ನೋಕಿಯಾ C31 ಫೋನ್‌ ಬಿಡುಗಡೆ! ಕಡಿಮೆ ಬೆಲೆಯಲ್ಲಿ ಇದಕ್ಕಿಂತ ಫೋನ್‌ ಬೇಕಾ!

|

ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ನೋಕಿಯಾ ಕಂಪೆನಿ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಬಜೆಟ್‌ ಬೆಲೆಯಲ್ಲಿ ಬರುವ ನೋಕಿಯಾ C31 ಫೋನ್‌ ಇದೀಗ ಭಾರತಕ್ಕೂ ಕೂಡ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ವಿಭಿನ್ನ ಸ್ಟೋರೇಜ್ ಕಾನ್ಫಿಗರೇಶನ್‌ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಜೊತೆಗೆ ಯೂನಿಸೊಕ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ಹೊಸ ನೋಕಿಯಾ C31 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಫೋನ್‌ ಒಂದೇ ಚಾರ್ಜ್‌ನಲ್ಲಿ ಮೂರು ದಿನಗಳವರೆಗೆ ಬಾಳಿಕೆ ಬರಲಿದೆ ಎಂದು ನೋಕಿಯಾ ಕಂಪೆನಿ ಹೇಳಿದೆ. ಅಲ್ಲದೆ ಬ್ಯಾಟರಿ ಅವಧಿಯನ್ನು ಉಳಿಸಲು AI ಚಾಲಿತ ತಂತ್ರಜ್ಞಾನವನ್ನು ಬಳಸಲಾಗುತ್ತದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನೋಕಿಯಾ C31 ಸ್ಮಾರ್ಟ್‌ಫೋನ್‌ 6.7 ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ಸ್ಟ್ಯಾಂಡರ್ಡ್‌ 60Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇಯು 83.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ನೋಕಿಯಾ C31 ಸ್ಮಾರ್ಟ್‌ಫೋನ್‌ ಯುನಿಸೊಕ್ SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಆದರೆ ಪ್ರೊಸೆಸರ್‌ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಫೋನ್‌ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ನೋಕಿಯಾ C31 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, HDR, ನೈಟ್ ಮೋಡ್, ಸ್ಟೋರೇಜ್ ಸ್ಮಾರ್ಟ್‌ಗಳು ಬೆಂಬಲಿಸಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಹೇಗಿದೆ?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಹೇಗಿದೆ?

ನೋಕಿಯಾ C31 ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ, ಆದರೆ ಈ ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ ಮೂರು ದಿನಗಳವರೆಗೆ ಬಾಳಿಕೆ ನೀಡಲಿದೆ ಎನ್ನಲಾಗಿದೆ. ಜೊತೆಗೆ ಬ್ಯಾಟರಿ ಅವಧಿಯನ್ನು ಹೆಚ್ಚಿಸುವುದಕ್ಕಾಗಿ AI ಚಾಲಿತ ತಂತ್ರಜ್ಞಾನವನ್ನು ಬಳಸುತ್ತಿದೆ ಎಂದು ನೋಕಿಯಾ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಆಯ್ಕೆಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ C31 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 3GB RAM ಮತ್ತು 32GB ಸ್ಟೋರೇಜ್‌ ಆಯ್ಕೆಯ ಬೆಲೆ 9,999ರೂ. ಆಗಿದೆ. ಇದರ 4GB + 64GB ರೂಪಾಂತರದ ಆಯ್ಕೆಯ ಬೆಲೆ 10,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಚಾರ್ಕೋಲ್, ಮಿಂಟ್ ಮತ್ತು ಸಯಾನ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇದರ ಸೇಲ್‌ ಡೇಟ್‌ ಇನ್ನು ಬಹಿರಂಗವಾಗಿಲ್ಲ. ಆದರೆ ಇದು ನೋಕಿಯಾ ವೆಬ್‌ಸೈಟ್‌ ಮತ್ತು ದೇಶದ ಇತರ ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Nokia C31 With three-day battery life Launched: Price in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X