Nokia: ನೋಕಿಯಾದ ಹೊಸ ಫೋನ್ ಈಗ ಇನ್ನೂ ಅಗ್ಗದ ಬೆಲೆಗೆ... 128GB ಸ್ಟೋರೇಜ್.. 50mp ಕ್ಯಾಮೆರಾ!
ನೋಕಿಯಾ ಸ್ಮಾರ್ಟ್‌ಫೋನ್‌ಗಳು (Nokia smartphone) ಇಂದು ಸ್ಮಾರ್ಟ್‌ಫೋನ್ ಮಾರುಕಟ್ಟೆಯನ್ನು ನಿಧಾನವಾಗಿ ವ್ಯಾಪಿಸಿಕೊಳ್ಳುತ್ತಾ ಬರುತ್ತಿವೆ. ಅದರಂತೆ ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಆಯ್ಕೆ ಇರುವ ಹೊಸ ಹೊಸ ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬರುತ್ತಿದ್ದು, ಈ ನಡುವೆ ನೋಕಿಯಾದ ಈ ಅಗ್ಗದ ಫೋನ್ ಇನ್ನೂ ಅಗ್ಗದ ಬೆಲೆಗೆ ಲಭ್ಯ ಇದೆ.
ಹೌದು, ನೋಕಿಯಾ ಸ್ಮಾರ್ಟ್‌ಫೋನ್‌ಗಳು ಇತ್ತೀಚಿನ ದಿನಗಳಲ್ಲಿ ಗ್ರಾಹಕರಿಗೆ ಇಷ್ಟವಾಗುತ್ತಿವೆ. ಇದರ ಭಾಗವಾಗಿಯೇ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ( Amazon Great Indian Festival Sale) ನಲ್ಲಿ ನೋಕಿಯಾ C32 (Nokia C32) ಸ್ಮಾರ್ಟ್‌ಫೋನ್‌ಗೆ ರಿಯಾಯಿತಿ ನೀಡಲಾಗಿದೆ. ಈ ಫೋನ್ 128GB ಸ್ಟೋರೇಜ್ ಹಾಗೂ 50mp ಮುಖ್ಯ ಕ್ಯಾಮೆರಾ ಆಯ್ಕೆ ಸೇರಿದಂತೆ ವಿಶೇಷ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಹಾಗಿದ್ರೆ, ಈ ಫೋನ್‌ನ ಆಫರ್ ಬೆಲೆ ವಿವರ ಹಾಗೂ ಫೀಚರ್ಸ್ ಬಗ್ಗೆ ತಿಳಿಯೋಣ ಬನ್ನಿ.

