ನೋಕಿಯಾ ಸಂಸ್ಥೆಯಿಂದ G ಮತ್ತು X ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌!

|

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಬಹು ನಿರೀಕ್ಷಿತ ನೋಕಿಯಾ C10, ನೋಕಿಯಾ C20, ನೋಕಿಯಾ G10, ನೋಕಿಯಾ G20, ನೋಕಿಯಾ X10, ಮತ್ತು ನೋಕಿಯಾ X20 ಅನ್ನು ನೋಕಿಯಾ ಬ್ರಾಂಡ್-ಲೈಸೆನ್ಸಿ ಎಚ್‌ಎಂಡಿ ಗ್ಲೋಬಲ್ ಆಯೋಜಿಸಿದ್ದ ವರ್ಚುವಲ್ ಈವೆಂಟ್‌ನಲ್ಲಿ ಲಾಂಚ್‌ ಮಾಡಿದೆ.

ನೋಕಿಯಾ

ಹೌದು, ನೋಕಿಯಾ ಸಂಸ್ಥೆ ತನ್ನ ಹೊಸ ನೋಕಿಯಾ ಸಿ-ಸರಣಿ, ನೋಕಿಯಾ ಜಿ-ಸರಣಿ, ನೋಕಿಯಾ X-ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ನಕಿಯಾ ಸಿ ಸರಣಿ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದರೆ, ನೋಕಿಯಾ ಜಿ ಸರಣಿ ಮಧ್ಯ ಶ್ರೇಣಿಯ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಸಿ ಸರಣಿ ಸ್ಮಾರ್ಟ್‌ಫೋನ್‌ಗಳು ಉನ್ನತ ಶ್ರೇಣಿಯಲ್ಲಿ ಬರಲಿವೆ. ಇದರಲ್ಲಿ ನೋಕಿಯಾ G10, ನೋಕಿಯಾ G20, ನೋಕಿಯಾ X10, ಮತ್ತು ನೋಕಿಯಾ X20 ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಹಾಗಾದ್ರೆ ನೋಕಿಯಾ G10, ನೋಕಿಯಾ G20, ನೋಕಿಯಾ X10, ಮತ್ತು ನೋಕಿಯಾ X20 ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೋಕಿಯಾ G10 ಸ್ಮಾರ್ಟ್‌ಫೋನ್‌

ನೋಕಿಯಾ G10 ಸ್ಮಾರ್ಟ್‌ಫೋನ್‌

ನೋಕಿಯಾ G10 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 25 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 32GB, 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ,ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. 5,000mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ, ಎಫ್ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ.

ನೋಕಿಯಾ G20 ಸ್ಮಾರ್ಟ್‌ಫೋನ್‌

ನೋಕಿಯಾ G20 ಸ್ಮಾರ್ಟ್‌ಫೋನ್‌

ನೋಕಿಯಾ G20 ಸ್ಮಾರ್ಟ್‌ಫೋನ್‌ ಕೂಡ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಇದು 4GB RAM ಅನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ 802.11, ಬ್ಲೂಟೂತ್ ವಿ 5.0, ಎನ್ಎಫ್‌ಸಿ, ಎಫ್ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ.

ನೋಕಿಯಾ X10 ಸ್ಮಾರ್ಟ್‌ಫೋನ್‌

ನೋಕಿಯಾ X10 ಸ್ಮಾರ್ಟ್‌ಫೋನ್‌

ನೋಕಿಯಾ X10 ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು 6GB RAM ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,470mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್, ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ನೋಕಿಯಾ X20

ನೋಕಿಯಾ X20

ನೋಕಿಯಾ X20 ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದ್ದು, 450 ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತಗೆ ಇದು 8GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 4470mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಎನ್‌ಎಫ್‌ಸಿ, ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ನೋಕಿಯಾ G10 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 3GB RAM + 32GB ಇಂಟರ್‌ ಸ್ಟೋರೇಜ್‌ ಬೆಲೆ ಯುರೋ 139 (ಸರಿಸುಮಾರು ರೂ. 12,300) ನಿಂದ ಪ್ರಾರಂಭವಾಗುತ್ತದೆ. ಇನ್ನು ನೋಕಿಯಾ G20 ಬೆಲೆ 4GB RAM + 64GB ಶೇಖರಣಾ ಮಾದರಿಗೆ ಯುರೋ 159 (ಸರಿಸುಮಾರು ರೂ. 14,000) ನಿಂದ ಪ್ರಾರಂಭವಾಗುತ್ತದೆ.
ಇದಲ್ಲದೆ ನೋಕಿಯಾ X10 ಬೆಲೆ ಯುರೋ 309 ರಿಂದ ಪ್ರಾರಂಭವಾಗುತ್ತದೆ (ಸರಿಸುಮಾರು ರೂ. 27,400). ಈ ಸ್ಮಾರ್ಟ್‌ಫೋನ್‌ 6 GB RAM + 64GB ಸ್ಟೊರೇಜ್‌, 6GB RAM + 128GB, ಮತ್ತು 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರುತ್ತದೆ. ಇನ್ನು ನೋಕಿಯಾ X20 ಯುರೋ 349 ರಿಂದ ಪ್ರಾರಂಭವಾಗುತ್ತದೆ (ಸರಿಸುಮಾರು 31,000 ರೂ.). ಇದು 6GB RAM + 128GB ಸಂಗ್ರಹ ಮತ್ತು 8GB RAM + 128GB ಸಂಗ್ರಹ ಆಯ್ಕೆಗಳನ್ನು ಹೊಂದಿದೆ.

Best Mobiles in India

English summary
Nokia G10, Nokia G20, Nokia X10, Nokia X20 Phones Launched.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X