್‌ವೇರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಕೂಡ ಇದೆ.

ಡ್ಯುಯಲ್ ಕ್ಯಾಮೆರಾ ವಿಶೇಷ
ನೋಕಿಯಾ C30 ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್ಇಡಿ ಫ್ಲ್ಯಾಷ್ ಹಾಗೂ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಇಮೇಜ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಫೋಟೊ ಎಡಿಟಿಂಗ್ ಆಯ್ಕೆಗಳು ಸಹ ಇವೆ.

ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ 'ನೋಕಿಯಾ C30' ಸ್ಮಾರ್ಟ್‌ಫೋನ್‌ ಬಿಡುಗಡೆ!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ನೋಕಿಯಾ C30 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ VoLTE, Wi-Fi 802.11 b / g / n, ಬ್ಲೂಟೂತ್ 4.2, ಜಿಪಿಎಸ್ + ಗ್ಲೋನಾಸ್, ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ C30 ಸ್ಮಾರ್ಟ್‌ಫೋನ್‌ 3GB RAM + 32GB ವೇರಿಯಂಟ್ ಆಯ್ಕೆಯ ಬೆಲೆ 10,999ರೂ. ಆಗಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 11,999ರೂ. ಆಗಿದೆ. ಇನ್ನು ಈ ಫೋನ್ ಗ್ರೀನ್ ಮತ್ತು ವೈಟ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಸದ್ಯ ಈ ಫೊನ್ ಜಿಯೋ ಎಕ್ಸ್‌ಕ್ಲೂಸಿವ್ ಆಫರ್ ಕೊಡುಗೆ ಪಡೆದಿದ್ದು, ಶೇ. 10% ಗರಿಷ್ಠ 1,000ರೂ. ವರೆಗೂ ರಿಯಾಯಿತಿ ಸಿಗಲಿದೆ. ಗ್ರಾಹಕರು ಫೋನ್ ಸಕ್ರಿಯಗೊಳಿಸಿದ 15 ದಿನಗಳಲ್ಲಿ ಬಳಕೆದಾರರು ಮೈಜಿಯೋ ಆಪ್ ಮೂಲಕ ಸ್ವಯಂ ದಾಖಲಾತಿ ಮಾಡಿಕೊಳ್ಳಬಹುದು.

ಹಾಗೆಯೇ ನೋಕಿಯಾ ಕಂಪನಿಯು ಭಾರತದಲ್ಲಿ ಇತ್ತೀಚಿಗಷ್ಟೆ ನೂತನವಾಗಿ 'ನೋಕಿಯಾ XR20' ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ಈ ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ನಲ್ಲಿ ಸ್ಟಾಕ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಅಲ್ಲದೇ 4,630mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Nokia C30 has a dual rear camera setup that includes a 13-megapixel main camera and a 2-megapixel depth sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X