ನೋಕಿಯಾ C32 ಆಫರ್ ವಿವರ: 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆ ಹೊಂದಿರುವ ನೋಕಿಯಾ C32 ಸ್ಮಾರ್ಟ್‌ಫೋನ್‌ಗೆ 18 % ರಷ್ಟು ರಿಯಾಯಿತಿ ನೀಡಲಾಗಿದೆ. ಇದರಿಂದಾಗಿ ನೀವು ಈಗ ಈ ಫೋನ್ ಅನ್ನು ಕೇವಲ 8,999 ರೂ.ಗಳಿಗೆ ಖರೀದಿ ಮಾಡಬಹುದು. ಅಷ್ಟೇ ಅಲ್ಲದೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸುವ ಬಳಕೆದಾರರು 899ರೂ. ವರೆಗೆ ತ್ವರಿತ ರಿಯಾಯಿತಿ ಸಹ ಸಿಗಲಿದೆ. ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಇದನ್ನು ಖರೀದಿ ಮಾಡಬಹುದಾಗಿದೆ.
ನೋಕಿಯಾ C32 ಡಿಸ್‌ಪ್ಲೇ ವಿವರ: ಈ ನೋಕಿಯಾ C32 ಸ್ಮಾರ್ಟ್‌ಫೋನ್ 6.5-ಇಂಚಿನ ಎಲ್‌ಸಿಡಿ V-ನಾಚ್ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ವೀಕ್ಷಣೆ ಅನುಭವ ನೀಡಲಿದೆ. ಇದಲ್ಲದೆ ಈ ಫೋನ್ 1600×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ, 20:9 ಆಕಾರ ಅನುಪಾತವನ್ನು ಹೊಂದಿದೆ. ಈ ಮೂಲಕ ನೀವು ವಿಡಿಯೋ ನೋಡುವಾಗ ಅಥವಾ ಗೇಮ್ ಆಡುವಾಗ ಹೊಸ ಅನುಭವ ಪಡೆಯಬಹುದು.
ನೋಕಿಯಾ C32 ಪ್ರೊಸೆಸರ್ ಮಾಹಿತಿ: ಈ ಫೋನ್ 1.6GHz ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್ ಸೌಲಭ್ಯದೊಂದಿಗೆ ಹೊರಬಂದಿದೆ. ಗಮನಿಸಬೇಕಾದ ಮಾಹಿತಿ ಏನೆಂದರೆ ಈ ಆಕ್ಟೋ-ಕೋರ್ ಪ್ರೊಸೆಸರ್ ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀಡುವ ಪ್ರೊಸೆಸರ್ ಆಗಿದೆ. ಈ ಮೂಲಕ ನೀವು ಯಾವುದೇ ಅಡೆತಡೆ ಈ ಫೋನ್ ಅನ್ನು ಬಳಕೆ ಮಾಡಬಹುದಾಗಿದೆ.
ಇದರೊಂದಿಗೆ 4GB RAM + ಹಾಗೂ 3GB ವರ್ಚುವಲ್ RAM ಆಯ್ಕೆಯನ್ನು ಹೊಂದಿದ್ದು, 64GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಕಂಡುಬಂದಿದೆ. ಉಳಿದಂತೆ ನೀವು ಮೆಮೊರಿ ಕಾರ್ಡ್ ಅನ್ನು ಬಳಕೆ ಮಾಡುವ ಮೂಲಕ ಇನ್ನೂ ಹೆಚ್ಚಿನ ಸ್ಟೋರೇಜ್‌ಗೆ ಅವಕಾಶ ಮಾಡಿಕೊಡಲಾಗಿದೆ. ಅಂದರೆ ಈ ಫೋನ್‌ನಲ್ಲಿ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ನೀಡಲಾಗಿದೆ.
ನೋಕಿಯಾ C32 ಕ್ಯಾಮೆರಾ ರಚನೆ: ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ + 2MP ಮ್ಯಾಕ್ರೋ ಕ್ಯಾಮೆರಾ ಸೆನ್ಸರ್‌ನೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇದರೊಂದಿಗೆ ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ 8MP ಕ್ಯಾಮೆರಾದೊಂದಿಗೆ ಈ ಫೋನ್ ಪ್ಯಾಕ್ ಆಗಿದೆ. ಇದಿಷ್ಟೇ ಅಲ್ಲದೆ ಎಲ್ಇಡಿ ಫ್ಲ್ಯಾಶ್ ಮತ್ತು ಇತರ ಹಲವು ಕ್ಯಾಮೆರಾ ಫೀಚರ್ಸ್ ಅನ್ನು ಈ ಫೋನ್ ಹೊಂದಿದೆ.
ನೋಕಿಯಾ C32 ಬ್ಯಾಟರಿ ಸಾಮರ್ಥ್ಯ: ನೋಕಿಯಾ ಫೋನ್ ಎಂದರೆ ಅದು ಬ್ಯಾಟರಿ ಸಾಮರ್ಥ್ಯಕ್ಕೆ ಹೆಸರುವಾಸಿ. ಅದರಂತೆ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪ್ಯಾಕ್ ಆಗಿದ್ದು, ಒಂದು ಪೂರ್ಣ ಚಾರ್ಜಿಂಗ್‌ನಲ್ಲಿ ಬಳಕೆದಾರರು 3 ದಿನಗಳ ಬ್ಯಾಕಪ್ ಪಡೆದುಕೊಳ್ಳಬಹುದಾಗಿದೆ ಹಾಗೂ ಈ ನೋಕಿಯಾ ಫೋನ್ 10 ವ್ಯಾಟ್ಸ್ ಚಾರ್ಜಿಂಗ್‌ಗೆ ಬೆಂಬಲ ಪಡೆದಿದೆ.

ಉಳಿದಂತೆ ಈ ಫೋನ್ ಫಿಂಗರ್‌ಫ್ರಿಂಟ್ ಸೆನ್ಸರ್, ಸ್ಮಾರ್ಟ್‌ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್, 4G VoltE, ವೈ-ಫೈ 802.11, ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಅನೇಕ ಕನೆಕ್ಟಿವಿಟಿ ಬೆಂಬಲ ಪಡೆದುಕೊಂಡಿದೆ. ಇದು ಚಾರ್ಕೋಲ್, ಬ್ರಾಸಿ ಮಿಂಟ್ ಮತ್ತು ಪಿಂಕ್ ಬಣ್ಣಗಳಲ್ಲಿ ಕಾನಿಸಿಕೊಂಡಿದ್ದು, ಬಜೆಟ್ ಬೆಲೆಯಲ್ಲಿ ಫೋನ್ ಖರೀದಿ ಮಾಡುವವರಿಗೆ ಅತ್ಯುತ್ತಮ ಆಯ್ಕೆ ಆಗಿದೆ.


Click it and Unblock the Notifications








