Home
ಸುದ್ದಿಜಾಲ

ಭಾರತದಲ್ಲಿ ಬಜೆಟ್‌ ಬೆಲೆಯ ನೋಕಿಯಾ G10 ಸ್ಮಾರ್ಟ್‌ಫೋನ್‌ ಲಾಂಚ್‌!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ನೋಕಿಯಾ ಕಂಪೆನಿ ಮತ್ತೊಂದು ಬಜೆಟ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈಗಾಗಲೇ ಹಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ನೋಕಿಯಾ ಇದೀಗ ಹೊಸ ನೋಕಿಯಾ G10 ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ನೋಕಿಯಾ G10 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಎಐ ಮೋಡ್‌ ಅನ್ನು ಒಳಗೊಂಡಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ G10 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 5,050mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM + 64GB ಶೇಖರಣಾ ರೂಪಾಂತರದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್‌ ಆರಂಬಿಕ ಬೆಲೆ 12,149ರೂ ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ನೋಕಿಯಾ G10 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ವಾಟರ್ ಡ್ರಾಪ್ ಶೈಲಿಯ ನಾಚ್ ಹೊಂದಿದೆ. ಈ ಡಿಸ್‌ಪ್ಲೇ 81.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ನೋಕಿಯಾ G10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ನಲ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವೆರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ನೋಕಿಯಾ G10 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಸೇರಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್ ಜೊತೆಗೆ AI ಕ್ಯಾಮೆರಾ ಫೀಚರ್ಸ್‌ಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ G10 ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4 ಜಿ, ಬ್ಲೂಟೂತ್ ವಿ 5, ಜಿಪಿಎಸ್, ಎನ್‌ಎಫ್‌ಸಿ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜ್ ಮಾಡಲು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ G10 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ಆಯ್ಕೆಗೆ 12,149ರೂ ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಭಾರತದ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್‌ನಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ನೋಕಿಯಾ ಸ್ಮಾರ್ಟ್‌ಫೋನ್‌ ಖರೀದಿಸುವಾಗ ಆಫರ್‌ ನೀಡುವುದಕ್ಕಾಗಿ ಜಿಯೋ ಜೊತೆ ಪಾಲುದಾರಿಕೆ ಹೊಂದಿದೆ. ಜಿಯೋ ಚಂದಾದಾರರು 10% "ತ್ವರಿತ ಬೆಲೆ ಬೆಂಬಲ" ಪಡೆಯಬಹುದು. ಇನ್ನು 249ರೂ ಇಲ್ಲವೇ ಅದಕ್ಕಿಂತ ಹೆಚ್ಚಿನ ಪ್ಲಾನ್‌ ರೀಚಾರ್ಜ್ ಮಾಡುವ ಜಿಯೋ ಬಳಕೆದಾರರು ಈ ಆಫರ್‌ಗಳನ್ನು ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತಾರೆ.

Best Mobiles in India

English summary
Nokia G10 has been launched in India as the latest budget-friendly offering from Nokia brand licensee HMD Global.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+