Home
ಸುದ್ದಿಜಾಲ

Nokia: ನೋಕಿಯಾ ಫೋನ್ ಪ್ರಿಯರಿಗೆ ಗುಡ್‌ ನ್ಯೂಸ್‌: ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ನೋಕಿಯಾದ (Nokia) ಸ್ಮಾರ್ಟ್‌ಫೋನ್‌ ಖರೀದಿ ಮಾಡುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಬಜೆಟ್‌ ಬೆಲೆಯಲ್ಲಿ ಉತ್ತಮ ಫೋನ್‌ ಬೇಕು ಅನ್ನೋರಿಗೆ ಇವು ಎಲ್ಲಾ ರೀತಿಯಲ್ಲೂ ಅನುಕೂಲಕರವಾಗಿವೆ. ಅದರಂತೆ ನೋಕಿಯಾದ ಈ ಬಜೆಟ್‌ ಬೆಲೆಯ ಫೋನ್‌ಗೆ ಆಫರ್ ನೀಡಲಾಗಿದೆ.

ಹೌದು, ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ (Nokia G11 Plus smartphone) ಇದೀಗ ಭಾರೀ ಆಫರ್ ನಲ್ಲಿ ಲಭ್ಯ ಇದೆ. ಈ ಫೋನ್ 4 GB RAM ಆಯ್ಕೆಯೊಂದಿಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರ ಎಷ್ಟು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ನೋಕಿಯಾ ಫೋನ್ ಪ್ರಿಯರಿಗೆ ಗುಡ್‌ ನ್ಯೂಸ್‌: ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 13,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು ಕೇವಲ 7,739 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್ 44% ರಿಯಾಯಿತಿ ಪಡೆದುಕೊಂಡಿದೆ. ಇದರ ಜೊತೆಗೆ ನೀವು ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ಅನ್ನು ಖರೀದಿ ಮಾಡಬಹುದು.

ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಇಎಂಐ ವಹಿವಾಟುಗಳ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮತ್ತು ಇಎಮ್‌ಐ ವಹಿವಾಟುಗಳ ಮೇಲೆ 10% ರಿಯಾಯಿತಿ, ಸಿಗಲಿದ್ದು, ಈ ಮೂಲಕ ಹೆಚ್ಚುವರಿ 1250 ರಿಯಾಯಿತಿಯಲ್ಲಿ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಿದ್ರೆ ಈ ಫೋನ್‌ ಈ ಬೆಲೆಗೆ ಯೋಗ್ಯವೇ ಎಂದು ತಿಳಿಯಲು ಇದರ ಪ್ರಮುಖ ಫೀಚರ್ಸ್‌ ಕಡೆ ಕಣ್ಣಾಯಿಸಿ.

ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.52 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 90Hz ರಿಫ್ರೆಶ್‌ ರೇಟ್‌ ಹಾಗೂ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆಯಬಹುದಾಗಿದೆ. ಇದರೊಂದಿಗೆ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ, 82.1% ಸ್ಕ್ರೀನ್-ಟು-ಬಾಡಿ ಅನುಪಾತ, 269 ppi ಸಾಂದ್ರತೆಯೊಂದಿಗೆ ಉತ್ತಮ ಡಿಸ್‌ಪ್ಲೇ ಅನುಭವ ನೀಡಲಿದೆ.

ನೋಕಿಯಾ ಫೋನ್ ಪ್ರಿಯರಿಗೆ ಗುಡ್‌ ನ್ಯೂಸ್‌: ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಇನ್ನು ಈ ಫೋನ್ ಯುನಿಸಾಕ್ T606 (12 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಓಎಸ್‌ ಅನ್ನು ರನ್‌ ಮಾಡಲಿದೆ. ಅದಾಗ್ಯೂ ನೀವು ಆಂಡ್ರಾಯ್ಡ್ 13 ಗೆ ಅಪ್‌ಗ್ರೇಡ್ ಮಾಡಬಹುದು. ಇದರೊಂದಿಗೆ ಮಾಲಿ-G57 MP1 ಗ್ರಾಫಿಕ್ಸ್‌ ಕಾರ್ಡ್‌ ಅನ್ನು ಇದರಲ್ಲಿ ಕಾಣಬಹುದಾಗಿದೆ. ಅಂತೆಯೇ ಆಫರ್ ಬೆಲೆಯಲ್ಲಿ ಲಭ್ಯ ಇರುವ ಈ ಫೋನ್ 4GB RAM ಹಾಗೂ 64GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ ಇದೆ.

ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು , ಅದರಲ್ಲಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ ಸೆಕೆಂಡರಿ ಕ್ಯಾಮೆರಾ ಆಯ್ಕೆ ಇದೆ. ಈ ಕ್ಯಾಮೆರಾಗಳು ಎಲ್ಇಡಿ ಫ್ಲ್ಯಾಶ್ ಫೀಚರ್ಸ್‌ ಪಡೆದಿವೆ. ಜೊತೆಗೆ ಈ ಫೋನ್ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, 1080p@30fps ಸಾಮರ್ಥ್ಯದ ವಿಡಿಯೋಗಳನ್ನು ಇದರ ಮೂಲಕ ಸೆರೆಹಿಡಿಯಬಹುದು.

ನೋಕಿಯಾ ಫೋನ್ ಪ್ರಿಯರಿಗೆ ಗುಡ್‌ ನ್ಯೂಸ್‌: ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ನೋಕಿಯಾ G11 ಪ್ಲಸ್‌ ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್,ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, ಎಫ್‌ಎಮ್‌ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, OTG ಸೇರಿದಂತೆ ಇತರೆ ಕನೆಕ್ಟಿವಿಟಿ ಸೌಲಭ್ಯ ಪಡೆದುಕೊಂಡಿದೆ.

Best Mobiles in India

English summary
Nokia G11 Plus smartphone is now available on a huge offer. The phone has got a 50 megapixel main camera option along with 4 GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+