Nokia: ನೋಕಿಯಾದ ಈ ವಿಶೇಷ ಕಲರ್‌ನ ಫೋನ್ ಬೆಲೆ ಇಳಿಕೆ! 50MP ಕ್ಯಾಮೆರಾ...
ನೋಕಿಯಾ (Nokia) ಮೊಬೈಲ್ ಇನ್ಮುಂದೆ ಹೆಚ್‌ಎಮ್‌ಡಿ (HMD) ಎಂದು ಅಧಿಕೃತವಾಗಿ ಹೆಸರು ಪಡೆದಿದೆ. ಈ ಬೆಳವಣಿಗೆ ನಡುವೆ ನೋಕಿಯಾ ಫೋನ್‌ಗಳನ್ನು ಭಾರೀ ಆಫರ್‌ನೊಂದಿಗೆ ಮಾರಾಟ ಮಾಡಲಾಗುತ್ತಿದ್ದು, ಅದರಂತೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಇರುವ ಫೋನ್ ಇದೀಗ ಭಾರೀ ಕಡಿಮೆ ಬೆಲೆಗೆ ಲಭ್ಯ ಇದೆ.
ಹೌದು, ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಇದೀಗ ಚಾರ್ಕೋಲ್ ಕಲರ್‌ನ ನೋಕಿಯಾ C32 ಸ್ಮಾರ್ಟ್‌ಫೋನ್‌ಗೆ (Nokia C32 smartphone) ಭರ್ಜರಿ ಅಫರ್ ನೀಡಿದೆ. ಈ ಸ್ಮಾರ್ಟ್‌ಫೋನ್ 4 GB RAM ಆಯ್ಕೆ ಪಡೆದಿದ್ದು, 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಹಾಗಿದ್ರೆ, ಈ ಫೋನ್‌ಗೆ ಇರುವ ಆಫರ್ ಬೆಲೆ ಮತ್ತು ಇದರ ಪ್ರಮುಖ ಫೀಚರ್ಸ್ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ.

ನೋಕಿಯಾ C32 ಅಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 10,499 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 6,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್ ಗೆ ಫ್ಲಿಪ್‌ಕಾರ್ಟ್‌ನಲ್ಲಿ (Flipkart) 33% ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಕೆಲವು ಬ್ಯಾಂಕ್ ಕೊಡುಗೆ ಬಳಕೆ ಮಾಡಿಕೊಂಡು ಇನ್ನೂ ಅಗ್ಗದ ದರದಲ್ಲಿ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು.
ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 10% ರಿಯಾಯಿತಿ, ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ ಹಾಗೂ ಯೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 8% ರಿಯಾಯಿತಿ ಸೇರಿದಂತೆ ಇತರೆ ಆಫರ್ ಅನ್ನು ಈ ಫೋನ್ ಖರೀದಿಯಲ್ಲಿ ಪಡೆಯಬಹುದಾಗಿದೆ. ಈ ಮೂಲಕ ಬಜೆಟ್ ಬೆಲೆಯ ಫೋನ್ ಅನ್ನು ಇನ್ನೂ ಕಡಿಮೆ ದರದಲ್ಲಿ ಖರೀದಿ ಮಾಡಬಹುದು.

ನೋಕಿಯಾ C32 ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 81.6% ಸ್ಕ್ರೀನ್-ಟು-ಬಾಡಿ ಅನುಪಾತ, 270 ppi ಸಾಂದ್ರತೆ ಮೂಲಕ ಉತ್ತಮವಾದ ವೀಕ್ಷಣೆಯನ್ನು ಒದಗಿಸುತ್ತದೆ. ಅಲ್ಲದೆ ಈ ಫೋನ್ ಸ್ಕ್ರ್ಯಾಚ್-ನಿರೋಧಕ ಗ್ಲಾಸ್ ಆಯ್ಕೆ ಪಡೆದಿದೆ.
ನೋಕಿಯಾ C32 ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದ್ದು, ಯುನಿಸಾಕ್ SC9863A1 (22nm) ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ IMG8322 ಗ್ರಾಫಿಕ್ಸ್ ಕಾರ್ಡ್ ಬಲ ಪಡೆದಿದ್ದು, ಉತ್ತಮವಾಗಿ ಕೆಲಸ ಮಾಡಲಿದೆ. ಅಲ್ಲದೆ ಹೆಚ್ಚುವರಿ ಸ್ಟೋರೇಜ್ ಆಯ್ಕೆಗೆ ಎಸ್‌ಡಿ ಕಾರ್ಡ್‌ಗೆ ಬೆಂಬಲ ನೀಡಲಿದ್ದು, ಆಫರ್ ಬೆಲೆಗೆ ಲಭ್ಯ ಇರುವ ಫೋನ್ 64 GB ಇಂಟರ್ ಸ್ಟೋರೇಜ್ ಹಾಗೂ 4 GB RAM ಆಯ್ಕೆ ಪಡೆದುಕೊಂಡಿದೆ.
ನೋಕಿಯಾ C32 ಕ್ಯಾಮೆರಾ ರಚನೆ: ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದಿದ್ದು, ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್ ಫೀಚರ್ಸ್‌ನೊಂದಿಗೆ 1080p@30fps ಸಾಮರ್ಥ್ಯದ ವಿಡಿಯೋಗಳನ್ನು ಸೆರೆಹಿಡಿಯಬಹುದಾಗಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ನೋಕಿಯಾ C32 ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ 3.5 ಎಂಎಂ ಜ್ಯಾಕ್, ವೈ-ಫೈ 802.11 b/g/n, ಬ್ಲೂಟೂತ್ ಆವೃತ್ತಿ 5.2, A2DP, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0 ಕನೆಕ್ಟಿವಿಟಿ ಬೆಂಬಲದ ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಪಡೆದಿದೆ.


Click it and Unblock the Notifications








