Home
ಸುದ್ದಿಜಾಲ

ನೋಕಿಯಾದ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆ ಲಭ್ಯ!..ಕ್ಯಾಮೆರಾ ಹೇಗಿದೆ?

ನೋಕಿಯಾ ಮೊಬೈಲ್‌ ಕಂಪನಿಯ ನೋಕಿಯಾ C31 ಫೋನ್‌ ಬಜೆಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಮತ್ತಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಆನ್‌ಲೈನ್‌ ಮಾರುಕಟ್ಟೆಯಲ್ಲಿ ಆಕರ್ಷಕವಾಗಿ ಕಾಣಿಸಿದೆ.

ಹೌದು, ನೋಕಿಯಾ ಸಂಸ್ಥೆಯ ನೋಕಿಯಾ C31 ಫೋನ್ ಅಮೆಜಾನ್ ಆನ್‌ಲೈನ್‌ ತಾಣದಲ್ಲಿ ಈಗ 28% ನಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 11,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದು, ಆದರೆ ಈಗ ಗ್ರಾಹಕರು 8,699ರೂ. ಗಳ ಡಿಸ್ಕೌಂಟ್‌ ದರದಲ್ಲಿ ಖರೀದಿ ಮಾಡಬಹುದಾಗಿದೆ. ಜೊತೆಗೆ ಬ್ಯಾಂಕ್ ರಿಯಾಯಿತಿ ಸಹ ಲಭ್ಯವಾಗಲಿವೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

ನೋಕಿಯಾದ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆ ಲಭ್ಯ!..ಕ್ಯಾಮೆರಾ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ನೋಕಿಯಾ C31 ಸ್ಮಾರ್ಟ್‌ಫೋನ್‌ 6.7 ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ಸ್ಟ್ಯಾಂಡರ್ಡ್‌ 60Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇಯು 83.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ.

ನೋಕಿಯಾದ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆ ಲಭ್ಯ!..ಕ್ಯಾಮೆರಾ ಹೇಗಿದೆ?

ಪ್ರೊಸೆಸರ್‌ ಸಾಮರ್ಥ್ಯ : ನೋಕಿಯಾ C31 ಸ್ಮಾರ್ಟ್‌ಫೋನ್‌ ಯುನಿಸೊಕ್ SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಆದರೆ ಪ್ರೊಸೆಸರ್‌ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಫೋನ್‌ 3GB RAM ಮತ್ತು 32GB ಹಾಗೂ 4GB RAM ಮತ್ತು 64 GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್ ಯಾವುದು : ನೋಕಿಯಾ C31 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, HDR, ನೈಟ್ ಮೋಡ್, ಸ್ಟೋರೇಜ್ ಸ್ಮಾರ್ಟ್‌ಗಳು ಬೆಂಬಲಿಸಲಿದೆ.

ನೋಕಿಯಾದ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆ ಲಭ್ಯ!..ಕ್ಯಾಮೆರಾ ಹೇಗಿದೆ?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ : ನೋಕಿಯಾ C31 ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ, ಆದರೆ ಈ ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ ಮೂರು ದಿನಗಳವರೆಗೆ ಬಾಳಿಕೆ ನೀಡಲಿದೆ ಎನ್ನಲಾಗಿದೆ. ಜೊತೆಗೆ ಬ್ಯಾಟರಿ ಅವಧಿಯನ್ನು ಹೆಚ್ಚಿಸುವುದಕ್ಕಾಗಿ AI ಚಾಲಿತ ತಂತ್ರಜ್ಞಾನವನ್ನು ಬಳಸುತ್ತಿದೆ ಎಂದು ನೋಕಿಯಾ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಆಯ್ಕೆಯನ್ನು ಬೆಂಬಲಿಸಲಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ : ನೋಕಿಯಾ C31 ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಮತ್ತು 4GB + 64GB ಸ್ಟೋರೇಜ್‌ ರೂಪಾಂತರದ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಚಾರ್ಕೋಲ್, ಮಿಂಟ್ ಮತ್ತು ಸಯಾನ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Nokia C31 available at huge discount price on amazon: Check Offer Price and Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+