Home
ಸುದ್ದಿಜಾಲ

ಭಾರತದಲ್ಲಿ ನೋಕಿಯಾ G10 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ತನ್ನ ಗುಣಮಟ್ಟದ ಕಾರಣದಿಂದಾಗಿ ಗಮನ ಸೆಳೆದಿರುವ ನೋಕಿಯಾ ಸಂಸ್ಥೆ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ನೋಕಿಯಾ G10 ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಇದು ಆಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ನೋಕಿಯಾ

ಹೌದು, ಹೆಚ್‌ಎಂಡಿ ಗ್ಲೋಬಲ್‌ ಒಡೆತನದ ನೋಕಿಯಾ ಹೊಸ ನೋಕಿಯಾ G10 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಲು ಡೇಟ್‌ ಫಿಕ್ಸ್‌ ಮಾಡಿದೆ. ಇದು ಲೋ-ಎಂಡ್ ಮತ್ತು ಮಿಡ್-ಎಂಡ್ ಪೋರ್ಟ್ಫೋಲಿಯೊದಲ್ಲಿ ಬರಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.38 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ನೋಕಿಯಾ G10 ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.38 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 81.7% ರಷ್ಟಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಪ್ರೊಸೆಸರ್ (ಇನ್ನೂ ಹೆಸರಿಸದ) ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM+32GB ಹಾಗೂ 4GB RAM+64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್‌ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ನೋಕಿಯಾ G10 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನೊ ಹೊಂದಿದೆ. ಇದಲ್ಲದೆ 16ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ಮತ್ತು ಎನ್‌ಎಫ್‌ಸಿಯನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ G10 ಭಾರತದಲ್ಲಿ ಬೇಸ್‌ ಮಾಡೆಲ್‌ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಮಾದರಿಗೆ ಸುಮಾರು 11,999 ರೂ. ಬೆಲೆ ಹೊಂದಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 8 ರಂದು ಭಾರತದಲ್ಲಿ ಲಾಂಚ್‌ ಆಗಬಹುದು ಎಂದು ಅಂದಾಜಿಸಲಾಗಿದೆ.

Best Mobiles in India

English summary
Nokia G10 Key Specs Revealed Ahead Of Official Launch.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+